LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bellary

ಪೂರ್ವಭಾವಿ ಸಭೆಯಲ್ಲಿ ನಿರ್ಧಾರ: ಮಹನೀಯರ ಜಯಂತಿಗಳ ಅರ್ಥಪೂರ್ಣ ಆಚರಣೆ - ತಹಶೀಲ್ದಾರ ಶೇಷಾವಲಿ


ಬಳ್ಳಾರಿ,ಆ.19 ಜಿಲ್ಲಾ ಕೇಂದ್ರದಲ್ಲಿ ಮಹನೀಯರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಸಹಾಯಕ ಆಯುಕ್ತರ ಕಚೇರಿಯ ತಹಶೀಲ್ದಾರ ಶೇಷಾವಲಿ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ವಿವಿಧ ಮಹನೀಯರ ಜಯಂತಿಗಳನ್ನು ಆಚರಿಸುವ ಕುರಿತು ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರಿ ನಿಯಮಾವಳಿಗಳ ಅನ್ವಯ ಮಹನೀಯರ ಜಯಂತಿಗಳನ್ನು ಕೇವಲ ಸಾಂಪ್ರದಾಯಿಕ ಕಾರ್ಯಕ್ರಮವನ್ನಾಗಿ ಸೀಮಿತಗೊಳಿಸದೆ, ಅವರ ಆದರ್ಶ, ತತ್ವ ಹಾಗೂ ಸಮಾಜಮುಖಿ ಸಂದೇಶಗಳನ್ನು ಯುವ ಪೀಳಿಗೆಗೆ ಮುಟ್ಟಿಸುವ ನಿಟ್ಟಿನಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದರು.
ಆ.28 ರಂದು ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣಗುರು ಜಯಂತಿ, ಆ.30 ರಂದು ಕಾಯಕ ಶರಣ ನುಲಿಯ ಚಂದಯ್ಯ ಜಯಂತಿ ಹಾಗೂ ಸೆ.04 ರಂದು ಶ್ರೀಕೃಷ್ಣ ಜಯಂತಿ ಕಾರ್ಯಕ್ರಮಗಳನ್ನು ವಿಜೃಂಭಣೆಯಿAದ, ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ನಿರ್ಧರಿಸಲಾಯಿತು.
ಜಯಂತಿ ಕಾರ್ಯಕ್ರಮ ದಿನಗಳಂದು ಬೆಳಿಗ್ಗೆ 09 ಗಂಟೆಗೆ ನಗರದ ಮುನಿಸಿಪಲ್ ಕಾಲೇಜು ಮೈದಾನದಿಂದ ಗಡಿಗಿ ಚೆನ್ನಪ್ಪ ವೃತ್ತ- ಹಳೆಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗ- ಹೆಚ್.ಆರ್.ಗವಿಯಪ್ಪ ವೃತ್ತದ ಮಾರ್ಗವಾಗಿ ಡಾ.ಜೋಳದ ರಾಶಿ ದೊಡ್ಡನಗೌಡ ರಂಗಮAದಿರದ ವೇದಿಕೆ ಕಾರ್ಯಕ್ರಮದವರೆಗೆ ಸಾಂಸ್ಕೃತಿಕ ಕಲಾ ತಂಡಗಳು ಒಳಗೊಂಡ ಮೆರವಣಿಗೆ ನಡೆಯಲಿದೆ. ಬಳಿಕ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಕಾರ್ಯಕ್ರಮ ನಡೆಯುವ ವೇದಿಕೆ ನಿರ್ವಹಣೆ, ಆಹ್ವಾನ ಪತ್ರಿಕೆ ಮುದ್ರಣ ಹಾಗೂ ವಿತರಣೆ, ಗಣ್ಯರ ಉಪಸ್ಥಿತಿ, ಉಪನ್ಯಾಸಕರ ಆಯ್ಕೆ, ಭಕ್ತಿ ಸಂಗೀತ ಮತ್ತು ಮೂಲಸೌಕರ್ಯಗಳ ಕುರಿತು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಕ್ತ ಜವಾಬ್ದಾರಿ ಹಂಚಿಕೆ ಮಾಡಲಾಯಿತು.
ಬ್ಯಾನರ್, ಪಟಾಕಿ, ಡಿಜೆ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿದೆ ನಿಷೇಧಿಸಲಾಗಿದೆ. ಮಹನೀಯರ ಎಲ್ಲಾ ಜಯಂತಿ ಕಾರ್ಯಕ್ರಮಗಳಲ್ಲಿ ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು, ಮುಖಂಡರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ. ನಾಗರಾಜ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮಗಳ ರೂಪುರೇಷೆ ವಿವರಿಸಿದರು.
ಈ ವೇಳೆ ಪೊಲೀಸ್ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಮಹಾನಗರ ಪಾಲಿಕೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದು, ಸಲಹೆ-ಸೂಚನೆಗಳನ್ನು ಹಂಚಿಕೊAಡರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾರದ ಗಡುವು ಠರಾವು ಅಂಗೀಕರಿಸದಿದ್ದರೆ ಬುಧವಾರ ಬೃಹತ್ ಪ್ರತಿಭಟನೆ: ಆರ್. ಅಭಿಲಾಷ್ ಎಚ್ಚರಿಕೆ. ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ:ಈಶ್ವರ ಖಂಡ್ರೆರೈತ ಸಂಘ ಸ್ಥಾಪನೆಯಿಂದ ರೈತರ ಸಮಸ್ಯ ಪರಿಹಾರ :ಚೂನಪ್ಪ ಪೂಜೇರಿ ಯುವಶಕ್ತಿ ರಾಷ್ಟçಶಕ್ತಿಯಾಗಲಿ: ಡಾ. ಇಂದ್ರಾಣಿ ಕರೆಪೂರ್ವಭಾವಿ ಸಭೆಯಲ್ಲಿ ನಿರ್ಧಾರ: ಮಹನೀಯರ ಜಯಂತಿಗಳ ಅರ್ಥಪೂರ್ಣ ಆಚರಣೆ - ತಹಶೀಲ್ದಾರ ಶೇಷಾವಲಿಬಿಮ್ಸ್  ನಿರ್ದೇಶಕ ಡಾ. ಗಂಗಾಧರ ಗೌಡರವರನ್ನು  ನಿರ್ದೇಶಕರನ್ನಾಗಿ ಮುಂದುವರೆಸಬೇಡಿ : ಕೆ. ಪಿ. ಹಸೇನ್ ಅಗ್ರಹ ಕನಿಷ್ಠ ವೇತನ ಜಾರಿಗೊಳಿಸಲು ಗ್ರಾಮ ಪಂಚಾಯಿತಿ ನೌಕರರಿಂದ ಧರಣಿ  : 13 ಬೇಡಿಕೆಗಳ ಈಡೇರಿಕೆಗೆ ಒತ್ತಾಯ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಅಹೋರಾತ್ರಿ ಧರಣಿ ಎರಡನೇಯ ದಿನದ ಹೋರಾಟ.ಕೆಪಿಎಸ್‌ಸಿ ಅಕ್ರಮದ ಬೆನ್ನತ್ತಿದ ಇಡಿ : ಕಿತ್ತೂರಿನಲ್ಲಿ ಸಂಬಂಧಿಕರ ಮನೆ ಮೇಲೆ ತಪಾಸಣೆ*ಮೂನ್ ವಾಕರ್ಸ್ ವತಿಯಿಂದ "ಶ್ರಾವಣ ಸಂಭ್ರಮ" ಕಾರ್ಯಕ್ರಮ*