LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬೆಂಗಳೂರಿನ ಕಟ್ಟಡ ಕುಸಿತದಲ್ಲಿ ಮೃತರ ಸಂಖ್ಯೆ 9 ಕ್ಕೆ ಏರಿಕೆ

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತರ ಸಂಖ್ಯೆ ಒಂಬತ್ತಕ್ಕೇರಿದೆ. ಇಂದು ಅವಶೇಷಗಳ ತೆರವು ಕಾರ್ಯಾಚರಣೆ ಸಂದರ್ಭದಲ್ಲಿ ಏಳುಮಲೈ ಎಂಬಾತನ ಮೃತದೇಹ ಪತ್ತೆಯಾಗಿದ್ದು, ಅವಶೇಷಗಳ ತೆರವು ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ ಡಿ.ದೇವರಾಜ್ ಮಾಹಿತಿ ನೀಡಿದ್ದಾರೆ.


ಆರು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿದು, ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದ ಘಟನೆ ಮಂಗಳವಾರ ಮಧ್ಯಾಹ್ನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಾಬುಸಪಾಳ್ಯದಲ್ಲಿ ನಡೆದಿತ್ತು. NDRF, SDRF ಹಾಗೂ ಪೊಲೀಸರು ಕಳೆದ ಮೂರು ದಿನಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಸಿದ್ದರು.


ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದ ಹೆಣ್ಣೂರು ಠಾಣೆ ಪೊಲೀಸರು ಕಟ್ಟಡದ ಮಾಲೀಕ ಮುನಿರಾಜು ರೆಡ್ಡಿಯ ಪುತ್ರ ಭುವನ್ ರೆಡ್ಡಿಯನ್ನು ಈಗಾಗಲೇ ಬಂಧಿಸಿದ್ದಾರೆ. ಅಲ್ಲದೇ ಕಟ್ಟಡದ 4ನೇ ಅಂತಸ್ತಿನವರೆಗೂ ನಿರ್ಮಾಣದ ಜವಾಬ್ದಾರಿ ವಹಿಸಿದ್ದ ಗುತ್ತಿಗೆದಾರ ಮುನಿಯಪ್ಪನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್