LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬಿಜೆಪಿ ಹಗರಣಗಳನ್ನು ನಿತ್ಯ ಒಂದರಂತೆ ಬಯಲು ಮಾಡುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : ಮುಖ್ಯಮಂತ್ರಿಗಳು ವಿಧಾನಸಭೆಯಲ್ಲಿ ಪ್ರಸ್ತಾಪಿಸಿರುವ ಬಿಜೆಪಿ ಹಗರಣಗಳನ್ನು ನಿತ್ಯ ಒಂದರಂತೆ ಬಯಲು ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಕಟಿಸಿದ್ದಾರೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳ ಜತೆ ಮಾಧ್ಯಮಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿಯವರು ಪಾದಯಾತ್ರೆ ಮಾಡುವ ಮೂಲಕ ಅವರ ಅಕ್ರಮಗಳನ್ನು ಬಯಲು ಮಾಡಲು ನಮಗೆ ಸದಾವಕಾಶವನ್ನು ಒದಗಿಸಿಕೊಟ್ಟಿದ್ದಾರೆ. ಅವರು ಪಾದಯಾತ್ರೆ ಮಾಡುವಾಗ ಒಂದೊಂದು ದಿನವೂ ಅವರ ಅಕ್ರಮಗಳನ್ನು ನಾವು ಬಯಲು ಮಾಡುತ್ತೇವೆ ಎಂದು ತಿಳಿಸಿದರು.


ಬಿಜೆಪಿಯವರು ಪಾದಯಾತ್ರೆ ಹೋರಾಟ ಮಾಡುವ ಮುನ್ನ, ಅವರ ಕಾಲದಲ್ಲಿ ಆಗಿರುವ ಅಕ್ರಮಗಳ ಬಗ್ಗೆ ಮೊದಲು ಉತ್ತರ ನೀಡಲಿ. ಅವರ ಕಾಲದ ಅಕ್ರಮಗಳಲ್ಲಿ ಸಿಎಂ ಆಗಿದ್ದ ಬೊಮ್ಮಾಯಿ ಅವರು ಭಾಗಿಯಾಗಿದ್ದಾರೋ, ಮಂತ್ರಿಗಳು ಭಾಗಿಯಾಗಿದ್ದರೋ, ಅಧಿಕಾರಿಗಳು ಭಾಗಿಯಾಗಿದ್ದಾರೋ ಎಂದು ಉತ್ತರ ನೀಡಲಿ. ಈಗಲೂ ಬಿಜೆಪಿಯವರು ಈ ಅಕ್ರಮಗಳ ಬಗ್ಗೆ ಚರ್ಚೆ ಮಾಡಲು ಯಾವುದೇ ಮಾಧ್ಯಮ ಅಥವಾ ಸಾರ್ವಜನಿಕ ವೇದಿಕೆಗಳಲ್ಲಿ ಬಹಿರಂಗ ಚರ್ಚೆಗೆ ಬರಲಿ. ಕುಮಾರಸ್ವಾಮಿ, ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಆರ್. ಅಶೋಕ್ ಯಾರಾದರೂ ಚರ್ಚೆಗೆ ಬರಲಿ, ನಾನು ಚರ್ಚೆ ಮಾಡಲು ಸಿದ್ಧನಿದ್ದೇನೆ ಎಂದು ಸವಾಲೆಸೆದರು.


ಷಡ್ಯಂತರ ರೂಪಿಸಿ ಪಾದಯಾತ್ರೆ : ದೇಶದಲ್ಲಿ ಪಾದಯಾತ್ರೆ ಹೋರಾಟ ಪರಿಚಯಿಸಿದ್ದೇ ಕಾಂಗ್ರೆಸ್ ಪಕ್ಷ. ಈಗ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು, ಮುಖ್ಯಮಂತ್ರಿಗಳ ಹೆಸರಿಗೆ ಮಸಿ ಬಳಿದು ಪ್ರಚಾರ ಪಡೆಯಲು ಬಿಜೆಪಿಯವರು ಷಡ್ಯಂತ್ರ ರೂಪಿಸಿ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಡಿಕೆಶಿ ತಿಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್