LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bellary

            ’ವಕ್ರತುಂಡ’ ಚಿತ್ರದ ಧಮಾಕಾ : ’ಜೈ ಗಣೇಶ’ ಟೈಟಲ್ ಟ್ರ್ಯಾಕ್ ಸಾಂಗ್ ಭರ್ಜರಿ ಸದ್ದು  


 ಬೆಂಗಳೂರ ; ಗೌರಿ-ಗಣೇಶ ಹಬ್ಬದ ಸಡಗರದಲ್ಲಿರುವ ಸಿನಿರಸಿಕರಿಗೆ ಬಹುನಿರೀಕ್ಷಿತ ಕನ್ನಡ ಚಲನಚಿತ್ರ ’ವಕ್ರತುಂಡ’ ಚಿತ್ರ ತಂಡವು ಭರ್ಜರಿ ಹಬ್ಬದ ಗಿಫ್ಟ್ ನೀಡಿದೆ. ಚಿತ್ರದ ಹೈ-ಎನರ್ಜಿ ಮತ್ತು ಭಕ್ತಿಭಾವದ ವಿಡಿಯೋ ಟೈಟಲ್ ಟ್ರ್ಯಾಕ್ ಸಾಂಗ್ ’ಜೈ ಗಣೇಶ’   ಬಿಡುಗಡೆಯಾಗಿ ಭರ್ಜರಿ ಸದ್ದು ಮಾಡುತ್ತಿದೆ.
     ಲೋಚನ್ ಕಂಬೈನ್ಸ್  ಬ್ಯಾನರ್ ಅಡಿಯಲ್ಲಿ ಅತ್ಯಂತ ಅದ್ದೂರಿಯಾಗಿ ಮೂಡಿಬಂದಿರುವ ಈ ಹಾಡಿಗೆ ಪ್ರತಿಭಾವಂತ ಸಂಗೀತ ನಿರ್ದೇಶಕ ಜೇಮ್ಸ್ ಆರ್ಕಿಟೆಕ್ಟ್ ಮಾಸ್ ಮತ್ತು ಕ್ಲಾಸ್ ಶೈಲಿಯಲ್ಲಿ ರಾಗಸಂಯೋಜನೆ ಮಾಡಿದ್ದಾರೆ. ಹಬ್ಬದ ಜೋಶ್ ಹೆಚ್ಚಿಸುವ ಸಾಹಿತ್ಯವನ್ನು ರಾಘವ ರಂಜನ್ ಬರೆದಿದ್ದು, ಖ್ಯಾತ ಗಾಯಕ ಶಶಾಂಕ್ ಶೇ?ಗಿರಿ  ಹಾಡಿಗೆ ಜೀವ ತುಂಬಿದ್ದಾರೆ.
   ಮಾಸ್ಟರ್ ಕೊರಿಯೋಗ್ರಾಫರ್ ಕಂಬಿ ರಾಜು ಅವರ ನೃತ್ಯ ನಿರ್ದೇಶನದಲ್ಲಿ, ಛಾಯಾಗ್ರಾಹಕ ಜೈ ಆನಂದ ಅವರ ಛಾಯಾಗ್ರಹಣದಲ್ಲಿ ಮೂಡಿಬಂದಿರುವ ಈ ವಿಡಿಯೋ ಸಾಂಗ್ ವೀಕ್ಷಕರಿಗೆ ಹಬ್ಬದ ನಿಜವಾದ ಕಿಕ್ ನೀಡುತ್ತಿದೆ. ಎಡಿಟರ್ ರವಿ ತೇಜ ಸಂಕಲನ ಹಾಡಿನ ಮೆರುಗನ್ನು ಹೆಚ್ಚಿಸಿದೆ. ಪ್ರತಿಭಾವಂತ ನಿರ್ದೇಶಕ ಹರೀಶ್ ಕುಂದುರ್ ಆಕ್ಷನ್ ಕಟ್ ಹೇಳಿರುವ ಈ ಚಿತ್ರಕ್ಕೆ  ಈ ಹಿಂದೆ ನೈಂಟಿಕುಡಿ ಪಲ್ಟಿ ಹೊಡಿ, ದೇವರಾಣೆ, ಸಿಗರೇಟ್ ಸೇದ್ಬೇಡಿ. ಜಿಲೇಬಿ ಚಿತ್ರಗಳನ್ನು ನಿರ್ಮಿಸಿದ್ದ   ಲಕ್ಕಿ ಶಂಕರ್ (ಶಂಕರ್ ಎಸ್) ಕಥೆ ಬರೆದು ನಿರ್ಮಾಣ ಮಾಡಿದ್ದು, ಉಮೇಶ್ ಬಿ.ಹೆಚ್. ದಾವಣಗೆರೆ ಸಹ-ನಿರ್ಮಾಪಕರಾಗಿದ್ದಾರೆ. ಜೊತೆಗೆ ನಾಗೇಂದ್ರ, ಡಾ. ಪ್ರಭು ಗಂಜಿಹಾಳ್, ಡಾ. ವೀರೇಶ್ ಹಂಡಿಗಿ ಪಿ.ಆರ್‌ಓ ಆಗಿದ್ದಾರೆ.
   ತಾರಾಬಳಗದಲ್ಲಿ ರಚಿತಾ ಮಹಾಲಕ್ಷ್ಮಿ, ಲಕ್ಕಿ ಶಂಕರ್, ಉಮೇಶ್ ಬಿ.ಹೆಚ್. ದಾವಣಗೆರೆ, ಮೂಗು ಸುರೇಶ್, ಸಂಗಮೇಶ್ ಕಾಸ್, ಅಮಿತ್ ರಾವ್, ಆಟೋ ನಾಗರಾಜ್, ಭುವನ ಹರೀಶ್ ಮತ್ತು ಮೋಹನಕೃ? ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸದ್ಯದಲ್ಲೇ ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಾಣಲು ಸಜ್ಜಾಗುತ್ತಿರುವ ’ವಕ್ರತುಂಡ’ ಚಿತ್ರದ ಈ ರೋಮಾಂಚಕ ವಿಡಿಯೋ ಹಾಡು  ’ಂ೨ ಒusiಛಿ’ ಯೂಟ್ಯೂಬ್ ಚಾನೆಲ್‌ನಲ್ಲಿ ಭರ್ಜರಿ ಸದ್ದು ಮಾಡುತ್ತಿದೆ. 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪರಸ್ಪರ ಸಹಾಯ ಸಹಕಾರದಿಂದ ದೇವಸ್ಥಾನಗಳ ಅಭಿವೃದ್ಧಿ :ಬಾಬಾಸಾಹೇಬ ಪಾಟೀಲ ಶ್ರೀ ವೇಮನ್ ಕೋ-ಆಪ್. ಕ್ರೆಡಿಟ್ ಸೊಸಾಯಿಟಿಗೆ 3.06 ಕೋಟಿ ರೂ. ಲಾಭ : ಸಂತೋಷ ಸೋನವಾಲ್ಕರ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಮತ್ತು ಅಭಿಯಂತರರ ಪಾತ್ರ ಮಹತ್ವಪೂರ್ಣವಾದುದು :  ಡಾ.ಅಲ್ಲಮಪ್ರಭು ಮಹಾಸ್ವಾಮಿಗಳುಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗಳು ಕಾಲಮಿತಿಯೊಳಗೆ ಜನರಿಗೆ ತಲುಪಿಸಿ: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ: ಶಿಕ್ಷಣ ಇಲಾಖೆಯಿಂದ ಅಭಿನಂದನಾ ಪತ್ರಅಭಿಯಂತರರು ಸಮಾಜದ ಅಭಿವೃದ್ಧಿಗೆ ಹೊಸ ದಿಕ್ಕು ನೀಡಲಿ : ಶಾಸಕರಾದ ವಿನಯ ಕುಲಕರ್ಣಿಪ್ರಜಾಪ್ರಭುತ್ವ ಉಳಿಸಲು ಯುವಜನತೆ ನಾಯಕತ್ವ ಗುಣ ಬೆಳೆಸಿಕೊಳ್ಳಿ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ ಕರೆ            ’ವಕ್ರತುಂಡ’ ಚಿತ್ರದ ಧಮಾಕಾ : ’ಜೈ ಗಣೇಶ’ ಟೈಟಲ್ ಟ್ರ್ಯಾಕ್ ಸಾಂಗ್ ಭರ್ಜರಿ ಸದ್ದು  ಮಹಿಳೆ ಕಾಣೆ: ಪತ್ತೆಗೆ ಮನವಿಕಲ್ಯಾಣ ಕರ್ನಾಟಕ ಉತ್ಸವ: ಬಳ್ಳಾರಿಯಲ್ಲಿ ಸಚಿವ ಟಿ. ರಘುಮೂರ್ತಿ ಅವರಿಂದ ಧ್ವಜಾರೋಹಣ