ಕೋಲಾರದ 12 ಪರೀಕ್ಷಾ ಕೇಂದ್ರಗಳಲ್ಲಿ ಕೆಪಿಎಸ್ಸಿ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲು ಬೇರೆಡೆಯಿಂದ ಆಗಮಿಸುವ ಅಭ್ಯರ್ಥಿಗಳಿಗೆ ಕೋಲಾರದ KEB ಸಮುದಾಯ ಭವನ, ಹಾಲಿಸ್ಟರ್ ಸಮುದಾಯ ಭವನ, ಶತಶೃಂಗ ಪೊಲೀಸ್ ಸಮುದಾಯ ಭವನ, ನಚಿಕೇತ ಹಾಸ್ಟೆಲ್ನಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಡಿಸಿ ಅಕ್ರಂ ಪಾಷಾ ಅವರು ಕೆಪಿಎಸ್ಸಿ ಪರೀಕ್ಷಾರ್ಥಿಗಳಿಗೆ ಊಟ, ಕುಡಿಯುವ ನೀರು, ವಸತಿ ವ್ಯವಸ್ಥೆ ಮೇಲ್ವಿಚಾರಣೆಗೆ ಅಧಿಕಾರಿಗಳನ್ನು ನೇಮಿಸಿದ್ದಾರೆ.
ಕೆಎಎಸ್ ಪ್ರಿಲಿಮ್ಸ್ ಪರೀಕ್ಷೆಯ ಪತ್ರಿಕೆ 1 ಪರೀಕ್ಷೆಯನ್ನು ಬೆಳಿಗ್ಗೆ 10-00 ಗಂಟೆಯಿಂದ ಮಧ್ಯಾಹ್ನ 12-00 ಗಂಟೆವರೆಗೆ ನಡೆಸಲಾಗುತ್ತದೆ. ಪತ್ರಿಕೆ 2 ಪರೀಕ್ಷೆಯನ್ನು ಮಧ್ಯಾಹ್ನ 2 ರಿಂದ 4 ಗಂಟೆವರೆಗೆ ನಡೆಸಲಾಗುತ್ತದೆ. ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಬಿ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯನ್ನು ಇಂದು ನಡೆಸುತ್ತಿದೆ