Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಸಿದ್ದರಾಮಯ್ಯ ಅವರು ಸಕ್ರಿಯ ರಾಜಕಾರಣದಲ್ಲಿ ಮುಂದುವರಿಕೆ, ಚುನಾವಣೆಗೆ ಸ್ಪರ್ದಿಸಲ್ಲ : ಸಚಿವ ಯತೀಂದ್ರ ಸಿದ್ದರಾಮಯ್ಯ. 

 

?ಬೆಳಗಾವಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ  ಎಂದು ಹೇಳಿರುವುದನ್ನು ಚುನಾವಣಾ ರಾಜಕೀಯದಿಂದ ನಿವೃತ್ತಿ ಎಂದು ಅರ್ಥೈಸಬಾರದು ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದರು.  

ಸಚಿವರಾದ ಬಳಿಕ ಬೆಳಗಾವಿಗೆ ಮೊದಲ ಭಾರಿ ಆಗಮಿಸಿದ ಅವರು, ಮಂಗಳವಾರ ನಗರದ  ಸರ್ಕಿಟ್ ಸೌಟ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  "ಸಿದ್ದರಾಮಯ್ಯನವರು ಮುಂದಿನ ಚುನಾವಣೆಗೆ ಸ್ಪರ್ಧಿಸದೇ ಇರಬಹುದು. ಆದರೆ, ಸಕ್ರಿಯ ರಾಜಕಾರಣದಲ್ಲಿದ್ದುಕೊಂಡು ದುರ್ಬಲರು ಹಾಗೂ ಶೋಷಿತರ ಪರವಾಗಿ ಧ್ವನಿ ಎತ್ತುವ ಕೆಲಸವನ್ನು ಮುಂದುವರಿಸಲಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಅವರು ಖಂಡಿತವಾಗಿ ಪ್ರಚಾರ ನಡೆಸಲಿದ್ದಾರೆ," ಎಂದು ಹೇಳಿದರು.

*?ಸಂಪುಟ ವಿಸ್ತರಣೆ  ಬಗ್ಗೆ ಮಾತು  ಮತ್ತು ನಗರಾಭಿವೃದ್ಧಿ ಪರಿಶೀಲನೆ:*
ಸಂಪುಟ ವಿಸ್ತರಣೆಯ ಕುರಿತು ಪ್ರತಿಕ್ರಿಯಿಸಿದ ಅವರು, "ಹೈಕಮಾಂಡ್ ಮುಖ್ಯಮಂತ್ರಿಯವರನ್ನು ದೆಹಲಿಗೆ ಕರೆದಿದ್ದು, ಚರ್ಚೆಯ ನಂತರ ಸೂಕ್ತ ತೀರ್ಮಾನ ಕೈಗೊಂಡು ಸಂಪುಟ ವಿಸ್ತರಣೆ ಮಾಡಲಾಗುವುದು," ಎಂದರು. ನಗರಾಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆಗಾಗಿ ಬೆಳಗಾವಿಗೆ ಆಗಮಿಸಿದ್ದು, ಮಹಾನಗರ ಪಾಲಿಕೆ ಹಾಗೂ ಬೆಳಗಾವಿ ನಗರಾಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸುವುದಾಗಿ ತಿಳಿಸಿದರು.
*? ರಸ್ತೆ ದುರಸ್ತಿಗೆ ಅನುದಾನ *
ಬೆಳಗಾವಿ ಮಹಾನಗರ ಪಾಲಿಕೆಗೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಸ್ಥಗಿತಗೊಂಡಿರುವ ಕುರಿತು ಕೇಳಿದ ಪ್ರಶ್ನೆಗೆ, ಈ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಪರಿಶೀಲಿಸುವುದಾಗಿ ತಿಳಿಸಿದ ಅವರು, ಚುನಾಯಿತ ಪ್ರತಿನಿಧಿಗಳ ಆಡಳಿತವಿಲ್ಲದ ಸ್ಥಳಗಳಿಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಅನುದಾನ ಬರುತ್ತದೆ ಎಂದರು.

?ಸ್ಮಾರ್ಟ್ ಸಿಟಿ ಯೋಜನೆಯಡಿ ಎಲ್ ಆಂಡ್ ಟಿ ಕಂಪನಿಯು ೨೪೭ ಕುಡಿಯುವ ನೀರಿನ ಯೋಜನೆಗಾಗಿ ರಸ್ತೆಗಳನ್ನು ಅಗೆದು ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, "ರಸ್ತೆಗಳನ್ನು ಅಗೆದವರೇ ಅವುಗಳನ್ನು ಸಮರ್ಪಕವಾಗಿ ದುರಸ್ತಿ ಮಾಡಬೇಕು. ಈ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ಸೂಚನೆ ನೀಡಲಾಗುವುದು," ಎಂದು ಭರವಸೆ ನೀಡಿದರು. ಅಲ್ಲದೆ, ಜಿಲ್ಲೆಯ ಅಗತ್ಯಗಳನ್ನು ಪರಿಶೀಲಿಸಿ ರಾಜ್ಯ ಸರ್ಕಾರದಿಂದ ಅಗತ್ಯ ಅಭಿವೃದ್ಧಿ ನೆರವು ದೊರಕಿಸಲು ಶ್ರಮಿಸುವುದಾಗಿ ತಿಳಿಸಿದರು.
 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾನೂನು ಶಿಕ್ಷಣವು ನ್ಯಾಯಯುತ ಸಮಾಜ ನಿರ್ಮಾಣದ ಪ್ರಮುಖ ಸಾಧನ: ಹಿರಿಯ ನ್ಯಾಯವಾದಿ ಕೆ.ಎಲ್. ಪಾಟೀಲ’ನನ್ನ ದೇಹ, ನನ್ನ ಸುರಕ್ಷತೆ’ ಪರಿಕಲ್ಪನೆಯಡಿ ಮಕ್ಕಳಿಗೆ ಜಾಗೃತಿ ಮೂಡಿಸಿದ ಸಂಪನ್ಮೂಲ ವ್ಯಕ್ತಿಗಳು "ಫಲಾಪೇಕ್ಷೆಯಿಲ್ಲದ ಕಾರ್ಯ ಶ್ಲಾಘನೀಯ" -ಶ್ರೀಗುರುಸಿದ್ದೇಶ್ವರ ಶ್ರೀದೇಶನೂರ ಬಂಗಲೆ ರಸ್ತೆ, ದೇವಸ್ಥಾನದ ಅಭಿವೃದ್ಧಿ ಆದಷ್ಟು ಬೇಗ  ಪ್ರಾರಂಭ : ಬಾಬಾಸಾಹೇಬ ಪಾಟೀಲ ಹತ್ತರಗಿ : ದೀಪ ಸಂಜೀವಿನಿ ಉತ್ಪನ್ನಗಳ ಮಳಿಗೆ ಉದ್ಘಾಟನೆ,"ನಾಡು ನುಡಿ, ಗಡಿ ವಿಚಾರದಲ್ಲಿ ಒಗ್ಗಟ್ಟಿನಿಂದ ಶ್ರಮಿಸಿ  / ನಾಡು ನುಡಿಯ ರಕ್ಷಣೆಗೆ ಪ್ರತಿಯೊಬ್ಬ ಕನ್ನಡಿಗ ಮುಂದಾಗಬೇಕು"  *ಶಾಲಾ ದಾಖಲಾತಿಯಲ್ಲಿ ಗಣನೀಯ ಏರಿಕೆ: ಸರ್ಕಾರಿ ಶಾಲೆಗಳತ್ತ ಪೋಷಕರ ಒಲವು*ವಕೀಲರ ಸಂರಕ್ಷಣೆಯ ಕಾಯ್ದೆ ಪರಿಣಾಮಕಾರಿ ಜಾರಿಗೆ ಸವದತ್ತಿ ವಕೀಲರ ಸಂಘದಿಂದ ರಾಜ್ಯ ಸರ್ಕಾರಕ್ಕೆ ಮನವಿ  ಇಂಡಿ: ಸಿದ್ದೇಶ್ವರ ಸ್ವಾಮೀಜಿ ಮಳಿಗೆಗಳ ಬಹಿರಂಗ ಹರಾಜು – ಶಾಸಕ ಯಶವಂತರಾಯಗೌಡ ಪಾಟೀಲ ಚಾಲನೆವಿದ್ಯುತ್‌ ಸಮಸ್ಯೆಗಳಿಗೆ ಶೀಘ್ರ ಪರಿಹರಿಸಲು ಆಗ್ರಹಿಸಿ ಅನಿರ್ದಿಷ್ಟ ಹೋರಾಟ