Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರತಿಯೊಂದು ಕಾಯ್ದೆ-ಕಾನೂನುಗಳಿಗೆ ಭದ್ರ ಬುನಾದಿ ಸಂವಿಧಾನ : ನ್ಯಾ.ಕೆ.ಜಿ ಶಾಂತಿ

ಬಳ್ಳಾರಿ,ಜ.27-ಪ್ರತಿಯೊಂದು ಕಾಯ್ದೆ-ಕಾನೂನುಗಳಿಗೆ ಭದ್ರ ಬುನಾದಿ ಎಂದರೆ ಅದು ಸಂವಿಧಾನವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ.ಶಾಂತಿ ಅವರು ಹೇಳಿದರು.
ನಗರದ ತಾಳೂರು ರಸ್ತೆಯ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಆವರಣದಲ್ಲಿ ಸೋಮವಾರ 77ನೇ ಗಣರಾಜ್ಯೋತ್ಸವ ದಿನಾಚರಣೆ ನಿಮಿತ್ತ ಧ್ವಜಾರೋಹಣ ನೆರವೇರಿಸಿ, ರಾಷ್ಟçಪಿತ ಮಹಾತ್ಮಾ ಗಾಂಧೀಜಿ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರಗಳಿಗೆ ಪುಷ್ಪರ್ಚಾನೆ ಸಲ್ಲಿಸಿ ಬಳಿಕ ಅವರು ಮಾತನಾಡಿದರು.
ಸಂವಿಧಾನ ಆಶಯದಡಿ ಪ್ರತಿಯೊಂದು ಕಾಯ್ದೆ ಮತ್ತು ಕಾನೂನುಗಳನ್ನು ರಚಿಸಲಾಗಿದೆ. ಹಾಗಾಗಿ ಪ್ರತಿಯೊಬ್ಬರೂ ಕಾನೂನನಡಿ ನಡೆದುಕೊಳ್ಳುವುದು. ಅವುಗಳನ್ನು ಗೌರವಿಸುವುದು ಪ್ರತಿಯೊಬ್ಬರ ಕಾಳಜಿ ಪರ ಕಾರ್ಯವಾಗಿದೆ ಎಂದರು.
ವಿಶ್ವದ ಅತ್ಯಂತ ಬೃಹತ್ ಲಿಖಿತ ಸಂವಿಧಾನವು ಭಾರತ ಸಂವಿಧಾನವಾಗಿದೆ. ಸಾಮಾಜಿಕ ನ್ಯಾಯ, ಸಾಮಾನತೆಯ ನ್ಯಾಯ, ಭಾತೃತ್ವ ಮತ್ತು ಸ್ವಾತಂತ್ರö್ಯ ನ್ಯಾಯವನ್ನು ಪ್ರಜೆಗಳಿಗೆ ಕಲ್ಪಿಸಿದೆ. ಸಂವಿಧಾನ ರಚನೆಗೆ ಕಾರಣೀಭೂತರಾದ ಮಹನೀಯರನ್ನು ಸ್ಮರಿಸಿ ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಅದರಲ್ಲಿ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಸದಾ ಸ್ಮರಿಸಲೇಬೇಕು ಎಂದು ಈ ಸಂದರ್ಭದಲ್ಲಿ ಹೇಳಿದರು.
ಸಂವಿಧಾನದ  ಮೂಲಭೂತ ಹಕ್ಕುಗಳಿಂದ ದೇಶದ ನಾಯಕನನ್ನು ಆಯ್ಕೆ ಮಾಡುವ ಅವಕಾಶ ನೀಡಿದೆ. ಅದನ್ನು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳುವುದು ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯ ಆಗಿದೆ. ಪ್ರತಿಯೊಬ್ಬರು ಗೌರವದಿಂದ ಜೀವಿಸುವ ಹಕ್ಕು ಹೊಂದಿದ್ದು, ಎಲ್ಲರು ಪರಸ್ಪರ ಗೌರವದಿಂದ ಕಾಣಬೇಕು ಎಂದರು.
ದೇಶದ ಯುವಜನರು ಬೆನ್ನೆಲುಬು ಇದ್ದಂತೆ. ಮಕ್ಕಳು ಆಸ್ತಿ, ಅವರಿಗೆ ಉತ್ತಮ ಮಾರ್ಗದರ್ಶನ ಮೂಲಕ ಪ್ರಜ್ಞಾವಂತರನ್ನಾಗಿ ಮಾಡುವುದು ಶಾಲಾ ಶಿಕ್ಷಕರು, ಪೋಷಕರ ಕರ್ತವ್ಯವಾಗಿದೆ. ಮತ್ತು ಪ್ರಜೆಗಳು ಕಾನೂನಿನ ನಿಯಮಗಳನ್ನು ಸರಿಯಾಗಿ ಪಾಲನೆ ಮಾಡಬೇಕು. ದೇಶದ ಪ್ರಗತಿಗೆ ಅಮೂಲ್ಯ ಕೊಡುಗೆ ನೀಡಲು ಅವರನ್ನು ಬೆಳೆಸಬೇಕು. ದೇಶದ ಪ್ರಗತಿಗೆ ಪಾಲುದಾರರಾಬೇಕು ಎಂದರು.
ನ್ಯಾಯಾಧೀಶರು, ವಕೀಲರು, ಸಿಬ್ಬಂದಿ ವರ್ಗ ಎಲ್ಲರೂ ಒಡಗೂಡು ನೊಂದವರಿಗೆ ಸಕಾಲದಲ್ಲಿ ನ್ಯಾಯ ದೊರಕಿಸಿಕೊಡುವ ಕರ್ತವ್ಯ ನಮ್ಮ ಮೇಲಿದೆ. ಬಡವರ, ನೊಂದವರ, ಅಸಹಾಯಕರಿಗೆ ಕಾನೂನು ನೆರವಿನಡಿ ಸಹಾಯ ಮಾಡುವ ಧರ್ಮ ಅಳವಡಿಸಿಕೊಳ್ಳೋಣ ಎಂದು ಕರೆ ನೀಡಿದರು.
ನ್ಯಾಯಾಧೀಶರು, ಅಧಿಕಾರಿ-ಸಿಬ್ಬಂದಿ ವರ್ಗ, ಆಧುನಿಕ ತಂತ್ರಜ್ಞಾನದ (ಎಐ) ಕುರಿತು ಅರಿವು ಹೊಂದಬೇಕು. ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡೋಣ, ದೇಶ ಕಟ್ಟುವ ಶಿಲ್ಪಿಗಳಾಗೋಣ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಈ ಸಂದರ್ಭದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಪಿ.ರಾಮಬ್ರಹ್ಮಂ, 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಜಿ.ಪ್ರಮೋದ, ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ರಾಘವೇಂದ್ರ ಗೌಡ.ಬಿ.ಜಿ., 3ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಡಿ.ಪಿ ಕುಮಾರ ಸ್ವಾಮಿ, 4ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ವಾಸುದೇವ ರಾಧಕಾಂತ್ ಗುಡಿ, ಪ್ರಿನ್ಸಿಪಲ್ ಕೌಟುಂಬಿಕ ನ್ಯಾಯಾಧೀಶರಾದ ವೆಂಕಟೇಶ್, ಪ್ರಿನ್ಸಿಪಲ್ ಹಿರಿಯ ಸಿವಿಲ್ ನ್ಯಾಯಾಧೀಶರಾದ ಇಬ್ರಾಹಿಂ ಮುಜಾವರ್, ಒಂದನೇ ಅಪರ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ನಸ್ರತ್ ಮುಖ್ತಾರ್ ಅಹ್ಮದ್ ಖಾನ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜೇಶ್.ಎನ್.ಹೊಸಮನೆ, ಪ್ರಿನ್ಸಿಪಲ್ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶರಾದ ನಾಗೇಶ್ ನಾಯ್ಕ, 1ನೇ ಅಪರ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶರಾದ ಸಿದ್ದಲಿಂಗಯ್ಯ ಗಂಗಾಧರ ಮಠ, 2ನೇ ಅಪರ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶರಾದ ವಿನುತಾ ಬಿ.ಎಸ್., 3ನೇ ಅಪರ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶರಾದ ಮುದುಕಪ್ಪ ಒಡನ್ ಸೇರಿದಂತೆ ಜಿಲ್ಲಾ ನ್ಯಾಯಾಲಯದ ಅಧಿಕಾರಿ-ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*