ಬಳ್ಳಾರಿ, ಸೆ.02:: ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಸರ್ಕಾರ ನಿಗದಿಪಡಿಸಿರುವ ವೇತನವನ್ನು ಕೂಡಲೇ ಜಾರಿಗೊಳಿಸುವಂತೆ ಒತ್ತಾಯಿಸಿ ಕಲ್ಯಾಣ ಕರ್ನಾಟಕ ಕಾರ್ಮಿಕರ ಸಂಘ (ರಿ) ವತಿಯಿಂದ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.
ಬಳ್ಳಾರಿ ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ್ ಅವರಿಗೆ ಮನವಿ ಸಲ್ಲಿಸಿದ ಸಂಘದ ಪದಾಧಿಕಾರಿಗಳು, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ರವಾನಿಸುವಂತೆ ಕೋರಿದರು.
ಡಾಟಾ ಆಪರೇಟರ್‌ಗಳು, ಅಂಬುಲೆನ್ಸ್ ಚಾಲಕರು, ಅಡುಗೆಯವರು, ಅಟೆಂಡರ್‌ಗಳು ಹಾಗೂ ರಾತ್ರಿ ಕಾವಲುಗಾರರು ಸೇರಿದಂತೆ ಹಲವು ಸಿಬ್ಬಂದಿ ಆರೋಗ್ಯ ಇಲಾಖೆ ಹಾಗೂ ಇತರೆ ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಸ್ತುತ ದೊರೆಯುತ್ತಿರುವ ವೇತನದಿಂದ ಮನೆ ಬಾಡಿಗೆ, ಮಕ್ಕಳ ಶಿಕ್ಷಣ ಹಾಗೂ ಕುಟುಂಬದ ದೈನಂದಿನ ಖರ್ಚು ನಿರ್ವಹಿಸುವುದು ಕಷ್ಟವಾಗಿದೆ ಎಂದು ಸಂಘ ತಿಳಿಸಿದೆ.
ಕಾರ್ಮಿಕ ಇಲಾಖೆ ಮೇ 22, 2026ರಂದು ಘೋಷಿಸಿರುವ ವೇತನವನ್ನು ಎಲ್ಲ ಸಂಬಂಧಿತ ಇಲಾಖೆಗಳಲ್ಲಿ ಹೊರಗುತ್ತಿಗೆ ನೌಕರರಿಗೆ ಜಾರಿಗೊಳಿಸಿ ಪಾವತಿಸಬೇಕು. ಕನಿಷ್ಠ ವೇತನಕ್ಕೆ ಸಂಬಂಧಿಸಿದಂತೆ ಎಚ್.ಕೆ. ಪಾಟೀಲ್ ಅಧ್ಯಕ್ಷತೆಯ ಉಪಸಮಿತಿಯು ವರದಿಯನ್ನು ಶೀಘ್ರ ಸಲ್ಲಿಸಬೇಕು ಎಂದು ಆಗ್ರಹಿಸಲಾಯಿತು.
ಹೊರಗುತ್ತಿಗೆ ಪದ್ಧತಿ ರದ್ದುಪಡಿಸಿ, ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ನೌಕರರನ್ನು ಒಳಗುತ್ತಿಗೆ ಅಥವಾ ನೇರ ನೇಮಕಾತಿ ವ್ಯವಸ್ಥೆಯಡಿ ಪರಿಗಣಿಸಬೇಕು. ಉದ್ಯೋಗ ಭದ್ರತೆ ಕಲ್ಪಿಸುವುದರೊಂದಿಗೆ ಪ್ರತಿ ತಿಂಗಳ 10ನೇ ತಾರೀಖಿನೊಳಗೆ ವೇತನ ಪಾವತಿಸುವ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಇದೇ ವೇಳೆ ಖಾಸಗಿ ಸಂಸ್ಥೆಗಳು, ಕಾಲೇಜುಗಳು ಹಾಗೂ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಸರ್ಕಾರದ ನಿಯಮಾನುಸಾರ ಕನಿಷ್ಠ ವೇತನ ನೀಡಬೇಕು. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಿಟ್‌ಗಳ ಟೆಂಡರ್ ಪದ್ಧತಿ ರದ್ದುಪಡಿಸಿ, ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಪಾವತಿಸುವ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಸಂಘ ಆಗ್ರಹಿಸ