Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೀರು ನಿರ್ವಹಣೆಗೆ ಸಮಿತಿ ರಚಿಸಿ : ಜಿಪಂ ಸಿಇಓ ನೋಂಗ್ಜಾಯ್ ಮೋಹಮ್ಮದ್ ಅಲಿ ಅಕ್ರಂ ಷಾ

ವಿಜಯನಗರ(ಹೊಸಪೇಟೆ),  : ಗ್ರಾಮ ಪಂಚಾಯಿತಿಯಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಸಮಿತಿ ರಚಿಸಿ ಜೆಜೆಎಂ ಕಾಮಗಾರಿ ಕಾರ್ಯಾಚರಣೆ ಮತ್ತು ನಿರ್ವಹಣೆ ಕೈಗೊಳ್ಳಬೇಕೆಂದು  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಷಾ ಹೇಳಿದರು.
ಹೊಸಪೇಟೆ ತಾಲೂಕಿನ  ಬೆಳಗೋಡು, ಕಲ್ಲಿರಾಂಪುರ, ಕಾಲಘಟ್ಟ, ನರಸಾಪುರ , ಕಡ್ಡಿರಾಂಪುರ ಬೆನಕಾಪುರ ಮತ್ತು  ಮಲಪನಗುಡಿ ಗ್ರಾಮಗಳಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಪೂರ್ಣಗೊಂಡ ಕಾಮಗಾರಿಗಳನ್ನು ಗುರುವಾರ ಪರಿಶೀಲಿಸಿ ಅವರು ಮಾತನಾಡಿದರು.
ಹಾಜರಿದ್ದ ಗ್ರಾಮ ಪಂಚಾಯಿತಿ ಅಧಿಕಾರಿಯವರಿಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಸಮಿತಿಯನ್ನು ಸಕ್ರಿಯಗೊಳಿಸಿ ಕಾರ್ಯಚರಣೆ ಮತ್ತು ನಿರ್ವಹಣೆ ನೀತಿಯನ್ನು ಸರ್ಕಾರದ ಮಾರ್ಗಸೂಚಿಯಂತೆ ಅನುಷ್ಟಾನಗೊಳಿಸಲು ಸೂಚಿಸಿದರು. ಜಿಲ್ಲೆಯ ಎಲ್ಲಾ ಗ್ರಾಮವನ್ನು 24*7 ಗ್ರಾಮವನ್ನಾಗಿ ಘೊಷಿಸಲು ತಿಳಿಸಿದರು. ಜೆಜೆಎಂ ಯೋಜನೆ ಸದ್ಬಳಕೆ ಮಾಡಿಕೊಳ್ಳಬೇಕು. ಕುಡಿಯುವ ನೀರಿನ ಪೈಪ್‌ಲೈನ್‌ಗಳಿಗೆ ಮೀಟರ್ ಅಳವಡಿಸುವುದರಿಂದ ನೀರಿನ ಮೌಲ್ಯ ಸಾರ್ವಜನಿಕರಿಗೆ ತಿಳಿಯುತ್ತದೆ ಎಂದರು. ನಂತರ ಮಲಪನಗುಡಿ ಬಹುಗ್ರಾಮ ಕುಡಿಯುವ ನೀರು ಶುದ್ದೀಕರಣ  ಘಟಕವನ್ನು ಪರಿಶೀಲಿಸಿದರು.

ಗ್ರಾಮಗಳಲ್ಲಿ ಸಾರ್ವಜನಿಕರಿಂದ ಜೆಜೆಎಂ ಯೋಜನೆಯ ಕುರಿತು ಸಮಾಲೋಚನೆ ನಡೆಸಿದ ವೇಳೆ ಜೆಜೆಎಂ ಕಾಮಗಾರಿಯ ಅನುಷ್ಟಾನ ಮುಂಚಿತವಾಗಿ ಗ್ರಾಮಗಳಲ್ಲಿ ಯಾವುದೇ ಪೈಪ್ ಲೈನ್ ವ್ಯವಸ್ಥೆ ಇಲ್ಲದೇ ಒಂದು ಮಿನಿ ಟ್ಯಾಂಕ್ ಮೂಲಕ ನೀರು ಸರಬರಾಜುವಾಗುತ್ತಿತ್ತು. ಜೆಜೆಎಂ ಯೋಜನೆ ಅನುಷ್ಠಾನದ ಬಳಿಕ ಪ್ರತಿ ಮನೆಗಳಿಗೆ ನಳ ಸಂಪರ್ಕಗಳಿಂದ  ನೀರಿನ ಸೌಲಭ್ಯ ದೊರಕಿದೆ ಎಂದು ಕಾಲಗಟ್ಟ ಗ್ರಾಮದ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದರು.

ಇದೇ ವೇಳೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವಿಭಾಗ ಕಾರ್ಯಪಾಲಕ ಅಭಿಯಂತರಾದ ಎಸ್.ದೀಪಾ, ತಾಲೂಕು ವೈದ್ಯಾಧಿಕಾರಿಗಳು ಬಸವರಾಜು, ತಾಪಂ ಇಒ ಎಂ.ಡಿ.ಆಲಂಭಾಷಾ, ಪಿಆರ್‌ಇಡಿ ಸಹಾಯಕ ಕಾರ್ಯಪಾಲಕ ಅಭಿಯಂತರ ಸುರೇಶ್, ಗ್ರಾಮೀಣ ನೀರು ಸರಬರಾಜು ಕಾರ್ಯಪಾಲಕ ಅಭಿಯಂತರ ವೀರೇಶ್ ನಾಯಕ, ಕಿರಿಯ ಅಭಿಯಂತರ ಸುರೇಶ್, ನಾಗೇನಹಳ್ಳಿ ಪಿಡಿಓ ವಾಸುಕಿ, ವಿಡಬ್ಲೂಎಸ್‌ಸಿ ಸಮಿತಿ ಸದಸ್ಯರು ಹಾಜರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ