Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದರ್ಶನ್​​ಗೆ ಕನಿಷ್ಟ ಒಂದು ವರ್ಷ ಜೈಲು ಖಾಯಂ

 

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರು ಸುಪ್ರೀಂಕೋರ್ಟ್​​ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಸಾಕ್ಷ್ಯಗಳ ವಿಚಾರಣೆಯಲ್ಲಿ ವಿಳಂಬ, ಜೈಲಿನಲ್ಲಿ ಸೌಲಭ್ಯಗಳ ಕೊರತೆ, ಕುಟುಂಬವನ್ನು ಭೇಟಿ ಮಾಡಲು ಜೈಲಧಿಕಾರಿಗಳಿಂದ ಅವಕಾಶ ನಿರಾಕರಣೆ, ಆರೋಗ್ಯ ಸಮಸ್ಯೆ, ಸಹ ಕೈದಿಗಳಿಂದ ಕಿರುಕುಳ, ಬೆದರಿಕೆ, ಇನ್ನೂ ಕ್ವಾರಂಟೈನ್ ಸೆಲ್​​ನಲಿ ಇಟ್ಟಿರುವುದು ಹೀಗೆ ಹಲವು ಕಾರಣಗಳನ್ನು ನೀಡಿ ದರ್ಶನ್ ಅವರು ಜಾಮೀನಿಗಾಗಿ ಸುಪ್ರೀಂಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ದರ್ಶನ್ ಪರ ವಕೀಲರು ಹಾಗೂ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ವಾದ ಆಲಿಸಿದ ಸುಪ್ರೀಂ ಕೋರ್ಟ್ ದರ್ಶನ್​​ರ ಜಾಮೀನು ಅರ್ಜಿಯನ್ನು ಪುರಸ್ಕರಿಸಿಲ್ಲ. ಬದಲಿಗೆ ಒಂದು ವರ್ಷದ ಕಾಲಾವಕಾಶವನ್ನು ನೀಡಿದೆ.

Advertisement

ಜಾಮೀನು ಅರ್ಜಿಯ ವಿಚಾರಣೆ ಆಲಿಸಿದ ಸುಪ್ರೀಂಕೋರ್ಟ್, ಪ್ರಕರಣದ ವಿಚಾರಣೆಗೆ ಒಂದು ವರ್ಷದ ಕಾಲಾವಧಿ ನೀಡಿದ್ದು, ಅಷ್ಟರಲ್ಲಿ ಕನಿಷ್ಟ 60 ಸಾಕ್ಷ್ಯಗಳ ವಿಚಾರಣೆ ಮುಗಿಯದಿದ್ದಲ್ಲಿ, ಜಾಮೀನು ಅರ್ಜಿಯನ್ನು ಪರಿಗಣಿಸುವುದಾಗಿ ಹೇಳಿದೆ. ಇದರಿಂದಾಗಿ, ದರ್ಶನ್​​ಗೆ ಕನಿಷ್ಟ ಒಂದು ವರ್ಷ ಜೈಲು ವಾಸ ಖಾಯಂ ಆದಂತಾಗಿದೆ. ಒಂದು ವರ್ಷದ ಬಳಿಕವಷ್ಟೆ ಅವರು ಜಾಮೀನಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಗಲೂ ಸಹ ದರ್ಶನ್​ಗೆ ಜಾಮೀನು ಸಿಗುವ ಖಾತ್ರಿ ಇಲ್ಲ, ಬದಲಿಗೆ ಆಗಿನ ಪರಿಸ್ಥಿತಿಗಳ ಆಧಾರದ ಮೇಲಷ್ಟೆ ಜಾಮೀನು ಅರ್ಜಿಯ ಭವಿಷ್ಯ ನಿರ್ಧಾರ ಆಗಲಿದೆ.

ಮುಂದಿನ ಒಂದು ವರ್ಷದಲ್ಲಿ 60 ಸಾಕ್ಷ್ಯಗಳ ವಿಚಾರಣೆ

ಸುಪ್ರೀಂ ಕೋರ್ಟ್​​ನಲ್ಲಿ ಇಂದು ನಟ ದರ್ಶನ್ ಪರ ವಾದ ಮಂಡಿಸಿದ ಖ್ಯಾತ ವಕೀಲ ಮುಕುಲ್ ರೊಹ್ಟಗಿ, ‘272ಕ್ಕೂ ಹೆಚ್ಚು ಸಾಕ್ಷಿಗಳು ಪ್ರಕರಣದಲ್ಲಿದ್ದು, ಈ ವರೆಗೆ 10 ಸಾಕ್ಷ್ಯಗಳನ್ನು ಮಾತ್ರವೇ ವಿಚಾರಣೆ ಮಾಡಲಾಗಿದೆ. ಮುಖ್ಯ ಸಾಕ್ಷಿಗಳ ವಿಚಾರಣೆಯನ್ನಾದರೂ ಮುಗಿಸುವಂತೆ ನಾವು ಕೇಳಿದ್ದೆವು ಆದರೆ ಅದು ಸಹ ಸಾಧ್ಯವಾಗಿಲ್ಲ’ ಎಂದರು. ಆದರೆ ರೊಹ್ಟಗಿ ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಎಸ್​​ಪಿಪಿ ಸಿದ್ಧಾರ್ಥ್ ಲೂತ್ರಾ, ‘ನೀವು (ಆರೋಪಿಗಳು) ಸಾಕ್ಷ್ಯಗಳಿಗೆ ಏನೇನು ಮಾಡಿದ್ದೀರೆಂದು ಹೇಳಿದರೆ ನಿಮ್ಮ ಜಾಮೀನು ಅರ್ಜಿಯೇ ರದ್ದಾಗಲಿದೆ’ ಎಂದರು. ಬಳಿಕ ನ್ಯಾಯಾಲಯಕ್ಕೆ ಮಾಹಿತಿ ನೀಡಿದ ವಕೀಲರು, ‘ಮುಂದಿನ ಒಂದು ವರ್ಷದಲ್ಲಿ 60 ಸಾಕ್ಷ್ಯಗಳ ವಿಚಾರಣೆ ಮುಗಿಸುವುದಾಗಿ ಮಾಹಿತಿ ನೀಡಿದರು.

ಎರಡೂ ಕಡೆಯ ವಾದ ಆಲಿಸಿದ ನ್ಯಾಯಮೂರ್ತಿಗಳು, ‘ಒಂದು ವರ್ಷದ ಒಳಗೆ 60 ಸಾಕ್ಷ್ಯಗಳ ವಿಚಾರಣೆ ಮುಗಿಸಿ, ಆ ಬಳಿಕ ವಿಚಾರಣಾ ನ್ಯಾಯಾಲಯದಲ್ಲಿಯೇ ಆರೋಪಿ (ದರ್ಶನ್) ಜಾಮೀನಿಗೆ ಅರ್ಜಿ ಸಲ್ಲಿಸಬಹುದು’ ಎಂದರು. ಜೊತೆಗೆ ‘ಆರೋಪಿಗೆ ಇತರೆ ಕೈದಿಗಳಿಗೆ ನೀಡಿರುವ ಸವಲತ್ತುಗಳನ್ನೇ ನೀಡಬೇಕು ಎಂದು ಸೂಚಿಸಿದರು ಕ್ವಾರಂಟೈನ್ ಸೆಲ್ ಬಗ್ಗೆ ಯಾವುದೇ ಸೂಚನೆ ಅಥವಾ ಆದೇಶವನ್ನು ನೀಡುವುದಿಲ್ಲವೆಂದು ನ್ಯಾಯಮೂರ್ತಿಗಳು ಹೇಳಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸುಧಾರಿತ ವಸ್ತುಗಳ ಸಂಶೋಧನೆ ಮತ್ತು ಅಭಿವೃದ್ಧಿ ಪರಿಸರ ವ್ಯವಸ್ಥೆ ಅನಾವರಣಗೊಳಿಸಿದ ಏಕಸ್ ಮತ್ತು ಧಾರವಾಡ ಐಐಟಿಹುಬ್ಬಳ್ಳಿ-ಧಾರವಾಡ ಪಾಲಿಕೆ ನಿವೇಶನಗಳು ಅಕ್ರಮ ಮಾರಾಟಮಣ್ಣೂರಿನಲ್ಲಿ ರಸ್ತೆ ಕಾಮಗಾರಿಗೆ ಭೂಮಿಪೂಜೆ7 ಗಂಭೀರ ವಿಷಯ:  ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳ ಜೊತೆ ನೇರ ಚರ್ಚೆಗೆ ಎಫ್ಒಎಬಿ ನಿರ್ಧಾರ*ಗೃಹಲಕ್ಷ್ಮಿ ಯೋಜನೆಯ ಸಾರ್ಥಕತೆ: 624 ಅಂಕ ಗಳಿಸಿದ ವಿದ್ಯಾರ್ಥಿನಿಗೆ ಇಲಾಖೆಯಿಂದ ಅಭಿನಂದನೆ* ೧೮ ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ-೨ಯುವಜನತೆ ಮೊಬೈಲ್ ಗೀಳಿನಿಂದ ಹೊರಬಂದು ನಮ್ಮ ನೆಲದ ಸಂಸ್ಕೃತಿಯನ್ನು ಅರಿತುಕೊಳ್ಳಬೇಕು: ಸಿ.ಪಿ.ಐ ವಿಶ್ವನಾಥ ಹಿರೇಗೌಡ್ರಮೇ 16 ಕ್ಕೆ ರಾಷ್ಟ್ರೀಯ  ಡೆಂಗ್ಯೂ ದಿನಾಚರಣೆ: ಭಿತ್ತಿ ಪತ್ರ ಬಿಡುಗಡೆತಾಯಿ ಮತ್ತು ಶಿಶು ಮರಣ ಪ್ರಮಾಣ ಶೂನ್ಯಕ್ಕೆ ಇಳಿಸಿ: ಡಾ.ಸುರೇಶ ಬಿ.ಇಟ್ನಾಳ್ಕೊಪ್ಪಳವನ್ನು ಗೆಲ್ಲಿಸಿ: ಸಿವಿಸಿ ಕರೆ