LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮೋದಿ ವಿರುದ್ಧದ ಖಾಸಗಿ ದೂರು ರದ್ದುಗೊಳಿಸಿದ ಕೋರ್ಟ್​


ಬೆಂಗಳೂರು: ಕಾಂಗೆಸ್ ಪಕ್ಷ ಅಧಿಕಾರಕ್ಕೆ ಬಂದರೆ, ಅದು ದೇಶದ ಜನರ ಸಂಪತ್ತನ್ನು ಮುಸ್ಲಿಮರಿಗೆ ಮರು ಹಂಚಿಕೆ ಮಾಡುತ್ತದೆ ಎಂಬುದಾಗಿ ಪ್ರಧಾನಿ ಮೋದಿ ಪ್ರಚೋದನಾಕಾರಿ ಭಾಷಣ ಮಾಡಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದಾಖಲಿಸಿದ್ದ ಖಾಸಗಿ ದೂರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಜಾಗೊಳಿಸಿದೆ.


''ಪ್ರಧಾನಿ ಭಾಷಣದಿಂದ ಹಿಂದೂ - ಮುಸ್ಲಿಮರ ನಡುವೆ ಗೊಂದಲಕ್ಕೆ ಕಾರಣವಾಗಲಿದ್ದು, ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು'' ಎಂದು ಕೋರಿ ಬೆಂಗಳೂರಿನ ಹೆಬ್ಬಾಳದ ನಿವಾಸಿ ಜಿಯಾವುರ್ ರಹಮಾನ್ ನೊಮಾನಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.


ಈ ದೂರಿನ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಕೆ. ಎನ್ ಶಿವಕುಮಾರ್ ಅವರು, ದೂರುದಾರರು ಸಲ್ಲಿಸಿರುವ ಮನವಿಯಂತೆ ಪ್ರಕರಣವನ್ನು ತನಿಖೆಗೆ ವಹಿಸುವುದಕ್ಕೆ ಅರ್ಹವಿಲ್ಲ ಎಂದು ಅಭಿಪ್ರಾಯಪಟ್ಟು ದೂರನ್ನು ವಜಾಗೊಳಿಸಿ ಆದೇಶಿಸಿದ್ದಾರೆ. ಅಲ್ಲದೇ, ಸಿಆರ್‌ಪಿಸಿ ಸೆಕ್ಷನ್ 200ರ ಅಡಿ ಖಾಸಗಿ ದೂರು ದಾಖಲಿಸಿದ್ದು, ಸೆಕ್ಷನ್ 156 (3) ಅಡಿ ಆದೇಶಿಸಲು ಪ್ರಕರಣ ಅರ್ಹವಿಲ್ಲ ಎಂದು ತಿಳಿಸಿ ವಜಾಗೊಳಿಸಿ ಆದೇಶಿಸಲಾಗಿದೆ.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್