Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಚ್ಚುಗತ್ತಿಯ ಬಂಟನ ಬಲ್ಲರೇನ  ಚೋಮನದುಡಿಯ ಮುಂದುವರಿಕೆ



        ಜ್ಘಾನಪೀಠ ಪ್ರಶಸ್ತಿ ವಿಜೇತ ಡಾ.ಶಿವರಾಮಕಾರಂತರ ಕೃತಿ ’ಚೋಮನದುಡಿ’ ಚಿತ್ರವಾಗಿ ಮೂಡಿಬಂದು ರಾಜ್ಯ ಹಾಗೂ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿತ್ತು. ಈಗ ಬರೋಬ್ಬರಿ ಐವತ್ತು ವರ್ಷಗಳ ನಂತರ ಇದೇ ಸಿನಿಮಾ ನೆನಪಿಸುವ 'ಬಿಚ್ಚುಗತ್ತಿಯ ಬಂಟನ ಬಲ್ಲರೇನ' ಚಿತ್ರವೊಂದು ತೆರೆಗೆ ಬರಲು ಅಣಿಯಾಗಿದೆ.

     ’ದುಡಿಯ ಸದ್ದಿಗೆ ಕ್ರಾಂತಿಯ ಎದ್ದಿದೆ’ ಎಂಬ ತೂಕದ ಅಡಿಬರಹ ಇರಲಿದೆ. ದೋರಸಮುದ್ರ ಪಿಕ್ಚರ‍್ಸ್ ಬ್ಯಾನರ್ ಅಡಿಯಲ್ಲಿ ಅನಿಲ್ ದೋರಸಮುದ್ರ ನಿರ್ದೇಶನದ ಜೊತೆ ಬಂಡವಾಳ* ಹೂಡಿದ್ದಾರೆ. ಸಹೋದರ ನವೀನ್ ಸಿಂಬಾವಿ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ.

       ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಎಸ್‌ಆರ್‌ವಿ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು. ’ಚೋಮನದುಡಿ’  ಚಿತ್ರದಲ್ಲಿ ಅಭಿನಯಿಸಿದ್ದ ಹಿರಿಯ ನಟ ಸುಂದರ್‌ರಾಜ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಹಳೆಯ ನೆನಪುಗಳನ್ನು ಮೆಲುಕು ಹಾಕಿದರು.

      ಕಾಳನಾಗಿ ಚೆಲುವರಾಜ್‌ಗೌಡ, ಬಾಸುಮ ಕೊಡಗು, ಸ್ವೀಡಲ್ ಡಿಸೋಜಾ, ಶೈಲೇಶ್ ಕೆಂಗೇರಿ, ತಾರಾನಾಥ ಬೋಳಾರ್, ಪುಣ್ಯಕೊಟ್ಯಾನ್, ಗೋಪಾಲ್ ಮೂಲ್ಯ ಮುಂತಾದವರು ಅಭಿನಯಿಸಿದ್ದಾರೆ. ಕಾರ್ಯಕಾರಿ ನಿರ್ಮಾಪಕ ರಾಘವಸೂರ್ಯ, ಪ್ರದ್ಯಮ್ನ ನರಹಳ್ಳಿ-ದೀಪಕ್ ಕೋಟ್ಯಾನ್ ಸಾಹಿತ್ಯಕ್ಕೆ ಶ್ರೀಶಾಸ್ತ ಸಂಗೀತ ಸಂಯೋಜಿಸಿದ್ದಾರೆ. ಛಾಯಾಗ್ರಹಣ ಲ್ಯಾಮರಿಂಜ್ ನಿರ್ಮಲ್, ಸಂಕಲನ ಅನಿಲ್.ಡಿ-ಮಾವಿನ್ ಜೋಯಿಲ್ ಪಿಂಟೋ ಅವರದಾಗಿದೆ. ಕಾರ್ಕಳ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಅಂದಹಾಗೆ ಸಿನಿಮಾವು ಇದೇ ತಿಂಗಳು ಜನರಿಗೆ ತೋರಿಸಲು ಸಜ್ಜಾಗಿದೆ.

        ನಿರ್ದೇಶಕರು ಹೇಳುವಂತೆ "ಒಂದಾನೊಂದು ಕಾಲದಲ್ಲಿ’ ಬರುವ ಹಾಡಿನ ಸಾಲು ಸೌಂಡಿಂಗ್ ಆಗಿರುವುದರಿಂದ ಅದನ್ನೆ  ಶೀರ್ಷಿಕೆಯಾಗಿ ಬಳಸಲಾಗಿದೆ. ನಮ್ಮ ಸಿನಿಮಾವು ಚೋಮನದುಡಿಯ ಮುಂದುವರಿದ ಭಾಗ ಎನ್ನಬಹುದು. ಮಂದಗಾಮಿ ಚೋಮ ಹೋರಾಟ ಮಾಡಿದರೂ ಭೂಮಿ ಸಿಗುವುದಿಲ್ಲ. ಆತನ ಮಗ ಕಾಳ ನ್ಯಾಯಕ್ಕಾಗಿ ತೀವ್ರಗಾಮಿಯಾಗಿ ಬಿಚ್ಚುಗತ್ತಿಯನ್ನು ಉಪಯೋಗಿಸಿದಾಗ ಏನಾಗುತ್ತದೆ. ಅಂತಿಮವಾಗಿ ಅಪ್ಪನ ಆಸೆಯನ್ನು ಕಾಳ ಮತ್ತು ಬೆಳ್ಳಿ ಈಡೇರಿಸಿಕೊಳ್ಳುತ್ತಾರಾ ಎಂಬುದನ್ನು ಕಮರ್ಷಿಯಲ್ ರೂಪದಲ್ಲಿ ತೋರಿಸುವ ಪ್ರಯತ್ನ ಮಾಡಲಾಗಿದೆ. ಚಿತ್ರವನ್ನು ಕಾರಂತ ಟ್ರಸ್ಟ್‌ನವರು  ನೋಡಿ ಆರ್ಶಿವರಿಸಿದ್ದಾರೆ. ಭಾವಗಳ ತೀವ್ರತೆಯನ್ನು ಅಚ್ಚುಕಟ್ಟಾಗಿ ಸೆರೆಹಿಡಿಯಲಾಗಿದೆ. ಚೋಮನ ಪಾತ್ರ ಶೇಕಡ ಇಪ್ಪತ್ತರಷ್ಟು ಬರುತ್ತದೆ" ಎಂದು ಅನಿಲ್ ದೊರಸಮುದ್ರ ಮಾಹಿತಿ ನೀಡಿದರು.

      "ಚೋಮನದುಡಿ’ ಎರಡನೇ ಚಿತ್ರ. ಅಂದು ಬಿ.ವಿ.ಕಾರಂತ್ ಇಬ್ಬರು ನಿರ್ದೇಶನ ಮಾಡಿದ್ದರು. ಇಂದಿನ ತಲೆಮಾರಿಗೆ ಅರ್ಥವಾಗುವಂತೆ ಸಿನಿಮಾ ಮಾಡಿದ್ದಾರೆ. ಯುವ ಪ್ರತಿಭೆಗಳು ಮತ್ತೆ ಇಂತಹ ವಿಷಯವನ್ನು ತೆಗೆದುಕೊಂಡಿರುವುದು ಸಾಮಾನ್ಯದ ಮಾತಲ್ಲ. ಅವರು ತಪ್ಪು ಮಾಡಿದ್ದರೆ ಕ್ಷಮಿಸಿ ಬಿಡಿ. ದಯವಿಟ್ಟು ಬೆಳೆಸಿ" ಎಂದು ಸುಂದರ್‌ರಾಜ್ ಮಾಧ್ಯಮದವರನ್ನು ಕೋರಿಕೊಂಡರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*