LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bijapur

ತಾಳಿಕೋಟೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ * ತಾರತಮ್ಯ ನೀತಿ ಕೈಬಿಡಿ

ಸರ್ಕಾರದ ವಿರೂದ್ದ ಬೀದಿಗಿಳಿದು ಹೋರಾಟ-ಕೂಚಬಾಳ ಏಚ್ಚರಿಕೆ


ತಾಳಿಕೋಟೆ,  ವಿಜಯಪುರ ಜಿಲ್ಲೆಯ ೧೩ ತಾಲ್ಲೂಕುಗಳ ಪೈಕಿ ೧೦ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ, ತಾಳಿಕೋಟೆ, ಇಂಡಿ ಹಾಗೂ ಚಡಚಣ ತಾಲ್ಲೂಕುಗಳನ್ನು ಕೈಬಿಟ್ಟಿರುವ ಸರ್ಕಾರವು ರೈತರಿಗೆ ಅನ್ಯಾಯವೆಸಗಲು ಹೋರಟಿದೆ ಎಂದು ರೈತ ಮುಖಂಡರು ಹಾಗೂ ಬಿಜೆಪಿ ಮಾಜಿ ಜಿಲ್ಲಾಅಧ್ಯಕ್ಷ ಆರ್.ಎಸ್.ಪಾಟೀಲ(ಕೂಚಬಾಳ) ಅವರು ಹೇಳಿದರು.
         ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ತಾಳಿಕೋಟೆ ಬರಪೀಡಿತ ತಾಲೂಕು ಘೋಷಣೆಗೆ ಆಗ್ರಹಿಸಿ ಪ್ರವಾಸಿ ಮಂದಿರದ ಪಕ್ಕದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ ೧೫ ದಿನದಂದು ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ ಅವರು ರೈತ ಸಂಘಟನೆಗಳ ನಿರಂತರ ಹೋರಾಟದ ಹಿನ್ನೆಲೆಯಲ್ಲಿ ಜಿಲ್ಲೆಯ ೧೩ ತಾಲ್ಲೂಕುಗಳ ಪೈಕಿ ೧೦ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಆದರೆ ತಾಳಿಕೋಟೆ ಸೇರಿದಂತೆ ಮೂರು ತಾಲ್ಲೂಕುಗಳನ್ನು ಕೈಬಿಟ್ಟಿರುವುದು ರೈತರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಕೂಡಲೇ ತಾಳಿಕೋಟೆ ತಾಲೂಕು ಬರಪೀಡಿತ ತಾಲೂಕೆಂದು ಘೋಷಿಸಬೇಕು ಇಲ್ಲದಿದ್ದರೆ ತಾಲೂಕಿನ ಎಲ್ಲ ರೈತರು ದೊಡ್ಡ ಮಟ್ಟದ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಸರ್ಕಾರದ ಜನಪ್ರೀತಿನಿಧಿಗಳು ತಿರುಗಾಡುವದೇ ಕಷ್ಟಸಾದ್ಯವೆಂಬ ಪರಸ್ಥಿತಿ ಬರಲಿದೆ ಕೂಡಲೇ ಸರ್ಕಾರ ಏಚ್ಚೆತ್ತುಕೊಂಡು ರೈತರ ಪರವಾಗಿ ನಿಲ್ಲುವಂತಾಗಬೇಕೆಂದರು.
      ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ಮಾತನಾಡಿ "ತಾಳಿಕೋಟೆ ತಾಲ್ಲೂಕನ್ನು ಬರಪೀಡಿತ ಪಟ್ಟಿಯಿಂದ ಕೈಬಿಡಲು ಸರ್ಕಾರ ಸೂಕ್ತ ಕಾರಣ ನೀಡಬೇಕು. ತಾಲ್ಲೂಕಿನಲ್ಲಿ ಸಮರ್ಪಕ ಮಳೆಯಾಗಿದ್ದು, ಬೆಳೆ ಉತ್ತಮವಾಗಿದೆ ಎಂಬುದನ್ನು ಸರ್ಕಾರ ಸಾಬೀತುಪಡಿಸಲಿ. ಸರ್ಕಾರಕ್ಕೆ ವಾಸ್ತವ ಸ್ಥಿತಿಯ ಬಗ್ಗೆ ಸಂಶಯವಿದ್ದರೆ ಮುಖ್ಯಮಂತ್ರಿ, ಕಂದಾಯ ಹಾಗೂ ಕೃಷಿ ಸಚಿವರು ಖುದ್ದಾಗಿ ತಾಳಿಕೋಟೆಗೆ ಆಗಮಿಸಿ ರೈತರ ಜಮೀನುಗಳಿಗೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಲಿ" ಎಂದು ಆಗ್ರಹಿಸಿದ ಅವರು ಬೇಡಿಕೆ ಈಡೇರಿಸಲು ಸರ್ಕಾರ ವಿಳಂಬ ಮಾಡಿದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಹಂತ ಹಂತವಾಗಿ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.
       ಸಂಘಟನೆಯ ತಾಲ್ಲೂಕು ಉಪಾಧ್ಯಕ್ಷ ರಾಮನಗೌಡ ಹಾದಿಮನಿ ಧರಣಿಯನ್ನುದ್ದೇಶಿಸಿ ಮಾತನಾಡಿದರು.
      ಧರಣಿಯಲ್ಲಿ ಬಾಲಪ್ಪಗೌಡ ಲಿಂಗದಳ್ಳಿ, ದೊಡ್ಡಪ್ಪಗೌಡ ಹೊಸಳ್ಳಿ, ಸಂಗನಗೌಡ ಟಕ್ಕಳಕಿ, ಭೀಮನಗೌಡ ಬಿರಾದರ, ಸಿದ್ದನಗೌಡ ಬಿರಾದರ, ಶಿವಯ್ಯ ಹಿರೇಮಠ, ಚಂದ್ರಯ್ಯ ಹಿರೇಮಠ, ವಿರೂಪಾಕ್ಷಪ್ಪ ಹಿರೇಮಠ, ಲಿಂಗನಗೌಡ ಕಂಚಲಕಾಯಿ, ಮಲ್ಲನಗೌಡ ಪಡಗನೂರ, ಸುಭಾಷ ದುದಗಿ, ಹುಸೇನಿ ಇನಾಮದರ, ಮಲ್ಲಣ್ಣ ಸಾತಗಟ್ಟಿ, ರಮೇಶ ಬಡಿಗೇರ, ಅಲ್ಲಾಭಕ್ಷ ಇನಾಮದರ, ಲಿಂಗನಗೌಡ ಕಾಮರೆಡ್ಡಿ, ಅರುಣಗೌಡ ಬಿರಾದಾರ ಸೇರಿದಂತೆ ಹಲವು ರೈತ ಮುಖಂಡರು ಭಾಗವಹಿಸಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ