Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲೋಕಸಭಾ ಚುನಾವಣಾ ಬಹಿಷ್ಕರಿಸಲು ನಿರ್ಧಾರ 




ಕುಕನೂರು18:  ಗುದ್ನೆಪ್ಪನ ಮಠದಲ್ಲಿ ಸರ್ಕಾರಿ ಕಟ್ಟಡಗಳನ್ನು ನಿರ್ಮಾಣ ಮಾಡದಂತೆ ತಹಸಿಲ್ದಾರ್ ಗೆ ಮನವಿ. ಪ್ರತಿವರ್ಷ ಹೊಸ್ತಲ ಹುಣ್ಣಿಮೆಯ ದಿನದಂದು ನಡೆಯುವ ಗುದ್ನೆಶ್ವರ ಜಾತ್ರೆಗೆ ಲಕ್ಷಾಂತರ ಜನ ಸೇರುತ್ತಾರೆ, ವರ್ಷದಿಂದ ವರ್ಷಕ್ಕೆ ಭಕ್ತಾದಿಗಳ ಸಂಖ್ಯೆ ಹೆಚ್ಚಾಗುತ್ತದೆ ಆದರೆ ಈಗ ಸರ್ಕಾರ ಗುದ್ನೆಪ್ಪನ ಮಠದಲ್ಲಿ ಗುರುತಿಸಿರುವ ಸರ್ಕಾರಿ ಕಚೇರಿಗಳಾದ ತಹಸಿಲ್ದಾರ್ ಕಟ್ಟಡ, ಬುದ್ಧ ಬಸವ ಅಂಬೇಡ್ಕರ್ ಭವನ, ನ್ಯಾಯಾಲಯ ಕಟ್ಟಡಗಳನ್ನು ನಿರ್ಮಾಣ ಮಾಡಲು ಮುಂದಾಗುತ್ತಿದೆ ಇದರಿಂದ ಗುದ್ನೇಪ್ಪನ ಮಠದ ನಿವಾಸಿಗಳಿಗೆ  ಸೇವಾದಾರರಿಗೆ ಹಾಗೂ  ಜಾತ್ರೆಗೆ ಬರುವ ಭಕ್ತಾದಿಗಳಿಗೆ ಅನಾನುಕೂಲವಾಗಲಿದ್ದು ಕೂಡಲೇ ಜಾಗವನ್ನು ಸ್ಥಳಾಂತರ ಮಾಡಬೇಕು ಇಲ್ಲದಿದ್ದರೆ ಬರುವ ಲೋಕಸಭಾ ಚುನಾವಣೆಯನ್ನು ಬಹಿಷ್ಕಾರ ಮಾಡಲಾಗುವುದು ಎಂದು ವಾರ್ಡಿನ ನಿವಾಸಿಗಳು ತಹಸೀಲ್ದಾರ್ ರವರಿಗೆ ಮನವಿ ಮಾಡಿದರು.


ಮಠದ 18 ಜನ ಸೇವಾ ದಾರರು ಸುಮಾರು ವರ್ಷಗಳಿಂದ ಸೇವೆಯನ್ನು ಮಾಡುತ್ತಾ ಬಂದಿದ್ದು ಸೇವಾದಾರರಿಗೆ ಉಪಜೀವನ ನಡೆಸಲು ಮಠದ ಜಮೀನುಗಳನ್ನು ನೀಡುವಂತೆ ನ್ಯಾಯಾಲಯ ಆದೇಶ ಮಾಡಿದೆ ಹಾಗೂ ನಮ್ಮ ಕುಟುಂಬಗಳು ಅದೇ ಜಮೀನಿನ ಮೇಲೆ ಅವಲಂಬಿತವಾಗಿದ್ದು ವ್ಯವಸಾಯ ಮಾಡಿಕೊಂಡು ಜೀವನ ನಡೆಸುತ್ತಿದ್ದೇವೆ, ವ್ಯವಸಾಯ ಮಾಡುವ ಜಮೀನನ್ನೇ ತಾವು ಸರ್ಕಾರಿ ಕಚೇರಿಗಳಿಗೆ ಜಾಗವನ್ನು ಗುರುತು ಮಾಡಿದ್ದು ಇದರಿಂದ 40 ರಿಂದ 50 ಕುಟುಂಬಗಳು ಬೀದಿ ಪಾಲಾಗುತ್ತವೆ, ಕುಕನೂರಿನ ಪಟ್ಟಣದ ಕೇಂದ್ರ ಸ್ಥಾನದಲ್ಲಿಯೇ ಸರ್ಕಾರಿ ಕಟ್ಟಡಗಳು ನಿರ್ಮಿಸಲು ಸಾಕಷ್ಟು ಸರ್ಕಾರಿ ಜಮೀನುಗಳಿವೆ ಆದರೆ ಉದ್ದೇಶ ಪೂರಕವಾಗಿಯೇ ಗುದ್ನೇಪ್ಪನ ಮಠದ ಆಸ್ತಿಯ ಮೇಲೆ ಕಣ್ಣು ಬಿದ್ದಿದೆ.


ಪ್ರತಿವರ್ಷ ಅಜ್ಜನ ಜಾತ್ರೆಗೆ ಬರುವ ಲಕ್ಷಾಂತರ ಭಕ್ತಾದಿಗಳಿಗೂ ಕೂಡ ಇದರಿಂದ ತೊಂದರೆ ಉಂಟಾಗಲಿದ್ದು, ಇಷ್ಟು ವರ್ಷಗಳ ಕಾಲ ಮಠದ ಸೇವೆಯನ್ನು ಮಾಡುತ್ತಾ ಬಂದಿರುವ ಸೇವಾದಾರರಿಗೆ ಹಾಗೂ ಭಕ್ತಾದಿಗಳಿಗೆ ತೊಂದರೆ ಆಗದಂತೆ ಗುದ್ನೇಪ್ಪನ ಮಠದ ಜಾಗವನ್ನು ಬಿಟ್ಟು ಬೇರೆ ಕಡೆ ಸರ್ಕಾರಿ ಕಟ್ಟಡಗಳನ್ನು ನಿರ್ಮಿಸಲು ಮುಂದಾಗಬೇಕು ಇಲ್ಲದಿದ್ದರೆ ಮುಂದೆ ಬರಲಿರುವ ಲೋಕಸಭಾ ಚುನಾವಣೆಯನ್ನು ವಾರ್ಡಿನ ಅಷ್ಟು ನಿವಾಸಿಗಳು ಚುನಾವಣೆಯನ್ನು ಬಹಿಷ್ಕಾರ ಮಾಡಲಾಗುವುದು ಎಂದು ಮನವಿ ಮಾಡಿಕೊಂಡಿದ್ದಾರೆ.


 ತಹಶೀಲ್ದಾರ್ ಕಚೇರಿ ಸಿಬ್ಬಂದಿ ಗಿರೀಶ್ ಮನವಿ ಸ್ವೀಕರಿಸಿದರು.ಈ ಸಂದರ್ಭದಲ್ಲಿ ವಾರ್ಡಿನ ನಿವಾಸಿಗಳಾದ ಗುದ್ನಯ್ಯ ಬಂಡಿ, ರುದ್ರಯ್ಯ ಗಲಬಿ, ಚನ್ನಬಸಯ್ಯ ದೂಪದ ,ರುದ್ರಯ್ಯ ಇನಾಮದಾರ್, ಶರಣಯ್ಯ ಹುಣಸಿಮರದ, ಸಿದ್ದಲಿಂಗಯ್ಯ ಬಂಡಿ, ಜಗನ್ನಾಥ್ ಭೋವಿ, ರುದ್ರಯ್ಯ ವಿರುಪಣ್ಣವರ್, ಮಲ್ಲಯ್ಯ ಹುಣಿಸಿಮರದ ಶರಣಯ್ಯ ಹೂವಿನಾಳ, ಸಂಗಯ್ಯ ಬಂಡಿ ಇತರರು ಇದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ