Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಜ್ಞಾನ ಮತ್ತು ಗಣಿತ ಹಾಗೂ ಭಾಷಾ ವಿಷಯಗಳ ಪ್ರದರ್ಶನ

ಅಥಣಿ. ಜಾಧವಜಿ ಶಿಕ್ಷಣ ಸಂಸ್ಥೆಯ ಜೆ.ಎ.ಹೈಸ್ಕೂಲನ ವಿದ್ಯಾರ್ಥಿಗಳು ವಾರ್ಷಿಕೋತ್ಸವದ ಅಂಗವಾಗಿ ವಿಜ್ಞಾನ ಮತ್ತು ಗಣಿತ ಹಾಗೂ ಭಾಷಾ ವಿಷಯಗಳ ಮೇಲೆ ಮಾಡಿದ ಪ್ರದರ್ಶನ ಜನಮನ ಸೆಳೆಯುವಲ್ಲಿ ಯಶಸ್ವಿಯಾಯಿತು.

        ಪ್ರದರ್ಶನ ವೀಕ್ಷಿಸಿ ಮಾತನಾಡಿದ ಜಾಧವಜಿ ಶಿಕ್ಷಣ ಸಂಸ್ಥೆಯ ಉಪ ಕಾರ್ಯಾಧ್ಯಕ್ಷ ಸಂಜೀವ ಪಾಟೀಲ, ಪಟ್ಟಣ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತಮ್ಮಲ್ಲಿರುವ ಕೆಲವೇ ಕೆಲವು ಅನಕೂಲತೆಗಳನ್ನು ಉಪಯೋಗಿಸಿಕೊಂಡು ಎಲ್ಲರೂ ಮೆಚ್ಚುವಂತೆ ಗಣಿತ, ವಿಜ್ಞಾನ ಹಾಗೂ ಭಾಷಾ ವಿಷಯಗಳ ಮೇಲೆ ಪ್ರದರ್ಶನ ಅಚ್ಚುಕಟ್ಟಾಗಿ ಮಾಡಿರುವ ಜೊತೆಗೆ ಪ್ರದರ್ಶನಿ ವೀಕ್ಷಿಸಲು ಬಂದ ಪ್ರೇಕ್ಷಕರಿಗೂ ಉತ್ತಮ ರೀತಿಯಲ್ಲಿ ಮಾಹಿತಿ ನೀಡಿರುವುದು ಕೂಡ ಎಲ್ಲರ ಗಮನ ಸೆಳೆದಿದೆ ಎಂದರು.

         ಸಂಸ್ಥೆಯ ಸದಸ್ಯ ಡಾ.ವಿಶ್ವನಾಥ ಕುಲಕರ್ಣಿ ಮಾತನಾಡಿ,  ಮಕ್ಕಳಲ್ಲಿ ಅಡಗಿರುವ ಸೂಪ್ತ ಪ್ರತಿಭೆ ಹೊರ ಬರಲು ಶಾಲೆಗಳಲ್ಲಿ ವಸ್ತು ಪ್ರದರ್ಶನಗಳಂತಹ ಕಾರ್ಯಕ್ರಮಗಳು ಸಹಾಯಕವಾಗುತ್ತದೆ ಎಂದ ಅವರು ವಿದ್ಯಾರ್ಥಿಗಳಿಗೆ ಮನೆಯಲ್ಲಿ ಪಾಲಕರು, ಶಾಲೆಗಳಲ್ಲಿ ಶಿಕ್ಷಕರು ಅಗತ್ಯ ಮಾರ್ಗದರ್ಶನ ಮಾಡಬೇಕು ಆಗ ಮಾತ್ರ ಇಂತಹ ಕಾರ್ಯಕ್ರಮಗಳು ಯಶಸ್ವಿಯಾಗುತ್ತವೆ ಎಂದು ಅಭಿಪ್ರಾಯ ಪಟ್ಟರು.

         ವಿದ್ಯಾರ್ಥಿಗಳ ಪ್ರದರ್ಶನವನ್ನು ಜಾಧವಜಿ ಸಂಸ್ಥೆಯ ರವಿ ಕುಲಕರ್ಣಿ, ಡಾ.ಶ್ರೀವತ್ಸ ಕುಲಕರ್ಣಿ,  ಶಾಲಾ ಮುಖ್ಯಾಧ್ಯಾಪಕ ಜಿ‌.ಐ.ಪಾಟೀಲ, ವಿಜ್ಞಾನ ಶಿಕ್ಷಕಿ ಪ್ರೀತಿ ಕೊಕಟನೂರ, ಗಣಿತ ಶಿಕ್ಷಕ ಎಸ್.ಆರ್.ಪಾಟೀಲ ಸೇರಿದಂತೆ ವಿದ್ಯಾರ್ಥಿಗಳ ಪಾಲಕರು, ಬೇರೆ ಬೇರೆ ಶಾಲೆಗಳ ವಿದ್ಯಾರ್ಥಿಗಳು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ