Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Bellary

ಡಿ.ಬಿ.ಟಿ. ರದ್ದುಪಡಿಸಲು ಡಿ.3ರಂದು ದೆಹಲಿಯಲ್ಲಿ ಬೃಹತ್ ಪ್ರತಿಭಟನೆ: ಕೃಷ್ಣಪ್ಪ

ಬಳ್ಳಾರಿ, ನ.19:: ಪಡಿತರ ಧಾನ್ಯಗಳ ವಿತರಣೆಯ ಬದಲಿಗೆ ನೇರ ನಗದು ವರ್ಗಾವಣೆ (ಡಿ.ಬಿ.ಟಿ.) ಮಾಡುವ ಕೇಂದ್ರ ಸರ್ಕಾರದ ಕ್ರಮ ಹಾಗೂ ರಾಜ್ಯ ಸರ್ಕಾರದ ಆಹಾರ ಕಿಟ್ ವಿತರಣೆ ನಿರ್ಧಾರವನ್ನು ಖಂಡಿಸಿ ಡಿಸೆಂಬರ್ 3ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪಡಿತರ ಮಾರಾಟಗಾರರ ಒಕ್ಕೂಟದ ರಾಜ್ಯಾಧ್ಯಕ್ಷ ಕೃಷ್ಣಪ್ಪ ತಿಳಿಸಿದರು.
ನಗರದ ಸರ್ಕಾರಿ ಅತಿಥಿಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಡಿತರ ವಿತರಕರು ಈಗಾಗಲೇ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಮೊದಲಿನಂತೆ ಪಡಿತರ ಚೀಟಿದಾರರಿಗೆ ಅಕ್ಕಿ ಸೇರಿದಂತೆ ಇತರ ಧಾನ್ಯಗಳನ್ನು ವಿತರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ವ್ಯವಸ್ಥೆಯಲ್ಲಿ ಶೇ.5ರಷ್ಟು ಲೋಪದೋಷಗಳಿದ್ದರೆ ಅವುಗಳನ್ನು ಅಧಿಕಾರಿಗಳು ಸರಿಪಡಿಸಬೇಕು. ಅದನ್ನು ಬಿಟ್ಟು ಇಡೀ ಪಡಿತರ ವಿತರಣಾ ವ್ಯವಸ್ಥೆಯನ್ನೇ ಬದಲಾಯಿಸುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಆಹಾರ ಕಿಟ್‌ಗಳನ್ನು ವಿತರಿಸುವುದಾದರೆ ವಿತರಕರಿಗೆ ಸೂಕ್ತ ಕಮಿಷನ್ ನೀಡಬೇಕು. ಪ್ರಸ್ತುತ ನೀಡಲಾಗುತ್ತಿರುವ ₹150 ಕಮಿಷನ್ ಅನ್ನು ₹250ಕ್ಕೆ ಹೆಚ್ಚಿಸಿ, ನಿಗದಿತ ಅವಧಿಯಲ್ಲಿ ಪಾವತಿಸಬೇಕು. ದೇಶಾದ್ಯಂತ ಪಡಿತರ ವಿತರಕರಿಗೆ ಏಕರೂಪದ ಕಮಿಷನ್ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಅಕ್ಕಿ ವಿತರಣೆಯಲ್ಲಿ ಅಕ್ರಮ ನಡೆಯುತ್ತಿದ್ದರೆ ಅದನ್ನು ತಡೆಯಲು ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು. ಕೆಲ ಅಂಗಡಿ ಮಾಲೀಕರ ತಪ್ಪಿಗೆ ಎಲ್ಲ ವಿತರಕರಿಗೂ ತೊಂದರೆ ನೀಡುವುದು ಸರಿಯಲ್ಲ. ಅಕ್ಕಿಯ ಬದಲಿಗೆ ತೊಗರಿಬೇಳೆ, ಸಕ್ಕರೆ, ಉಪ್ಪು ಹಾಗೂ ಎಣ್ಣೆ ವಿತರಣೆಗೂ ಅವಕಾಶ ಕಲ್ಪಿಸಬಹುದು ಎಂದು ಅಭಿಪ್ರಾಯಪಟ್ಟರು.
ಸಂಘದ ರಾಜ್ಯ ಕಾರ್ಯದರ್ಶಿ ಹಾಗೂ ರಾಷ್ಟ್ರೀಯ ಉಪಾಧ್ಯಕ್ಷ ಮೀನಳ್ಳಿ ತಾಯಣ್ಣ ಮಾತನಾಡಿ, ಬಳ್ಳಾರಿಯಲ್ಲಿ ಒಟ್ಟು 112 ನ್ಯಾಯಬೆಲೆ ಅಂಗಡಿಗಳಿದ್ದು, ಪ್ರತಿ ತಿಂಗಳ 15ನೇ ತಾರೀಕಿನೊಳಗೆ ಎಲ್ಲ ಅಂಗಡಿಗಳಿಗೆ ಪಡಿತರ ಧಾನ್ಯಗಳನ್ನು ಪೂರೈಸಬೇಕು. ವಿಳಂಬವಾದರೆ ಸರ್ವರ್ ಸಮಸ್ಯೆ ಸೇರಿದಂತೆ ಹಲವು ತಾಂತ್ರಿಕ ತೊಂದರೆಗಳಿಂದ ಪಡಿತರ ವಿತರಣೆಗೆ ಅಡಚಣೆಯಾಗುತ್ತದೆ. ವಿತರಕರ ಕಮಿಷನ್ ಕೂಡ ವಿಳಂಬವಿಲ್ಲದೆ ಪ್ರತಿ ತಿಂಗಳು ಪಾವತಿಸಬೇಕು ಎಂದು ಒತ್ತಾಯಿಸಿದರು.
ಡಿ.3ರಂದು ದೆಹಲಿಯಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನ್ಯಾಯಬೆಲೆ ಅಂಗಡಿ ವಿತರಕರು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಪಡಿತರ ವಿತರಕರ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ವೆಂಕಟೇಶ ಹೆಗಡೆ, ಪಾಲಾಕ್ಷರೆಡ್ಡಿ, ದಾನರೆಡ್ಡಿ, ಮಾರುತಿ, ನಾಗರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬ್ರಿಲಿಯಂಟ್ ಶಾಲೆಯ ಶೈಕ್ಷಣಿಕ ಪ್ರಗತಿ ಕಂಡು ಸಚಿವರ ಮೆಚ್ಚುಗೆ   ಕುಲಗೋಡ ಪಿ.ಕೆ.ಪಿ.ಎಸ್  ನೂತನ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆಕಾಗವಾಡ ಪಟ್ಟಣ ಪಂಚಾಯತಿಯಲ್ಲಿ ಸಿಬ್ಬಂದಿ ಕೊರತೆ..! ಸಾರ್ವಜನಿಕರ ಕೆಲಸಗಳಿಗೆ ಹಿನ್ನಡೆ..!ನೇಬಗೇರಿಯಲ್ಲಿ ತಂಗಡಗಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿನ.22 ರಂದು ರಾಮದುರ್ಗದಲ್ಲಿ ತಾಲೂಕಾ ಗಾಣಿಗ ಸಂಘ ಉದ್ಘಾಟನೆ, ಪ್ರತಿಭಾ ಪುರಸ್ಕಾರಕಾಗವಾಡ ಚನ್ನಮ್ಮ ಸರ್ಕಲ್‌ನಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಸರಳ ಆಚರಣೆ*ಇಟಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮೂಲಸೌಕರ್ಯ ಕಲ್ಪಿಸಲು ಗ್ರಾಮಸ್ಥರ ಆಗ್ರಹ* ಶರಣ ಸಂಸ್ಕೃತಿಯ ಸಾಕಾರ ಮೂರ್ತಿ ಗಂಗಾಧರ ಕೋಟಗಿ ಅವರಿಗೆ ಕಿತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಗೌರವಕೋಳೂರು ಕ್ಷೇತ್ರದ ಸಮಗ್ರ  ಅಭಿವೃದ್ಧಿಗಾಗಿ  ಜಿಪಂ ಚುನಾವಣೆಗೆ ಸ್ಪರ್ಧೆ :  ದೊಡ್ಡ ಕೇಶವ ರೆಡ್ಡಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದ ಈ.ತುಕಾರಾಮ್