Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಈಗಿನ ಸರ್ಕಾರದಲ್ಲಿ ಗುತ್ತಿಗೆ ಕಮಿಷನ್ ದುಪ್ಪಟ್ಟಾಗಿದೆ; ಗುತ್ತಿಗೆದಾರರ ಸಂಘ ಗಂಭೀರ ಆರೋಪ

ಬೆಂಗಳೂರು, ಸೆಪ್ಟೆಂಬರ್ 30: ವಿಧಾನಸಭೆ ಚುನಾವಣೆಗೂ ಮೊದಲು ಕಾಂಗ್ರೆಸ್ ಪಕ್ಷದ ಪಾಲಿಗೆ ದೇವರಂತೆ ಭಾಸವಾಗಿದ್ದ ಕರ್ನಾಟಕ ರಾಜ್ಯದ ಗುತ್ತಿಗೆದಾರರು ಇದೀಗ ಕಾಂಗ್ರೆಸ್ ಸರ್ಕಾರದ ಪಾಲಿಗೆ ಮಗ್ಗುಲ ಮುಳ್ಳಾಗಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರರ ಮಾತುಗಳಿಗೆಲ್ಲ ತಾನೇ ಮುದ್ರೆ ಒತ್ತಿದ್ದ ಕಾಂಗ್ರೆಸ್ ಇದೀಗ ಅಧಿಕಾರಕ್ಕೆ ಏರಿದ ಬಳಿಕ ಅದೇ ಗುತ್ತಿಗೆದಾರರ ಮಾತುಗಳಿಗೆ ಕಿವಿಯೇ ಕೊಡುತ್ತಿಲ್ಲ. ಹೀಗಂದು ಖುದ್ದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘವೇ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಅಷ್ಟೇ ಅಲ್ಲ, ಹಿಂದಿನ ಸರ್ಕಾರಕ್ಕಿಂತ ಈಗಿನ ಸರ್ಕಾರದಲ್ಲಿ ಗುತ್ತಿಗೆ ಕಮಿಷನ್ ದುಪ್ಪಟ್ಟಾಗಿದೆ ಎಂದು ಗಂಭೀರ ಆರೋಪ ಮಾಡಿದೆ. ಈ ಬಗ್ಗೆ ಕರ್ನಾಟಕ ಸ್ಟೇಟ್ ಕಾಂಟ್ರಾಕ್ಟರ್ ಅಸೋಸಿಯೇಷನ್ ಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದು ಭಾರಿ ಚರ್ಚೆಗೆ ನಾಂದಿ ಹಾಡಿದೆ. ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿರುವ ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ಸ್ ಅಸೋಸಿಯೇಷನ್, ಗುತ್ತಿಗೆದಾರರ ಬಾಕಿ ಹಣ ಬಿಡುಗಡೆ ಹಾಗೂ ಇತರೆ ಸಮಸ್ಯೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.



ಗುತ್ತಿಗೆದಾರರ ಸಮಸ್ಯೆ ಬಗೆಹರಿಸಲು ಕಳೆದ ಎರಡೂವರೆ ವರ್ಷಗಳಿಂದ ನಿರಂತರ ಸಭೆಗಳಾಗಿವೆ. ಎರಡು ವರ್ಷಗಳಿಂದ ಸಮಸ್ಯೆ ಹಾಗೂ ಬಾಕಿ ಹಣದ ಪಾವತಿ ಬಗ್ಗೆ ಅನೇಕ ಸುತ್ತಿನ ಸಭೆಗಳು ನಡೆದಿವೆ. ಆದರೆ ಪ್ರತಿ ಬಾರಿ ಗುತ್ತಿಗೆದಾರರನ್ನು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಸಮಾಧಾನಪಡಿಸಿ ವಾಪಸ್ ಕಳುಹಿಸುವುದನ್ನು ಬಿಟ್ಟರೆ ಬೇರೆ ಪ್ರಯೋಜನವೇ ಆಗುತ್ತಿಲ್ಲ. ಹೀಗೆಂದು ಪತ್ರದಲ್ಲಿ ಉಲ್ಲೇಖ ಮಾಡಿರುವ ಗುತ್ತಿಗೆದಾರರು, ಇದುವರೆಗೆ ನಿಮ್ಮ ಸರ್ಕಾರದಿಂದ ಯಾವುದೇ ಪ್ರಯೋಜನ ನಮಗೆ ಆಗಿಲ್ಲ ಎಂದು ಕೆಂಡ ಕಾರಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ