Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತಮ್ಮ ಸ್ಥಾನಕ್ಕೆ ರಾಜೀನಾಮೆ?

ಚಿಕ್ಕಬಳ್ಳಾಪುರ, (ಜೂನ್.5): ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯಲ್ಲಿ ಡಾ. ಕೆ.ಸುಧಾಕರ್ ಕಾಂಗ್ರೆಸ್‌ ಅಭ್ಯರ್ಥಿ ಎಂ.ಎಸ್.ರಕ್ಷಾರಾಮಯ್ಯ ವಿರುದ್ದ 1,62,099 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತಮ್ಮ ಸ್ಥಾನಕ್ಕೆ ಯಾವಾಗ ರಾಜೀನಾಮೆ ನೀಡುತ್ತಾರೆ ಎಂಬ ಚರ್ಚೆಗಳು ಜೋರಾಗಿಯೇ ಇದೆ. ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ಟ್ರೋಲ್ ಆಗುತ್ತಿದ್ದಾರೆ. ಇದರ ಮಧ್ಯೆ ಪ್ರದೀಪ್ ಈಶ್ವರ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. ಕಾರಣ ಅವರ ರಾಜೀನಾಮೆ ಪತ್ರವೊಂದು ವೈರಲ್ ಆಗಿದೆ.

ಏನೇ ಮಾಡಿದರೂ ಸುಧಾಕರ್ ಈ ಲೋಕಸಭಾ ಚುನಾವಣೆಯಲ್ಲೂ ಗೆಲ್ಲಲ್ಲ ಎಂದು ಪ್ರದೀಪ್ ಈಶ್ವರ್ ಭವಿಷ್ಯ ಹೇಳುತ್ತಲೇ ಬಂದಿದ್ದರು. ಪ್ರಚಾರ ಸಭೆಗಳಲ್ಲಿ, ಹೋದರಲ್ಲಿ ಬಂದಲ್ಲಿ ಇದೇ ಡೈಲಾಗ್ ಹೊಡೆಯುತ್ತಿದ್ದರು. ಅಲ್ಲದೇ ಇನ್ನೊಂದೆಜ್ಜೆ ಮುಂದೆ ಹೋಗಿ ಸುಧಾಕರ್ ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ಗಿಂತ ಒಂದೇ ಒಂದು ಹೆಚ್ಚು ಮತ ತೆಗೆದುಕೊಂಡರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಹಾಗೇ ರಾಜಕೀಯದಿಂದ ನಿವೃತ್ತಿಯಾಗುತ್ತೇನೆ ಎಂದು ಜೋಶ್ನಲ್ಲಿ ಸವಾಲು ಹಾಕಿದ್ದರು. ಆದ್ರೆ, ಇದೀಗ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲೇ 20,941 ಮತಗಳ ಮುನ್ನಡೆಯನ್ನು ಡಾ ಕೆ ಸುಧಾಕರ್‌ ಸಾಧಿಸಿದ್ದಾರೆ. ಇದು ನೆಲಮಂಗಲ ವಿಧಾನಸಭಾ ಕ್ಷೇತ್ರದ ಬಳಿಕ ಅತಿಹೆಚ್ಚು ಲೀಡ್‌ ಬಂದಿಉವುದು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲೇ.

ಪ್ರದೀಪ್ ಈಶ್ವರ್ ರಾಜೀನಾಮೆ ಯಾವಾಗ? ಎಂದು ಬಿಜೆಪಿ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸುತ್ತಿದ್ದಾರೆ. ಅಲ್ಲದೇ ಪ್ರದೀಪ್ ಈಶ್ವರ್ ಆಡಿದ್ದ ರಾಜೀನಾಮೆ ಮಾತಿನ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ಟ್ರೋಲ್ ಮಾಡಲಾಗುತ್ತಿದ್ದು, ಡೈಲಾಗ್ ಕಿಂಗ್ ರಾಜೀನಾಮೆ ಯಾವಾಗ ಅಂತೆಲ್ಲಾ ನೆಟ್ಟಿಗರು ಕೇಳುತ್ತಿದ್ದಾರೆ. ಇದರ ಮಧ್ಯೆ ಇದೀಗ ಪ್ರದೀಪ್ ಈಶ್ವರ್ ಅವರ ಹೆಸರಿನ ರಾಜೀನಾಮೆ ಪತ್ರವೊಂದು ವೈರಲ್ ಆಗಿದೆ. ಆದ್ರೆ, ಈ ಪತ್ರ ನಕಲಿ ಎಂದು ಸ್ವತಃ ಪ್ರದೀಪ್ ಈಶ್ವರ್ ಸ್ಪಷ್ಟಪಡಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ