Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾರ್ಮಿಕರ ಮಕ್ಕಳಿಗೆ ಶ್ರಮಿಕ ವಸತಿ ಶಾಲಾ ಕಟ್ಟಡ ನಿರ್ಮಾಣ : ಯಶವಂತರಾಯಗೌಡ ವ್ಹಿ ಪಾಟೀಲ್

ಇಂಡಿ : ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ಶ್ರಮಿಕ ವಸತಿ ಶಾಲಾ ಕಟ್ಟಡ ನಿರ್ಮಾಣ ಅಂದಾಜು ೩೪ ಕೋಟಿ ೫ ಲಕ್ಷ ರೂಪಾಯಿಗಳ ವೆಚ್ಚದಲ್ಲಿ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಹಳಗುಣಕಿ ಗ್ರಾಮದಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಶ್ರಮಿಕ ವಸತಿ ಶಾಲಾ ಕಟ್ಟಡ ನಿರ್ಮಾಣ ( ೬ ರಿಂದ ೧೨ ನೇ ತರಗತಿಯವರೆಗೆ) ಭೂಮಿ ಪೂಜಾ ಕಾರ್ಯಕ್ರಮವು ದಿನಾಂಕ ೦೯/೦೫/೨೦೨೬ ರಂದು ಸಾಯಂಕಾಲ ೦೫ ಗಂಟೆಗೆ ಇಂಡಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ  ಯಶವಂತರಾಯಗೌಡ ವ್ಹಿ ಪಾಟೀಲ್ ಇವರ ಅಮೃತ ಹಸ್ತದಿಂದ ನೆರವೇರಿತು

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾನ್ಯ ಶಾಸಕರು ಮಾತನಾಡುತ್ತಾ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಹಳಗುಣಕಿ ಗ್ರಾಮದ ವ್ಯಾಪ್ತಿಯಲ್ಲಿ ಸ್ವಚ್ಛ ಸುಂದರವಾದ ಸುಮಾರು ಐದು ಎಕರೆ ವ್ಯಾಪ್ತಿಯಲ್ಲಿ ಸುಸಜ್ಜಿತವಾದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಎಲ್ಲ ಮೂಲಭೂತ ಸೌಕರ್ಯಗಳನ್ನು ಒಳಗೊಂಡ ಸುಂದರ ವಸತಿ ನಿಲಯ ನಿರ್ಮಾಣವಾಗುತ್ತಿದ್ದು ಇದರ ಸದುಪಯೋಗ ಎಲ್ಲಾ ಕಾರ್ಮಿಕರ ಪಡೆದುಕೊಂಡು ತಮ್ಮ ಮಕ್ಕಳ ಉಜ್ವಲ ಭವಿಷ್ಯದ ಕನಸನ್ನು ಸಾಕಾರಗೊಳಿಸಬೇಕೆಂದು ತಿಳಿ ಹೇಳಿದರು  ಗುತ್ತಿಗೆದಾರರಿಗೆ ಒಂದು ವರ್ಷದ ಒಳಗೆ ಈ ಕಟ್ಟಡವನ್ನು ನಿರ್ಮಾಣ ಮಾಡಿ ಉದ್ಘಾಟನೆಗೆ ನೀಡಬೇಕೆಂದು ಹೇಳಿದರು ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿಯಾದ ಶ್ರೀಮತಿ ಉಮಾಶ್ರೀ ಕೋಳಿ ಅವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ ವಸತಿ ನಿಲಯದ ಸದುಪಯೋಗ ಮತ್ತು ಕಾರ್ಮಿಕ ಇಲಾಖೆ ಮಂಡಳಿಯ ವಿವಿಧ ಯೋಜನೆಗಳ ಕುರಿತ್ತು ವಿವರಿಸಿ ಪ್ರಯೋಜನ ಪಡೆದುಕೊಳ್ಳಬೇಕೆಂದು ತಿಳಿಸಿದರು ಈ ಕಾರ್ಯಕ್ರಮದಲ್ಲಿ ಕಾರ್ಮಿಕ ನಿರೀಕ್ಷಕರಾದ ಡಿ ಎಮ್  ದೇವರಮನಿ  ಹಾಗೂ ಇಂಡಿ ತಾಲ್ಲೂಕಿನ ತಹಶೀಲ್ದಾರರು ಇ ಓ  ಸಾಹೇಬರು ಹಾಗೂ ಕಾರ್ಮಿಕ ಸಂಘಟನೆಗಳು ಪದಾಧಿಕಾರಿಗಳು ಹಳಗುಣಕಿ ಹಾಗೂ ಬಬಲಾದ ಗ್ರಾಮದ ಗ್ರಾಮಸ್ಥರು ಉಪಸ್ಥಿತರಿದ್ದರು

 

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ