Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪರೀಕ್ಷಾ ಕೇಂದ್ರಗಳಿಗೆ ಡಿಸಿ, ಸಿಇಓ ಭೇಟಿ

ಬಾಗಲಕೋಟೆ, ಎಪ್ರೀಲ್ ೨೩  : ಜಿಲ್ಲೆಯ ಬಾಗಲಕೋಟೆ ಮತ್ತು ಜಮಖಂಡಿ ನಗರಗಳಲ್ಲಿ ಗುರುವಾರ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಸಂಗಪ್ಪ ಹಾಗೂ ಜಿ.ಪಂ ಸಿಇಓ ಶಶಿಧರ ಕುರೇರ ಭೇಟಿ ನೀಡಿ, ಪರೀಕ್ಷಾ ವ್ಯವಸ್ಥೆಗಳ ಪರಿಶೀಲಿಸಿದರು.
ಜಿಲ್ಲಾಧಿಕಾರಿ ಸಂಗಪ್ಪ ಅವರು ನಗರದ ಎಸ್.ಬಿ.ಪಾಟೀಲ ಕಾಳಿದಾಸ ಶಿಕ್ಷಣ ಸಂಸ್ಥೆಯಲ್ಲಿ ಸ್ಥಾಪಿಸಲಾದ ಕೇಂದ್ರಕ್ಕೆ ಭೇಟಿ ನೀಡಿದರೆ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅವರು ನವನಗರದ ಕಾಳಿದಾಸ ಶಿಕ್ಷಣ ಸಂಸ್ಥೆ, ವಿದ್ಯಾಗಿರಿಯಲ್ಲಿರುವ ತುಂಗಳ ಸೈನ್ಸ್ ಕಾಲೇಜ, ಬಾಗಲಕೋಟೆ ನಗರದ ಬಸವೇಶ್ವರ ಆಟ್ಸ್ ಕಾಲೇಜ ಹಾಗೂ ಸರಕಾರಿ ಹೆಣ್ಣು ಮಕ್ಕಳ ಪದವಿ ಪೂರ್ವ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪರೀಕ್ಷಾರ್ಥಿಗಳಿಗೆ ಕಲ್ಪಿಸಲಾದ ಮೂಲಭೂತ ಸೌಲಭ್ಯಗಳು, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ವಿದ್ಯುತ್ ಪೂರೈಕೆ ಸೇರಿದಂತೆ ಕೇಂದ್ರಗಳಲ್ಲಿ ಕೈಗೊಳ್ಳಲಾದ ಸಿದ್ದತೆಗಳನ್ನು ಪರಿಶೀಲಿಸಿದರು. ಪರೀಕ್ಷೆಗಳು ಯಾವುದೇ ಅಡಚಣೆ ಇಲ್ಲದೇ ಸುಗಮವಾಗಿ ನಡೆಯುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಪರೀಕ್ಷಾ ಕೇಂದ್ರದ ಸುತ್ತಮುತ್ತ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲಾಗಿರುವ ಬಗ್ಗೆ ಮಾಹಿತಿ ಪಡೆದು, ಪರೀಕ್ಷಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವಂತೆ ತಿಳಿಸಿದರು. 
ಜಿಲ್ಲಾಧಿಕಾರಿಗಳ ಭೇಟಿ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಜಿ.ಪಂ ಸಿಇಓ ಅವರ ಭೇಟಿ ಸಂದರ್ಭದಲ್ಲಿ ಜಿ.ಪಂ ಉಪ ಕಾರ್ಯದರ್ಶಿ ಎನ್.ವಾಯ್.ಬಸರಿಗಿಡದ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಂಡಲೀಕ ಕಾಂಬಳೆ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಸುಭಾಷ ಸಂಪಗಾವಿ ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಿವಬೋಧರಂಗ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಗೆ ರೂ.೭.೩೦ ಕೊಟಿ ಲಾಭ  IAS ಅಧಿಕಾರಿಗಳ ವಿರುದ್ಧ ಲಂಚ ಆರೋಪ; ಹೈಕೋರ್ಟ್ ಮೊರೆಹೋದ ಗುತ್ತಿಗೆದಾರಉಗಾರದಲ್ಲಿ ಜನಶಕ್ತಿ ಸೇವಾ ಸಂಘ ಉದ್ಘಾಟನೆ*ಅಥಣಿಯ ಕೆ. ಎ. ಲೋಕಾಪುರ ಕಾಲೇಜಿನಲ್ಲಿ ಹಿಂದಿನ ವಿದ್ಯಾರ್ಥಿಗಳ ಸಮ್ಮಿಲನ / ನಿರ್ಭಯಾನಂದ ಸ್ವಾಮೀಜಿ ಅಭಿನುಡಿ* ಇರುವೆ ಕಚ್ಚಿ ಐಸಿಯುವಿನಲ್ಲಿದ್ದ ಹಸುಳೆ ಸಾವು?ನಗರಾಭಿವೃದ್ದಿ ಪ್ರಾಧಿಕಾರದ ನೂತನ ಕಛೇರಿ ಉದ್ಘಾಟನೆಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆ: ಎಸಿ ರಾಜೇಶ್ ಹೆಚ್.ಡಿಬಳ್ಳಾರಿ ಜಿಲ್ಲೆಯಲ್ಲಿ ಡೆಂಗ್ಯೂ ಹರಡದಂತೆ ಕಟ್ಟೆಚ್ಚರಅವೈಜ್ಞಾನಿಕವಾಗಿ ಇಂಗ್ಲಿಷ್ ಮಾಧ್ಯಮ ಹೇರಿಕೆ ವಿರುದ್ಧ ಪ್ರತಿಭಟನೆ: ಎಐಡಿಎಸ್ಓಅವೈಜ್ಞಾನಿಕವಾಗಿ ಇಂಗ್ಲಿಷ್ ಮಾಧ್ಯಮ ಹೇರಿಕೆ ವಿರುದ್ಧ ಪ್ರತಿಭಟನೆ: ಎಐಡಿಎಸ್ಓ