ರಾಜೀನಾಮೆ ಸುಳಿವು ನೀಡಿದ ಕಾಂಗ್ರೆಸ್ ಶಾಸಕ ರಾಜು ಕಾಗೆ
ಬೆಳಗಾವಿ, ಜೂನ್ 23: ‘ಹಣ ನೀಡಿದವರಿಗಷ್ಟೇ ವಸತಿ ನಿಗಮದಲ್ಲಿ ಮನೆಗಳನ್ನು ಮಂಜೂರು ಮಾಡಲಾಗುತ್ತಿದೆ’ ಎಂಬ ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ್ ಬೆನ್ನಲ್ಲೇ ಇದೀಗ ಶಾಸಕ ರಾಜು ಕಾಗೆ ಹೊಸ ಬಾಂಬ್ ಸಿಡಿಸಿದ್ದಾರೆ. ಬಿ.ಆರ್. ಪಾಟೀಲ್ ಹೇಳಿದಂತೆ ಅದರ ಅಪ್ಪನ ಹಾಗೆ ನನ್ನ ಪರಿಸ್ಥಿತಿ ನಿರ್ಮಾಣ ಆಗಿದೆ ಎಂದು ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಕಾಂಗ್ರೆಸ್ ಶಾಸಕ ರಾಜು ಕಾಗೆ ತಮ್ಮದೇ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆಯಾಗದಿರುವುದಕ್ಕೆ ಮತ್ತು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. 25 ಕೋಟಿ ರೂ ಅನುದಾನ ಬಂದಿದ್ದರೂ ಕೆಲಸ ಆರಂಭವಾಗಿಲ್ಲ ಎಂದು ಅವರು ದೂರಿದ್ದಾರೆ. ರಾಜೀನಾಮೆ ನೀಡುವ ಬಗ್ಗೆಯೂ ಅವರು ಸುಳಿವು ನೀಡಿದ್ದಾರೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.