LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಡೆಂಗ್ಯೂ ಜ್ವರದ ಅಬ್ಬರ: 9,527ಕ್ಕೆ ಏರಿದ ಡೆಂಗ್ಯೂ ಪಾಸಿಟಿವ್ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಜ್ವರದ ಅಬ್ಬರ ಮುಂದುವರಿದಿದೆ. ಇದೇ ಅವಧಿಯಲ್ಲಿ ಪಾಸಿಟಿವ್​ ಪ್ರಕರಣಗಳ ಸಂಖ್ಯೆಯಲ್ಲೂ ಹೆಚ್ಚಳ ಕಂಡು ಬಂದಿದೆ. ಕಳೆದ ದಿನ ರಾಜ್ಯಾದ್ಯಂತ 445 ಜನರಿಗೆ ಡೆಂಗ್ಯೂ ಪಾಸಿಟಿವ್ ದಾಖಲಾಗಿವೆ. ಇದರಿಂದ ಒಟ್ಟೂ ಪ್ರಕರಣಗಳ ಸಂಖ್ಯೆ 9,527ಕ್ಕೆ ಏರಿದೆ.






ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ಹಂಚಿಕೊಂಡಿದ್ದು, ಕಳೆದ 24 ಗಂಟೆಯಲ್ಲಿ 2,630 ಜನರನ್ನು ಡೆಂಗ್ಯೂ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 445 ಮಂದಿಗೆ ಡೆಂಗ್ಯೂ ಪಾಸಿಟಿವ್ ದೃಢಪಟ್ಟಿದೆ ಎಂದು ತಿಳಿಸಿದೆ.


ಬಿಬಿಎಂಪಿ ವ್ಯಾಪ್ತಿಯಲ್ಲಿ 294, ತುಮಕೂರು 19, ಧಾರವಾಡ 12, ಬೀದರ್ 72, ಬಳ್ಳಾರಿ 3, ಮಂಡ್ಯ 33, ದಕ್ಷಿಣ ಕನ್ನಡ 62, ಉಡುಪಿ 5 ಹಾಗೂ ಚಿಕ್ಕಮಗಳೂರು 13 ಸೇರಿದಂತೆ 445 ಜನರಿಗೆ ಡೆಂಗ್ಯೂ ಪಾಸಿಟಿವ್ ಎಂದು ಪರೀಕ್ಷೆಯಿಂದ ತಿಳಿದು ಬಂದಿದೆ. ಒಟ್ಟಾರೆ ರಾಜ್ಯದಲ್ಲಿ, 308 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೆ 7 ಮಂದಿ ಜ್ವರದಿಂದ ಮೃತಪಟ್ಟಿದ್ದಾರೆ.




ಭಾನುವಾರ ಬಿಬಿಎಂಪಿ ವ್ಯಾಪ್ತಿಯಲ್ಲಿಯೇ ಅತ್ಯಧಿಕ 294 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಎರಡನೇ ಅತಿಹೆಚ್ಚು 62 ಹಾಗೂ ಮಂಡ್ಯದಲ್ಲಿ 33 ಪ್ರಕರಣಗಳು ಪತ್ತೆಯಾಗಿವೆ.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್