Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅರಣ್ಯ ನಾಶದಿಂದ ಪ್ರಕೃತಿಯ ಸಮತೋಲನ ಹಾಳಾಗುತ್ತಿದೆ : ಶ್ರೀಶೈಲ ಗುಡಮೆ 

ಮೂಡಲಗಿ : ಪರಿಸರ ನಮ್ಮ ಬದುಕಿನ ಆಧಾರವಾಗಿದ್ದು ಮಾಲಿನ್ಯ ಮತ್ತು ಅರಣ್ಯ ನಾಶದಿಂದ ಪ್ರಕೃತಿಯ ಸಮತೋಲನ ಹಾಳಾಗುತ್ತಿದೆ ಎಂದು ತಹಶೀಲ್ದಾರ ಶ್ರೀಶೈಲ ಗುಡಮೆ ಬೇಸರ ವ್ಯಕ್ತಪಡಿಸಿದರು. 
ವಿಶ್ವ ಪರಿಸರ ದಿನದ ಅಂಗವಾಗಿ ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಧರ್ಮಟ್ಟಿ ಗ್ರಾಮಕ್ಕೆ ಹೋಗುವ ರಸ್ತೆಯ ಎರಡು ಬದಿಯಲ್ಲಿ ನಿಸರ್ಗ ಫೌಂಡೇಶನ್ ವತಿಯಿಂದ ೨೦೦ ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮರ ನೆಡುವುದು, ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವುದು, ನೀರು ಮತ್ತು ವಿದ್ಯುತ್ ಉಳಿಸುವುದು ಪರಿಸರ ರಕ್ಷಣೆಗೆ ಸಹಾಯಕ. ಪರಿಸರವನ್ನು ಕಾಪಾಡುವುದು ನಮ್ಮ ಕರ್ತವ್ಯವಾಗಿದೆ ಎಂದರು. 
ನಿಸರ್ಗ ಫೌಂಡೇಶನ್ ಅಧ್ಯಕ್ಷ ಈರಪ್ಪ ಢವಳೇಶ್ವರ ಮಾತನಾಡಿ, ಪರಿಸರವನ್ನು ನಾವು ರಕ್ಷಿಸಿದರೆ ಅದು ನಮ್ಮನ್ನು ಸಂರಕ್ಷಿಸುತ್ತದೆ. ಪರಿಸರವನ್ನು ಮಲಿನಗೊಳಿಸದೆ, ಪ್ರಕೃತಿಯನ್ನು ಸಂರಕ್ಷಿಸೋಣ ಎಂದು ಕರೆ ನೀಡಿದರು. ಇದೇ ಸಮಯದಲ್ಲಿ ಪರಿಸರ ಸಂರಕ್ಷಣೆ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ, ಸಿಡಿಪಿಓ ಯಲ್ಲಪ್ಪ ಗದಾಡಿ, ಪುರಸಭೆ ಮುಖ್ಯಧಿಕಾರಿ ತುಕಾರಾಮ ಮಾದರ ಅವರಿಗೆ ನಿಸರ್ಗ ಫೌಂಡೇಶನದಿಂದ ಮೂಡಲಗಿ ತಾಲೂಕಾ ಪರಿಸರ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. 
ಈ ಸಂದರ್ಭದಲ್ಲಿ ಬಿಇಓ ಪ್ರಕಾಶ ಹಿರೇಮಠ, ಉಪ ನೋಂದಣಾಧಿಕಾರಿ ಡಿ ಕೆ ಕುಳ್ಳುರ, ಪಿಎಸ್‌ಐ ರಾಜು ಪೂಜೇರಿ, ಹೆಸ್ಕಾಂ ಅಧಿಕಾರಿ ಎಮ್ ಎಸ್ ನಾಗನ್ನವರ, ಅರಣ್ಯ ಇಲಾಖೆಯ ಅಧಿಕಾರಿಗಳಾದ ಅಶೋಕ ಮದುರೆ, ಮಹಾಂತೇಶ ಹಿಪ್ಪರಗಿ, ಪಶು ವೈದ್ಯಧಿಕಾರಿ ಪ್ರಶಾಂತ ಕುರಭೇಟ, ಸೀಮಾ ತುಂಗಳ, ಕೃಷಿ ಇಲಾಖೆ ಅಧಿಕಾರಿ ಪಿ ಎಚ್ ಹುಲಗಬಾಳ, ಮುಖಂಡರಾದ ಸಂತೋ? ಸೋನವಾಲ್ಕರ, ಮರೆಪ್ಪ ಮರೆಪ್ಪಗೋಳ, ಚನ್ನಪ್ಪ ಅಥಣಿ, ಸುರೇಶ ಸಣ್ಣಕ್ಕಿ, ಹಣಮಂತ ಗುಡ್ಲಮನಿ, ನಿಸರ್ಗ ಫೌಂಡೇಶನ್ ಉಪಾಧ್ಯಕ್ಷ ಮಲ್ಲು ಬೋಳನವರ, ಸದಸ್ಯ ಸಂಜು ಕಮತೆ, ಓಂ ಸಂತಾ, ಸುನೀಲ ಗಸ್ತಿ, ಮಲ್ಲು ಹೂಗಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

 

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ