ಈ ಮಧ್ಯೆ, ಈರುಳ್ಳಿ ಬೆಲೆ ಏರಿಕೆಯಾಗುತ್ತಲೇ ಇದ್ದು ಗ್ರಾಹಕರಿಗೆ ಕಣ್ಣಿರಿಳಿಸುತ್ತಿದೆ. ಸದ್ಯ ರಾಜ್ಯದಲ್ಲಿ ಮಳೆ ತಗ್ಗಿದೆ. ಆದರೂ ಕಳೆದ ತಿಂಗಳು ಬಂದಂತಹ ಅಕಾಲಿಕ ಮಳೆಗೆ ಈರುಳ್ಳಿ ಬೆಳೆ ನೀರುಪಾಲಾಗಿದ್ದು, ಮಳೆಯಿಂದ ರಕ್ಷಿಸಿದ ಈರುಳ್ಳಿ ಇಟ್ಟಲ್ಲೇ ಕೊಳೆತು ಹೋಗುತ್ತಿದೆ. ಹೀಗಾಗಿ ದರ ಏರಿಕೆಯಾಗಿದೆ. ಕೆಜಿಗೆ 50 ರೂ. ಇದ್ದ ಈರುಳ್ಳಿಯ ಬೆಲೆ ಇದೀಗಾ 60 ರಿಂದ 80 ರೂಪಾಯಿ ವರೆಗೆ ಏರಿಕೆಯಾಗಿದೆ.
ಈರುಳ್ಳಿ ಬೆಲೆ ಏರಿಕೆಗೆ ಕಾರಣವೇನು: ಕಳೆದ ಮೂರು ತಿಂಗಳಿನಿಂದ ಈರುಳ್ಳಿಯ ಬೆಲೆ ಏರಿಕೆಯಾಗುತ್ತಲೇ ಇದೆ. ಮಳೆ ಇಲ್ಲದಿದ್ದರೂ ಬೆಲೆ 70 ರ ಗಡಿ ದಾಟಿದೆ. ಕಳೆದ ತಿಂಗಳು ಸುರಿದ ಭಾರಿ ಮಳೆಯ ಪರಿಣಾಮ ನಿರೀಕ್ಷೆಯಷ್ಟು ಈರುಳ್ಳಿ ಮಾರುಕಟ್ಟೆಗೆ ಬಂದಿಲ್ಲ. ಬಂದಂತಹ ಅಲ್ಪಸ್ವಲ್ಪ ಈರುಳ್ಳಿಯ ಗುಣಮಟ್ಟವೂ ಚೆನ್ನಾಗಿಲ್ಲ. ಹೀಗಾಗಿ ಸದ್ಯ ಈರುಳ್ಳಿಯನ್ನು ಮಹಾರಾಷ್ಟದಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಆದರೆ, ಮಹಾರಾಷ್ಟ್ರದಿಂದಲೂ ನಿರೀಕ್ಷಿತ ಪ್ರಮಾಣದಲ್ಲಿ ಈರುಳ್ಳಿ ಪೂರೈಕೆಯಾಗುತ್ತಿಲ್ಲ. ಇದು ಬೆಲೆ ಏರಿಕೆಗೆ ಮುಖ್ಯ ಕಾರಣವಾಗಿದೆ.