Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಮಾಜದಲ್ಲಿ ಪ್ರೇರಣೆಯಾಗಿ ಬದುಕಬೇಕು: ಸಿ.ಆರ್. ಮುಂಡರಗಿ




ಮುಂಡರಗಿ : ಮನುಷ್ಯರಾಗಿ ಜೀವಿಸುವುದಕ್ಕೆ ಪ್ರಾಮುಖ್ಯತೆ ಇದೆ. ನಾವೂ ಬದುಕಿ ಸಮಾಜದಲ್ಲಿ ಉಳಿದವರು ಬದುಕಲು ಪ್ರೇರಣೆಯಾಗಬೇಕು. ಆ ನಿಟ್ಟಿನಲ್ಲಿ ಗಣೇಶೋತ್ಸವದಲ್ಲಿ ರಕ್ತದಾನ ಶಿಬಿರ, ಆರೋಗ್ಯ ತಪಾಸಣೆ ಹಮ್ಮಿಕೊಂಡಿರುವ ಮುಂಡರಗಿ ತಾಲೂಕು ಪಂಚಾಯತ ನಡೆ ಅನುಕರಣೀಯ ಎಂದು ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿಗಳಾದ ಸಿ.ಆರ್. ಮುಂಡರಗಿ ಅವರು ಹೇಳಿದರು.

ಅವರು ಮುಂಡರಗಿ ತಾಲೂಕು ಪಂಚಾಯತ ಆವರಣದಲ್ಲಿ ಗಣೇಶೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರದ ಅಧ್ಯಕ್ಷತೆವಹಿಸಿ ಮಾತನಾಡಿದರು.

ರಕ್ತದಾನವು ಜೀವ ಉಳಿಸುವ ಕಾರ್ಯವಾಗಿದ್ದು, ತುರ್ತು ಸಂದರ್ಭಗಳಲ್ಲಿ ಮತ್ತು ಶಸ್ತ್ರಚಿಕಿತ್ಸೆಗಳ ಸಮಯದಲ್ಲಿ ರಕ್ತದ ಅಗತ್ಯವಿರುವವರಿಗೆ ನೆರವಾಗುತ್ತದೆ. ಒಂದು ಬಾರಿ ರಕ್ತದಾನ ಮಾಡುವ ಮೂಲಕ ನೀವು ಹಲವಾರು ಜನರ ಜೀವ ಉಳಿಸಬಹುದು ಮತ್ತು ಇದರಿಂದ ದಾನಿಗಳಿಗೂ ಹಲವು ಆರೋಗ್ಯ ಲಾಭಗಳಿವೆ. ಅದೇ ರೀತಿ ಅಂಗಾಂಗ ದಾನಗಳನ್ನು ಮಾಡಲು ಸಹ ನಾವು ಮುಂದಾಗಬೇಕು. ಇದರಿಂದ ನಾವಿಲ್ಲವಾದಾಗಲೂ ಜೀವಿಸಬಹುದು ಎಂದು ಕರೆ ನೀಡಿದರು.

ಇದೇ ವೇಳೆ ರಕ್ತದಾನ ಮಾಡಿದವರಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.

ಯೋಜನಾ ಅಂದಾಜು ಮತ್ತು ಮೌಲ್ಯಮಾಪನ ಅಧಿಕಾರಿ ಬಿ.ಎಲ್. ಕೊಪ್ಪಳ, ಸಹಾಯಕ ಕಾರ್ಯದರ್ಶಿ ಎಸ್ ಎಸ್ ಕಲ್ಮನಿ, ಮುಂಡರಗಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ ಹೊಸಮನಿ, ತಾಲೂಕಾ ಯೋಜನಾಧಿಕಾರಿ ಪ್ರವೀಣ ಗೋಣೆಮ್ಮನವರ, ಗ್ಯಾರಂಟಿ ಸಮಿತಿ ಸದಸ್ಯ ವಿಶ್ವನಾಥ ಪಾಟೀಲ, ತಾಲೂಕಾ ಆರೋಗ್ಯ ಸುರಕ್ಷತಾ ಸಮಿತಿ ಸದಸ್ಯ ಯಲ್ಲಪ್ಪಗೌಡ ಕರಮುಡಿ ಮುಂತಾದವರಿದ್ದರು.







Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ