LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಡ್ಯಾಡ್‍ ಚಿತ್ರೀಕರಣ



    ಸೆಂಚುರಿ ಸ್ಟಾರ್ ಡಾ. ಶಿವರಾಜ್‍ಕುಮಾರ್ ಅವರು ನಾಯಕರಾಗಿ ನಟಿಸುತ್ತಿರುವ ಹಾಗೂ ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ 'ಡ್ಯಾಡ್' ಚಿತ್ರಕ್ಕೆ  ಮೈಸೂರಿನಲ್ಲಿ ಎರಡನೇ ಹಂತದ ಚಿತ್ರೀಕರಣ ನಂದಿ ಬೆಟ್ಟದಲ್ಲಿ ನಡೆದಿದೆ.

     ಶಿವರಾಜಕುಮಾರ್, ಬೇಬಿ ನಕ್ಷತ್ರ ಮುಂತಾದವರು ಈ ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು.

ಹರೀಶ್‍ ಪೆದ್ದಿ ಅವರು ಮೈರಾ ಕ್ರಿಯೇಷನ್ಸ್ ಲಾಂಛನದಡಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ತೆಲುಗಿನ ಖ್ಯಾತ ನಿರ್ದೇಶಕ ಅನಿಲ್‍ ಕನ್ನೆಗಂಟಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ನಿರ್ಮಾಪಕರಿಗೆ ಹಾಗೂ, ನಿರ್ದೇಶಕರಿಗೆ ಇದು ಕನ್ನಡದಲ್ಲಿ ಮೊದಲ ಚಿತ್ರ. ಬಿ.ಎಸ್‍. ಸುಧೀಂದ್ರ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

     ಶಿವರಾಜ್‍ಕುಮಾರ್ ಅವರು ಅನೇಕ ವರ್ಷಗಳ ನಂತರ ಈ ಚಿತ್ರದಲ್ಲಿ ವೈದ್ಯನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಶರ್ಮಿಳಾ ಮಾಂಡ್ರೆ, ಬೇಬಿ ನಕ್ಷತ್ರ, ಬಾಬು, ಮಲಯಾಳಂ ನಟ ಸೂರಜ್‍ ವೆಂಜರಮೂಡು ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಕನ್ನಡ, ತೆಲುಗು ಮತ್ತು ಮಲಯಾಳಂನಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಅರ್ಜುನ್‍ ಜನ್ಯ ಅವರ ಸಂಗೀತ ನಿರ್ದೇಶನ ಹಾಗೂ ಬಿ.ರಾಜಶೇಖರ್  ಛಾಯಾಗ್ರಹಣವಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ ವ್ಯಾಪಾರಸ್ಥರಿಗೆ ಆಧುನಿಕ ಮಳಿಗೆ, ಗ್ರಾಹಕರಿಗೆ ವಾಹನ ನಿಲುಗಡೆ ವ್ಯವಸ್ಥೆ; ₹15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕ್ರಮ: ಶಾಸಕ ನಾಡಗೌಡವಂದೇ ಮಾತರಂ ಮೊಟಕು ಖಂಡಿಸಿ ಬೀಳಗಿಯಲ್ಲಿ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿ