LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್ ನಿರ್ದೇಶನ



ಬಳ್ಳಾರಿ,ಜೂ.12
ಜಿಲ್ಲಾ ಕೇಂದ್ರದಲ್ಲಿ ಜೂನ್ 21 ರಂದು ಅಂತರಾಷ್ಟಿçÃಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಬೇಕಾದ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್ ಅವರು ಸೂಚಿಸಿದರು.
ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜೂ.21 ರಂದು ನಗರದ ಶೆಟ್ರ ಗುರುಶಾಂತಪ್ಪ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಅಂತರಾಷ್ಟಿçÃಯ ಯೋಗ ದಿನಾಚರಣೆ ನಡೆಸಲು ನಿರ್ಧರಿಸಲಾಗಿದ್ದು, ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಪೂರಕ ಜವಾಬ್ದಾರಿಗಳನ್ನು ವಹಿಸಿಕೊಂಡು ಸಮರ್ಪಕವಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅಂದು ಬೆಳಿಗ್ಗೆ 07 ರಿಂದ ಯೋಗ ಕಾರ್ಯಕ್ರಮ ಜರುಗಲಿದ್ದು, ಯೋಗಾಸನ ಮಾಡಲು ನಿರ್ದೇಶನ ಮಾಡಲಾಗುವುದು. ಜಿಲ್ಲಾ ಮಟ್ಟದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಹೆಚ್ಚಿನ ಜನ ಆಗಮಿಸಬಹುದಾಗಿದೆ. ಪತಂಜಲಿ ಯೋಗ ಕೇಂದ್ರ, ಆರ್ಟ್ ಆಫ್ ಲಿವಿಂಗ್ ಸೇರಿದಂತೆ ಯೋಗ ಕೇಂದ್ರಗಳು ಅಗತ್ಯವಾಗಿ ಸಹಕಾರ ನೀಡಬೇಕು ಎಂದರು.
ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಹಾಸ್ಟೆಲ್‌ಗಳಲ್ಲಿರುವ ವಿದ್ಯಾರ್ಥಿಗಳು ಯೋಗಾಸನ ಕಾರ್ಯಕ್ರಮದಲ್ಲಿ ಭಾಗವಹಿಸಲು ಕ್ರಮವಹಿಸುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಸಮಾಜಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಲಘು ಉಪಹಾರ ಮತ್ತು ನೀರಿನ ವ್ಯವಸ್ಥೆ, ಯೋಗಾಸನ ಮಾಡಲು ಗ್ರೀನ್ ಮ್ಯಾಟ್ ವ್ಯವಸ್ಥೆ ಮತ್ತು ವೇದಿಕೆ ಹಾಗೂ ಧ್ವನಿವರ್ಧಕ ವ್ಯವಸ್ಥೆ ಮಾಡಿಕೊಳ್ಳಬೇಕು. ಆವರಣದೊಳಗೆ ಸಂಪೂರ್ಣ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಪಾಲಿಕೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.
ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರನ್ನು ಆಹ್ವಾನಿಸಬೇಕು. ಕಾರ್ಯಕ್ರಮದಲ್ಲಿ ನುರಿತ ಯೋಗ ಶಿಕ್ಷಕರನ್ನು ನಿಯೋಜಿಸಬೇಕು. ಆರೋಗ್ಯ ಇಲಾಖೆಯಿಂದ ಅಗತ್ಯ ಚಿಕಿತ್ಸಾ ವ್ಯವಸ್ಥೆ ಸೇರಿದಂತೆ ಇನ್ನಿತರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಪಾರ್ಕಿಂಗ್ ವ್ಯವಸ್ಥೆ ನೋಡಿಕೊಳ್ಳಲು ಪೊಲೀಸ್ ಬಂದೋಬಸ್ತ್ ಒದಗಿಸಬೇಕು. ಒಟ್ಟಾರೆ ಕಾರ್ಯಕ್ರಮ ಶಿಸ್ತುಬದ್ಧವಾಗಿ ಯಾವುದೇ ಲೋಪ ಆಗದಂತೆ ನೋಡಿಕೊಳ್ಳಬೇಕು ಎಂದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ.ಫಣೇಂದರ್ ಅವರು ಮಾತನಾಡಿ, ಅಂತರಾಷ್ಟಿçÃಯ ಯೋಗ ದಿನಾಚರಣೆಯನ್ನು ಈ ಬಾರಿ “ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ” ಎಂಬ ಘೋಷವಾಕ್ಯದೊಂದಿಗೆ ಆಚರಣೆ ಮಾಡಲಾಗುತ್ತಿದೆ. ಕಾರ್ಯಕ್ರಮದ ಅಂಗವಾಗಿ ಜೂನ್ 19 ರಂದು ಯೋಗಾಜಾಥಾ ಹಮ್ಮಿಕೊಳ್ಳಲಾಗುವುದು ಎಂದು ಸಭೆಯಲ್ಲಿ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಉಪ-ಆಯುಕ್ತ ನಂದೀಶ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಜಿಲ್ಲೆಯ ವಿವಿಧ ಯೋಗ ಕೇಂದ್ರದ ಪ್ರತಿನಿಧಿಗಳು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್