Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬರಪೀಡಿತ ರಾಜ್ಯ ಎಂದು ಘೋಷಿಸಿ

ಬಳ್ಳಾರಿ,ಜು.21: ರಾಜ್ಯದಲ್ಲಿ ಉಂಟಾಗಿರುವ ತೀವ್ರ ಬರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯವನ್ನು ಕೂಡಲೇ ಬರಪೀಡಿತ ರಾಜ್ಯ ಎಂದು ಘೋಷಿಸಿ, ರೈತರು ಹಾಗೂ ಕೃಷಿ ಕಾರ್ಮಿಕರ ರಕ್ಷಣೆಗೆ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ   ಬಳ್ಳಾರಿ ಜಿಲ್ಲಾ ಸಮಿತಿ ಸರ್ಕಾರವನ್ನು ಆಗ್ರಹಿಸಿದೆ.
ಈ ಸಂಬAಧ ಪ್ರಧಾನ ಮಂತ್ರಿ ಮತ್ತು ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಅಧ್ಯಕ್ಷ ಗೋವಿಂದ್ ಮಾತನಾಡುತ್ತಾ ರಾಜ್ಯದಾದ್ಯಂತ ಬರಗಾಲ ಘೋಷಿಸಿ ಸಮರ್ಪಕ ಬರ ಪರಿಹಾರ ನೀಡುವುದು, ಓಆಖಈ ವಿಪತ್ತು ಪರಿಹಾರ ಮಾರ್ಗಸೂಚಿಗಳನ್ನು ಪ್ರಸಕ್ತ ಪರಿಸ್ಥಿತಿಗೆ ಅನುಗುಣವಾಗಿ ಪರಿಷ್ಕರಿಸಿ ಪ್ರತಿ ಎಕರೆಗೆ ಕನಿಷ್ಠ ೫೦,೦೦೦ ಪರಿಹಾರ ನೀಡುವುದು, ರೈತರ ಸಾಲ ಮನ್ನಾ ಮಾಡುವುದು, ಗ್ರಾಮೀಣ ಜನರಿಗೆ ವರ್ಷಪೂರ್ತಿ ಉದ್ಯೋಗ ಖಾತರಿಪಡಿಸುವುದು, ಪ್ರತಿಯೊಂದು ಕುಟುಂಬಕ್ಕೂ ವರ್ಷಕ್ಕೆ ಸಾಕಾಗುವಷ್ಟು ದಿನಸಿ ಕಿಟ್ ವಿತರಿಸುವುದು ಹಾಗೂ ಜಾನುವಾರುಗಳ ರಕ್ಷಣೆಗಾಗಿ ರಾಜ್ಯದಾದ್ಯಂತ ಗೋಶಾಲೆಗಳನ್ನು ತೆರೆಯುವಂತೆ ಒತ್ತಾಯಿಸಲಾಗಿದೆ.
ಬರದ ತೀವ್ರತೆಯಿಂದ ರೈತರು, ಕೃಷಿ ಕಾರ್ಮಿಕರು ಮತ್ತು ಗ್ರಾಮೀಣ ಬಡಜನರ ಬದುಕು ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಯಾವುದೇ ವಿಳಂಬ ಮಾಡದೆ ತಕ್ಷಣ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಬೇಡಿಕೆಗಳನ್ನು ಈಡೇರಿಸದಿದ್ದರೆ ರಾಜ್ಯದಾದ್ಯಂತ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಂIಏಏಒS ಬಳ್ಳಾರಿ ಜಿಲ್ಲಾ ಸಮಿತಿ ಎಚ್ಚರಿಸಿದೆ.
ಸಂಘದ ರಾಜ್ಯ ಸಮಿತಿ ಸದಸ್ಯ ಈ.ಹನುಮಂತಪ್ಪ, ಜಿಲ್ಲಾ ಕಾರ್ಯದರ್ಶಿ ಗುರಳ್ಳಿ   ರಾಜ, ನರೇಗಾ ಉಳಿಸಿ ಸಮಿತಿ ಜಿಲ್ಲಾಧ್ಯಕ್ಷರಾದ ಕಲ್ಲುಕಂಬ ಪಂಪಾಪತಿ ಮಾತನಾಡಿದರು. ಬಳ್ಳಾರಿ ತಾಲೂಕು ಅಧ್ಯಕ್ಷ ಈರಣ್ಣ, ಕಾರ್ಯದರ್ಶಿ ಧನರಾಜ್, ಕುರುಗೋಡು ತಾಲ್ಲೂಕು ಅಧ್ಯಕ್ಷ ಲಿಂಗಪ್ಪ, ಕಾರ್ಯದರ್ಶಿ ಕೆರೇಕೆರೆ ಬಸವರಾಜ್, ಜಿಲ್ಲಾ ಸಮಿತಿ ಸದಸ್ಯರಾದ ಹೋನ್ನುರಪ್ಪ, ಮಲ್ಲಪ್ಪ, ಸಿದ್ದಲಿಂಗ,  ರೈತರಾದ ತಿಮ್ಮಯ್ಯ, ಹಡ್ಲಿಗಿ ಚೆನ್ನಪ್ಪ, ಕಾಗಿ ದ್ಯಾವಣ್ಣ , ಕರಿಬಸವ,  ಸೇರಿದಂತೆ ಇತರರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST