ರನ್ನ ಬೆಳಗಲಿ: ಮೇ.೩೧.,ರಾಜ್ಯದ ನೂತನ ಸರ್ಕಾರದಲ್ಲಿ ಹಿರಿಯ ನಾಯಕ,ಮಾಜಿ ಸಚಿವ ಆರ್.ಬಿ. ತಿಮ್ಮಾಪೂರ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಮುಧೋಳ ತಾಲೂಕ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷರಾದ ಸಂಗಪ್ಪ ಅಮಾತಿ ಒತ್ತಾಯಿಸಿದ್ದಾರೆ. ಪಟ್ಟಣದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯದಲ್ಲಿ ಪ್ರಬಲ ಅಹಿಂದ ನಾಯಕರಾಗಿ ಗುರುತಿಸಿಕೊಂಡಿರುವ ತಿಮ್ಮಾಪೂರ ಅವರು ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ವಿಶೇ? ಒತ್ತು ನೀಡುತ್ತಾ ಬಂದಿದ್ದಾರೆ. ನಮ್ಮೂರಿನ ರನ್ನ ವೈಭವದ ಹರಿಕಾರರಾಗಿ,ಅತ್ಯಂತ ಅನುಭವಿ ರಾಜಕಾರಣಿಯಾಗಿರುವ ಅವರು, ಎಡಗೈ ಸಮುದಾಯದ ಉತ್ತರ ಕರ್ನಾಟಕದ ಏಕೈಕ ಪ್ರಮುಖ ನಾಯಕರಾಗಿದ್ದಾರೆ.ಅವರಿಗೆ ಡಿಸಿಎಂ ಸ್ಥಾನ ನೀಡುವುದರಿಂದ ಈ ಭಾಗದ ಅಭಿವೃದ್ಧಿಗೆ ಮತ್ತ? ವೇಗ ಸಿಗಲಿದೆ ಎಂದರು.ಬಾಗಲಕೋಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ ಮೇಟಿ ಅವರ ಗೆಲುವಿನ ಹಿಂದೆ ತಿಮ್ಮಾಪೂರ ಅವರ ಚಾಣಾಕ್ಷನಡೆ ಹಾಗೂ ರಾಜಕೀಯ ತಂತ್ರಗಾರಿಕೆ ಪ್ರಮುಖ ಪಾತ್ರ ವಹಿಸಿದೆ. ಅವರಿಗೆ ಸೂಕ್ತ ಸ್ಥಾನಮಾನ ನೀಡುವುದರಿಂದ ಪಕ್ಷದ ಸಂಘಟನೆಗೆ ಮತ್ತ? ಬಲ ಬಂದಂತಾಗುತ್ತದೆ.ಎಂದು ಅಭಿಪ್ರಾಯಪಟ್ಟಿದ್ದಾರೆ.
