ಅಥಣಿ: ಪ್ರತಿಯೊಬ್ಬ ನಾಗರಿಕನಿಗೂ ಸಾಮಾಜಿಕ ನ್ಯಾಯ ದೊರಕಬೇಕಾದರೇ ಸಂವಿಧಾನದ ಆಶಯಗಳನ್ನು ಪ್ರಜಾಪ್ರಭುತ್ವದ ಪಾಲಿಸುವ ಜತೆಗೆ ಮೌಲ್ಯಗಳನ್ನು ಎತ್ತಿಹಿಡಿಯಬೇಕು ಎಂದು ಜೆ.ಎ.ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಎಂ.ಪಿ.ಮೇತ್ರಿ ಹೇಳಿದರು.
ಇಲ್ಲಿನ ಕೆಎಲ್‌ಇ ಸಂಸ್ಥೆಯ ಖೋತ ಸಭಾಂಗಣದಲ್ಲಿ ತಾಲೂಕಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಯುವ ಸಂಸತ್ ಸಭೆಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳುಸಂವಿಧಾನದ ಆಶಯದಂತೆ ಜನರಿಗಾಗಿ ಕಾರ್ಯನಿರ್ವಹಿಸಬೇಕು. ಜಾತಿ, ಧರ್ಮ, ಮತ, ಪಂಥಗಳ ಭೇದವಿಲ್ಲದೆ ಎಲ್ಲರಿಗೂ ಸಾಮಾಜಿಕ ನ್ಯಾಯ ದೊರೆಯಬೇಕು. ಡಾ.ಬಿ.ರ್ಆ.ಅಂಬೇಡ್ಕರ್ ರೂಪಿಸಿದ
ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದರು.
ವಿಶ್ವಸಂಸ್ಥೆಯು 2007ರಲ್ಲಿ ಅಂತಾರಾಷ್ಟ್ರೀ ಯ ಪ್ರಜಾಪ್ರಭುತ್ವ ದಿನವನ್ನು ಅಧಿಕೃತವಾಗಿ ಘೋಷಿಸಿತು. ಪ್ರಜಾಪ್ರಭುತ್ವದ ಸ್ಥಿತಿಗತಿಗಳ ಕುರಿತು ಅರಿವು ಮೂಡಿಸುವ ಹಾಗೂ ಸರ್ಕಾರ ಮತ್ತು ನಾಗರಿಕರು ಜವಾಬ್ದಾರಿಯುತ ಆಡಳಿತಕ್ಕಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವಲ್ಲಿ ದಿನಾಚರಣೆ ಮಹತ್ವ ದ್ದಾಗಿದೆ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ
ರಾಷ್ಟ್ರವಾದ ಭಾರತದ ಮುಂದಿನ ಪೀಳಿಗೆ ಪ್ರಜಾಪ್ರಭುತ್ವದ ಮೌಲ್ಯಗಳೊಂದಿಗೆ ಬಲಗೊಳ್ಳಲು ಜನಜಾಗೃತಿ ಅಗತ್ಯ ಎಂದರು.
ಸರ್ಕಾರದ ಪಂಚಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಿದ್ದಾರ್ಥ ಶಿಂಗೆ ಮಾತನಾಡಿ, ಅಂಬೇಡ್ಕರ್‌ಆಶಯದಂತೆ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ದೊರೆಯಬೇಕು. ಸಂವಿಧಾನದ ಆಶಯಗಳನ್ನು ನಾವೆಷ್ಟು ಪಾಲಿಸುತ್ತಿದ್ದೇವೆ ಎಂಬುವುದನ್ನು ಆತ್ಮಾವಲೋಕನ
ಮಾಡಿಕೊಳ್ಳಬೇಕು. ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತಷ್ಟು ಗಟ್ಟಿಯಾಗಲು ಜನಜಾಗೃತಿ ಅಗತ್ಯ ಎಂದರು.
ಪುರಸಭೆ ಅಧ್ಯಕ್ಷ ಶಿವಲೀಲಾ ಬುಟಾಳಿ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕಿ ಅರ್ಚನಾ ಪಾಟೀಲ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಆರಂಭದಲ್ಲಿ ಡಾ.ಬಿ.ಆರ್. ಅಂಬೇಡ್ಕರ್‌ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪನಮನ ಸಲ್ಲಿಸಲಾಯಿತು. ಬಳಿಕ ಸಂವಿಧಾನದ ಪೀಠಿಕೆ ಓದಿ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.
ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ದತ್ತ ವಾಸ್ಟರ್, ಪುರಸಭೆ ಉಪಾಧ್ಯಕ್ಷ ಭುವನೇಶ್ವರಿ ಯಕ್ಕಂಚಿ,
ತಾಪಂ ಅಧಿಕಾರಿ ಶಿವಾನಂದ ಕಲ್ಲಾಪುರ, ಉಪತಹಸೀಲ್ದಾರ ಮಹಾದೇವ ಬಿರಾದಾರ, ಸಮಾಜ ಕಲ್ಯಾಣಾಧಿಕಾರಿ ಪರಶುರಾಮ ಪತ್ತಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಮಹಾದೇವ ಕೋಳಿ, ತಾಲೂಕು ವೈದ್ಯಾಧಿಕಾರಿ ಡಾ.ಬಸ್ ಗೌಡ ಕಾಗೆ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ರ್ಆ. ಮುಂಜೆ, ಪುರಸಭೆ ಮುಖ್ಯಾಧಿಕಾರಿ ಅಶೋಕ,ಚಂದ್ರಕಾಂತ ಕಾಂಬಳೆ,ಸದಾಶಿವ ಮಾಂಗ,ಓ ವಾಯ್ ಅರಟಾಳ.ರಾಜಶೇಖರ ಹಿರೇಮನಿ,ಶ್ರುತಿ ಘಟಕಾಂಬಳೆ, ಸೇರಿದಂತೆ ನ್ಯಾಯವಾದಿ ಮಿತೇಶ ಪಟ್ಟಣ,ಮುಖಂರಾದ ಶಿವಾನಂದ ಸೌದಾಗರ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು