LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಜಿಲ್ಲಾ ಯುವ ಕಾಂಗ್ರೆಸ್  ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಬೆಳಗಾವಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ದೆಹಲಿಯಲ್ಲಿ ಪೊಲೀಸರು ವಶಕ್ಕೆ ಪಡೆದಿರುವುದನ್ನು ಖಂಡಿಸಿ ಹಾಗೂ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಾರ್ತಿಕ್ ಪಾಟೀಲ್ ಅವರ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ನಗರದ ಕಾಂಗ್ರೆಸ್ ಕಚೇರಿಯಿಂದ ಚನ್ನಮ್ಮ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ‘ಮೋದಿ ಹಟಾವೋ, ದೇಶ ಬಚಾವೋ’ ಸೇರಿದಂತೆ ವಿವಿಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ಚುನಾವಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಪಾಡಬೇಕು ಎಂದು ಆಗ್ರಹಿಸಿದರು.
ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ಮಾತನಾಡಿ, ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ಕಾಂಗ್ರೆಸ್ ಹಲವು ಪ್ರಶ್ನೆಗಳನ್ನು ಎತ್ತಿದೆ. ಮತದಾರರ ಪಟ್ಟಿಗೆ ಸಂಬಂಧಿಸಿದ ಅಕ್ರಮಗಳ ಆರೋಪಗಳ ಕುರಿತು ಸಮಗ್ರ ಸ್ಪಷ್ಟನೆ ನೀಡಬೇಕು. ಈ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕಾರ್ತಿಕ್ ಪಾಟೀಲ್ ಮಾತನಾಡಿ, ಚುನಾವಣಾ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸವನ್ನು ಕಾಪಾಡುವುದು ಅತ್ಯಂತ ಮುಖ್ಯ. ಚುನಾವಣಾ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ಇರಬೇಕು. ರಾಹುಲ್ ಗಾಂಧಿ ಅವರು ಎತ್ತಿರುವ ಪ್ರಶ್ನೆಗಳಿಗೆ ಉತ್ತರ ನೀಡುವ ಬದಲು ಅವರನ್ನು ವಶಕ್ಕೆ ಪಡೆದಿರುವುದು ಖಂಡನೀಯ. ಮುಖ್ಯ ಚುನಾವಣಾ ಆಯುಕ್ತರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಪ್ರಜಾಪ್ರಭುತ್ವ ಹಾಗೂ ಸಂವಿಧಾನಾತ್ಮಕ ಮೌಲ್ಯಗಳ ರಕ್ಷಣೆಗೆ ಕಾಂಗ್ರೆಸ್ ಕಾರ್ಯಕರ್ತರು ಹೋರಾಟ ಮುಂದುವರಿಸಲಿದ್ದಾರೆ ಎಂದ ಅವರು, ಅ.26ರಂದು ಮತದಾರರ ಕರಡು ಪಟ್ಟಿ ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಕಾರ್ಯಕರ್ತರು ಮನೆಮನೆಗೆ ತೆರಳಿ ಅರ್ಹ ಮತದಾರರ ಹೆಸರು ಪಟ್ಟಿಯಲ್ಲಿ ಇರುವುದನ್ನು ಪರಿಶೀಲಿಸಬೇಕು ಎಂದು ಕರೆ ನೀಡಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ಬಸವರಾಜ ಶೇಗಾವಿ, ಮಲ್ಲೇಶ ಚೌಗಲಾ, ಯಲ್ಲಪ್ಪ ಶಿಗೆ, ಉದಯ ಗೌಡ, ಮಂಜುನಾಥ ಗಂಗನವರ, ಐಶ್ವರ್ಯ ಸಾದನ್ನವರ, ಶಿವಾ ಹಂಪನವರ, ಪ್ರವೀಣ್ ತುಕ್ಕಾನಟ್ಟಿ, ಪ್ರಕಾಶ ಪಾಟೀಲ್, ಮಡಿವಾಳಪ್ಪ ಅಕ್ಕಿ ಸಾಗರ, ಶಿವು ಪಾಟೀಲ್ ಸೇರಿದಂತೆ ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚೀವ ಎಂ.ಬಿ. ಪಾಟೀಲರ ಜನ್ಮದಿನದ ಅಂಗವಾಗಿ  ಡಾ.ಪ್ರಭುಗೌಡ ಅಭಿಮಾನಿಗಳಿಂದ ಹಣ್ಣು-ಹಂಪಲು ವಿತರಣೆ*ಗುರುಭವನ ಉದ್ಘಾಟನೆ: ಲಕ್ಷ್ಮೀ ಹೆಬ್ಬಾಳಕರ್ ಭಾಗಿ* ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ ಶ್ರೀ ಅಕ್ಷೋಭ್ಯ ತೀರ್ಥರ ೨೧೫ನೇ ಆರಾಧನಾ ಮಹೋತ್ಸವಹಳ್ಳಿಗಳಲ್ಲೇ ಹೆಣ್ಣು ಮಕ್ಕಳು ಹೆಚ್ಚು ಶೋ?ಣೆಗೆ ಒಳಗಾಗುತ್ತಿದ್ದಾರೆ : ನ್ಯಾ. ಸವಿತಾ ಮುಕ್ಕಲ್ಶತಾಯುಷಿ ದಂಪತಿಗಳ ಜನ್ಮಶತಮಾನೋತ್ಸವಕರವೇ ಹೋರಾಟಕ್ಕೆ ಸ್ಪಂದಿಸಿದ ಶಾಸಕರು ಹಾಗೂ ಜಿಲ್ಲಾಧಿಕಾರಿಗಳುರಾಜ್ಯ ಮಟ್ಟದ ಕುಸ್ತಿ ಸ್ಪರ್ಧೆಗೆ ಆದರ್ಶಗೌಡ ಹಳೆಹಡಗಲಿ ಆಯ್ಕೆಕಬ್ಬಿಗೆ ಹೆಚ್ಚಿನ ದರಕ್ಕೆ ಕೇಂದ್ರದ ಸಭೆಯಲ್ಲಿ ಪ್ರಸ್ತಾವನೆ, ದೆಹಲಿಯಲ್ಲಿ ಕೇಂದ್ರ ತಂಡದೊAದಿಗೆ ಸಭೆ. ರೈತರ ಹಿತಾಸಕ್ತಿ ಕಾಪಾಡಲು ಬದ್ದ ಸಹಕಾರಿ ಸಚಿವ ಲಕ್ಷö್ಮಣ ಸವದಿಇಂಗಳಗಿ ಪಿಕೆಪಿಎಸ್ ಅಧ್ಯಕ್ಷರಾಗಿ ಉಮೇಶ ಚವ್ಹಾಣ್ ಭರ್ಜರಿ ಗೆಲುವು