Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾಸಕ ಜೆ ಟಿ ಪಾಟೀಲಗೆ ಸಚಿವ ಸ್ಥಾನ ನೀಡಲು ಆಗ್ರಹ


ಬೀಳಗಿ - ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಡಿ ಕೆ ಶಿವುಕುಮಾರ ನೇತ್ರತ್ವದ ಸರ್ಕಾರದ  ಸಚಿವ ಸಂಪುಟದಲ್ಲಿ ಬೀಳಗಿ ಶಾಸಕ  ಜೆ.ಟಿ.ಪಾಟೀಲ ಅವರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಬೀಳಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನಮಂತ ಕಾಖಂಡಕಿ ಆಗ್ರಹಿಸಿದರು.
ಕಾಂಗ್ರೆಸ್ ಮುಖಂಡರು ಶನಿವಾರ  ಕಾಂಗ್ರೆಸ್ ತಾಲ್ಲೂಕು ಘಟಕದ ವತಿಯಿಂದ ಏರ್ಪಡಿಸಿದ್ದ ಪತ್ರಿಕಾಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು. 
ಜೆ.ಟಿ ಪಾಟೀಲ ಅವರು ನಿರಂತರವಾದ ಹೋರಾಟಗಳ ಮೂಲಕ ಜನರ ಸಮಸ್ಯೆಗಳ ಬಗ್ಗೆ ಸದಾ ಗಟ್ಟಿಯಾಗಿ ಧ್ವನಿ ಎತ್ತುವ ಮನೋಭಾವದವರು. ಸಾಮಾಜಿಕ ನ್ಯಾಯ ಮತ್ತು ಸಂವಿಧಾನದ ಮೌಲ್ಯಗಳಿಗೆ ಬದ್ಧರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು
ದಲಿತ ಸಂಘರ್ಷ ಸಮಿತಿಯ ಬೆಳಗಾವಿ ಭಾಗದ ಸಂಚಾಲಕ ಮಹಾದೇವ ಹಾದಿಮನಿ ಮಾತನಾಡಿ ಜೆ.ಟಿ. ಪಾಟೀಲರಿಗೆ ಅನುಭವ, ಹಿರಿತನ, ಪಕ್ಷ ನಿಷ್ಠೆ,ಮೌಲ್ಯಗಳ ಆಧಾರದ ಮೇಲೆ ಮುಂಬರುವ ಕ್ಯಾಬಿನೆಟ್ ನಲ್ಲಿ ಸ್ಥಾನ ನೀಡಬೇಕೆಂದರು.
ಕಾಂಗ್ರೆಸ್ ಪಕ್ಷದ ಕೋಶಾಧ್ಯಕ್ಷ ಅಣವೀರಯ್ಯ ಪ್ಯಾಟಿಮಠ ಮಾತನಾಡಿ ಬೀಳಗಿ ತಾಲ್ಲೂಕಿಗೆ ಇಲ್ಲಿಯವರೆಗೆ ನಮ್ಮ ಪಕ್ಷದ ವಿಧಾನಸಭೆಯ ಶಾಸಕರಾದವರಿಗೆ ಸಚಿವರಾಗುವ ಅವಕಾಶ ಸಿಕ್ಕಿಲ್ಲ ಅಲ್ಲದೆ ಜಿಲ್ಲೆಯ ಹಿರಿಯ ರಾಜಕಾರಣಿಯೂ ಆಗಿರುವ ಜೆ. ಟಿ.ಪಾಟೀಲರಿಗೆ ಸಚಿವ ಸ್ಥಾನ ನೀಡಲೇಬೇಕು ಎಂದು ಹೇಳಿದರು .
ಕಾಂಗ್ರೆಸ್ ಪಕ್ಷದ ಎಸ್.ಸಿ. ಘಟಕದ ತಾಲ್ಲೂಕಾ ಅಧ್ಯಕ್ಷ ಬಸವರಾಜ ಹಳ್ಳದಮಣಿ ಮಾತನಾಡಿ ಉತ್ತರ ಕರ್ನಾಟಕದ ಹಿರಿಯ ರಾಜಕಾರಣಿ ಜೆ.ಟಿ.ಅವರು ಕೃಷಿಯಲ್ಲಿ ಅಪಾರ ಅನುಭವ ಹಾಗೂ ಆಸಕ್ತಿ ಹೊಂದಿರುವಂತಹ ಇವರಿಗೆ ಕೃಷಿ ಸಚಿವರನ್ನಾಗಿ ಮಾಡಬೇಕೆಂದು ಆಗ್ರಹಿಸಿದರು.
 ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಸಿದ್ದು ಸಾರಾವರಿ,ಮುಖಂಡರಾದ ನೇಮಿರಾಜ ದೇಸಾಯಿ ರಸೂಲ್ ಮುಜಾವರ, ಉದಯ ರಜಪೂತ,ಹನಮಂತ ಸೂಳಿಕೇರಿ, ರೇಖಾ ಕಟ್ಟೆಪ್ಪನವರ, ಸದಾಶಿವ ಜೂಂಜುರಿ ಇದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ