Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳೆ ವಿಮೆ ಅರ್ಜಿ ತಿರಸ್ಕಾರ: ಆಕ್ಷೇಪಣೆ ಸಲ್ಲಿಸಲು ಜೂನ್ 20 ರವರೆಗೆ ರೈತರಿಗೆ ಅವಕಾಶ


ಬಳ್ಳಾರಿ,ಜೂ.05: ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆಯಡಿ 2024ರ ಮುಂಗಾರು, ಹಿಂಗಾರು ಹಾಗೂ ಬೇಸಿಗೆ ಹಂಗಾಮಿನಲ್ಲಿ ವಿಮಾ ಸಂಸ್ಥೆಯಿAದ ತಿರಸ್ಕೃತಗೊಂಡಿರುವ ಅರ್ಜಿಗಳ ಕುರಿತು ಆಕ್ಷೇಪಣೆ ಸಲ್ಲಿಸಲು ರೈತರಿಗೆ ಜೂನ್ 20 ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಬಳ್ಳಾರಿ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಮಾರ್ಗದರ್ಶನದಂತೆ ಬೆಳೆ ಸಮೀಕ್ಷೆಯ ದತ್ತಾಂಶಗಳನ್ನು ರೈತರ ವಿಮಾ ನೋಂದಣಿ ಪ್ರಸ್ತಾವನೆಗಳೊಂದಿಗೆ ಹೋಲಿಕೆ ಮಾಡಿ, ತಂತ್ರಾAಶದ ಮೂಲಕ ಪರಿಶೀಲನೆ ನಡೆಸಲಾಗಿತ್ತು. ತಾಳೆಯಾಗದ ಪ್ರಸ್ತಾವನೆಗಳನ್ನು ತಾಲ್ಲೂಕು ಮಟ್ಟದ ಅಧಿಕಾರಿಗಳ ಮರುಪರಿಶೀಲನೆಗೆ ಒಳಪಡಿಸಿ, ಅಂತಿಮವಾಗಿ ವಿಮಾ ಸಂಸ್ಥೆಯು ಬಳ್ಳಾರಿ ಮತ್ತು ಕುರುಗೋಡು ತಾಲ್ಲೂಕಿನ ಒಟ್ಟು 284 ಅರ್ಜಿಗಳನ್ನು ತಿರಸ್ಕರಿಸಿದೆ.
*ತಾಲ್ಲೂಕುವಾರು ತಿರಸ್ಕೃತಗೊಂಡ ಅರ್ಜಿಗಳ ವಿವರ(2024-25 ನೇ ಸಾಲಿನ):*
ಬಳ್ಳಾರಿ: ಮುಂಗಾರು-148, ಹಿಂಗಾರು-56, ಬೇಸಿಗೆ-01, ತಿರಸ್ಕೃತಗೊಂಡ ಪ್ರಸ್ತಾವನೆಗಳು-205.
ಕುರುಗೋಡು: ಮುಂಗಾರು-78, ಹಿಂಗಾರು-01, ಬೇಸಿಗೆ-00, ತಿರಸ್ಕೃತಗೊಂಡ ಪ್ರಸ್ತಾವನೆಗಳು-79.
ಒಟ್ಟು: ಮುಂಗಾರು-226, ಹಿಂಗಾರು-57, ಬೇಸಿಗೆ-01, ತಿರಸ್ಕೃತಗೊಂಡ ಪ್ರಸ್ತಾವನೆಗಳು-284.
ತಿರಸ್ಕೃತಗೊಂಡಿರುವ ರೈತರ ಅರ್ಜಿಗಳ ಸಂಪೂರ್ಣ ಪಟ್ಟಿಯನ್ನು ಈಗಾಗಲೇ ಸಂಬAಧಪಟ್ಟ ರೈತ ಸಂಪರ್ಕ ಕೇಂದ್ರಗಳ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ರೈತರು ತಮ್ಮ ಅರ್ಜಿ ತಿರಸ್ಕೃತಗೊಂಡಿರುವುದನ್ನು ಖಚಿತಪಡಿಸಿಕೊಂಡು, ಒಂದು ವೇಳೆ ಆಕ್ಷೇಪಣೆಗಳಿದ್ದಲ್ಲಿ ಮರುಪರಿಶೀಲನೆಗಾಗಿ ಮನವಿ ಸಲ್ಲಿಸಬಹುದಾಗಿದೆ.
ಜೂ.20 ರ ಒಳಗೆ (15 ದಿನಗಳ ಒಳಗಾಗಿ) ರೈತರು ತಮ್ಮ ಮನವಿಗಳನ್ನು ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಲು ಕೋರಲಾಗಿದೆ. ನಿಗದಿತ ಅವಧಿಯ ನಂತರ ಬರುವ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ