Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೆಹಲಿ ಮದ್ಯನೀತಿ ಹಗರಣ: ಕೇಜ್ರಿವಾಲ್ ನ್ಯಾಯಾಂಗ ಬಂಧನ ಮೇ 7 ರವರೆಗೆ ವಿಸ್ತರಣೆ

ದೆಹಲಿ,23: ದೆಹಲಿ ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್  ಹಾಗೂ ಬಿಆರ್​ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಮೇ 7ರವರೆಗೆ ವಿಸ್ತರಿಸಿದೆ.

ಇದಕ್ಕೂ ಮುನ್ನ ನ್ಯಾಯಾಲಯವು ಕೇಜ್ರಿವಾಲ್ ಅವರನ್ನು ಏಪ್ರಿಲ್ 1 ರಿಂದ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು. ಇದಾದ ಬಳಿಕ ನ್ಯಾಯಾಲಯ ಮತ್ತೊಮ್ಮೆ ಅವರ ನ್ಯಾಯಾಂಗ ಬಂಧನವನ್ನು ಏಪ್ರಿಲ್ 23ರವರೆಗೆ ವಿಸ್ತರಿಸಿತ್ತು.

ಈ ಪ್ರಕರಣದಲ್ಲಿ ಸಿಎಂ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿತ್ತು. ಇದೀಗ ಮೇ 7ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಲಾಗಿದೆ. ಹಾಗೆಯೇ ಬಿಆರ್​ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನೂ ಕೂಡ ವಿಸ್ತರಿಸಲಾಗಿದೆ.

ದೆಹಲಿ ಸರ್ಕಾರದ ಹೊಸ ಅಬಕಾರಿ ನೀತಿಯ ಅಕ್ರಮದಲ್ಲಿ ಸಿಎಂ ಆಗಿ ಅರವಿಂದ್ ಕೇಜ್ರಿವಾಲ್ ಪಾತ್ರ ಗುರುತರವಾಗಿದೆ ಎನ್ನುವುದಕ್ಕೆ, ಮತ್ತು ಅಕ್ರಮದಿಂದ ಬಂದ ಲಾಭವನ್ನು ಮರೆಮಾಚುವ ಪ್ರಯತ್ನ ಮಾಡಿದ್ದರು ಎನ್ನುವುದಕ್ಕೆ ಇಡಿ ಬಲವಾದ ದಾಖಲೆಗಳನ್ನು ಹೊಂದಿದೆ.

ಈ ಪ್ರಕರಣದಲ್ಲಿ ಕೇಜ್ರಿವಾಲ್ ಅವರು ವೈಯಕ್ತಿಕವಾಗಿಯೂ ಮತ್ತು ಎಎಪಿ ಪಕ್ಷದ ಸಂಚಾಲಕರಾಗಿಯೂ ಭಾಗಿಯಾಗಿದ್ದರು ಎಂಬುದು ತಿಳಿದುಬರುತ್ತದೆ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು.

ಚುನಾವಣೆಯ ಹೊಸ್ತಿಲಲ್ಲಿ ರಾಜಕೀಯ ಲಾಭಕ್ಕೋಸ್ಕರ ಬಂಧಿಸಲಾಗಿದೆ ಎನ್ನುವ ಕೇಜ್ರಿವಾಲ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಕೋರ್ಟ್, ‘ಅರ್ಜಿದಾರರು ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧಿತರಾಗಿದ್ದಾರೆ. ಚುನಾವಣಾ ಕಾಲವೋ ಇಲ್ಲವೋ ಆದರೆ, ಕಾನೂನು ಪ್ರಕಾರ ಅವರ ಬಂಧನ ಆಗಿದೆ ಎನ್ನುವುದನ್ನು ಮಾತ್ರ ಕೋರ್ಟ್ ಪರಿಗಣಿಸುತ್ತದೆ ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಈ ಮೊದಲು ಹೇಳಿತ್ತು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ