ಅಥಣಿ : ಭಕ್ತಿ, ಧರ್ಮ, ಜ್ಞಾನ ಹಾಗೂ ಮಾನವೀಯ ಮೌಲ್ಯಗಳ ಮೂಲಕ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಶ್ರೀ ರಾಘವೇಂದ್ರ ಸ್ವಾಮಿಗಳು ಭಾರತೀಯ ಸನಾತನ ಪರಂಪರೆಯಲ್ಲಿ ವಿಶಿಷ್ಟ ಸ್ಥಾನ ಹೊಂದಿದ್ದಾರೆ. ತಮ್ಮ ಆಧ್ಯಾತ್ಮಿಕ ಸಾಧನೆ, ಪಾಂಡಿತ್ಯ, ಸರಳತೆ ಹಾಗೂ ಲೋಕಕಲ್ಯಾಣದ ಚಿಂತನೆಯ ಮೂಲಕ ಸಮಾಜಕ್ಕೆ ಸನ್ಮಾರ್ಗವನ್ನು ತೋರಿದ ಮಹಾನ್ ಯತಿಗಳಾಗಿ ಶ್ರೀ ರಾಘವೇಂದ್ರ ಸ್ವಾಮಿಗಳು ಪ್ರಸಿದ್ಧರಾಗಿದ್ದರು ಎಂದು ಆಚಾರ್ಯ ಶ್ರೀನಿವಾಸ ಜೋಶಿ ಹೇಳಿದರು.
ಪಟ್ಟಣದ ಅಭಿನವ ಮಂತ್ರಾಲಯವೆAದೇ ಖ್ಯಾತಿ ಹೊಂದಿರುವ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಸೋಮವಾರ ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವದ ಅಂಗವಾಗಿ ವಿಜೃಂಭಣೆಯ ರಥೋತ್ಸವ ಭಕ್ತಿಭಾವದಿಂದ ನೆರವೇರಿತು. ರಥೋತ್ಸವದ ಸಂದರ್ಭದಲ್ಲಿ ಮಠದ ಆವರಣದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು. ವಿಶೇಷ ಪೂಜೆ, ಮಂಗಳಾರತಿ ಹಾಗೂ ವಿವಿಧ ಧಾರ್ಮಿಕ ವಿಧಿವಿಧಾನಗಳ ನಂತರ ಶ್ರೀ ರಾಘವೇಂದ್ರ ಸ್ವಾಮಿಗಳ ಉತ್ಸವ ಮೂರ್ತಿಯನ್ನು ಅಲಂಕರಿಸಿದ ರಥದಲ್ಲಿ ಪ್ರತಿಷ್ಠಾಪಿಸಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ರಥೋತ್ಸವ ಸಾಗುತ್ತಿದ್ದ ಸಂದರ್ಭದಲ್ಲಿ ಸಮಸ್ತ ಭಕ್ತಾಧಿಗಳು ರಾಯರ ನಾಮಸ್ಮರಣೆ ಹಾಗೂ ಭಜನಾ ಗೀತೆಗಳಿಗೆ ನೃತ್ಯ ಮಾಡುವ ಮೂಲಕ ಭಕ್ತಿಭಾವ ಮೆರೆದರು. ಮಹಿಳೆಯರು ಸಾಂಪ್ರದಾಯಿಕ ಉಡುಗೆಯಲ್ಲಿ ಪಾಲ್ಗೊಂಡು ಕೋಲಾಟ ಆಡುವ ಮೂಲಕ ತಮ್ಮ ಸೇವಾ ಭಾವವನ್ನು ವ್ಯಕ್ತಪಡಿಸಿದರು. ಮಠದ ಆವರಣವು ಶ್ರೀ ರಾಘವೇಂದ್ರ ಸ್ವಾಮಿಗಳ ನಾಮಸ್ಮರಣೆಯಿಂದ ಮೊಳಗಿದ್ದು, ಎಲ್ಲೆಡೆ ಭಕ್ತಿಯ ವಾತಾವರಣ ನಿರ್ಮಾಣವಾಗಿತ್ತು. ವಿವಿಧೆಡೆಯಿಂದ ಆಗಮಿಸಿದ ಭಕ್ತರು ಆರಾಧನಾ ಮಹೋತ್ಸವದಲ್ಲಿ ಪಾಲ್ಗೊಂಡು ರಾಯರ ಕೃಪೆಗೆ ಪಾತ್ರರಾದರು.
ಈ ವೇಳೆ ಮಠದ ಆಚಾರ್ಯ ಶ್ರೀನಿವಾಸ ಜೋಶಿ ಮಾತನಡಿ ಅಥಣಿ ಪಟ್ಟಣದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ಮಠವೂ ಭಕ್ತರಿಗೆ ಆಧ್ಯಾತ್ಮಿಕ ನೆಮ್ಮದಿ ನೀಡುವ ಪ್ರಮುಖ ಧಾರ್ಮಿಕ ಕೇಂದ್ರವಾಗಿದೆ. ಇಲ್ಲಿ ನಡೆಯುವ ಆರಾಧನಾ ಮಹೋತ್ಸವ, ರಥೋತ್ಸವ, ಭಜನೆ ಹಾಗೂ ವಿವಿಧ ಸೇವಾ ಕಾರ್ಯಕ್ರಮಗಳು ಭಕ್ತರಲ್ಲಿ ಧಾರ್ಮಿಕ ಭಾವನೆ ಮತ್ತು ಸೌಹಾರ್ದತೆಯನ್ನು ಬೆಳೆಸುತ್ತಿದೆ ಎಂದು ಹೇಳಿದರು
ಈ ವೇಳೆ ಮಠದ ವಿಸ್ವಸ್ಥ ಮಂಡಳಿ ಹಾಗು ಸಮಸ್ತ ಸದ್ಬಕ್ತರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು