LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಸ್ನೇಹಿತರು ಜನಾಕ್ರೋಶ ಯಾತ್ರೆ ಮಾಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ಬೆಂಗಳೂರು: "ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿ ಜನ ಸಾಮಾನ್ಯರ ಮೇಲೆ ಹೊರೆ ಹೆಚ್ಚಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಸ್ನೇಹಿತರು ಜನಾಕ್ರೋಶ ಯಾತ್ರೆ ಮಾಡಲಿ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.


ಎಲ್​​ಪಿಜಿ ಹಾಗೂ ತೈಲ ದರ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರದ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿ, ರಾಜ್ಯ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಬಿಜೆಪಿ ಸ್ನೇಹಿತರು ಜನಾಕ್ರೋಶ ಯಾತ್ರೆ ಮಾಡುತ್ತಿದ್ದು, ಇವರಿಗೆ ಕೇಂದ್ರ ಬಿಜೆಪಿ ಸರ್ಕಾರ ಬೆಲೆ ಏರಿಕೆ ಮಾಡಿ ಕಪಾಳಮೋಕ್ಷ ಮಾಡಿದೆ. ಬಿಜೆಪಿ ನಾಯಕರು ತಮ್ಮ ಆಕ್ರೋಶವನ್ನು ಕೇಂದ್ರ ಸರ್ಕಾರದ ವಿರುದ್ಧ ಮುಂದುವರಿಸಲಿ ಎಂದು ನಮ್ರತೆಯಿಂದ ಮನವಿ ಮಾಡುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ.


ಬಿಜೆಪಿಯವರು ಏತಕ್ಕಾಗಿ ಪ್ರತಿಭಟನೆ ಮಾಡುತ್ತಿಲ್ಲ?: ಮತ್ತೊಂದೆಡೆ, ಏ.3ರಂದು ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್, ಈ ಹಿಂದೆ ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗಿತ್ತು. ಈಗ ಟೋಲ್ ದರ ಏಕೆ ಹೆಚ್ಚಳವಾಗಿದೆ. ಇದರ ಬಗ್ಗೆ ಬಿಜೆಪಿಯವರು ಏತಕ್ಕಾಗಿ ಪ್ರತಿಭಟನೆ ಮಾಡುತ್ತಿಲ್ಲ ಎಂದು ಕಿಡಿಕಾರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್