Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕುಡತಿನಿ: ಬಿಟಿಪಿಎಸ್ ನಲ್ಲಿ ಅಚ್ಚುಕಟ್ಟಾಗಿ ನಡೆದ ವಿಪತ್ತು ನಿರ್ವಹಣಾ ಅಣಕು ಪ್ರದರ್ಶನ

ರಾಜ್ಯ, ಕೇಂದ್ರ ವಿಪತ್ತು ನಿರ್ವಹಣಾ ಪಡೆಗಳ ಸೇವೆ ಅನನ್ಯ*


ಬಳ್ಳಾರಿ,ನ.14

ಪ್ರಕೃತಿ ವಿಕೋಪಗಳು, ಮಾನವ ನಿರ್ಮಿತದಿಂದಾಗುವ ಅವಘಡ ಹಾಗೂ ಇತರೆ ಯಾವುದೇ ಕಷ್ಟದ ಸಂದರ್ಭದಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳ ಸೇವೆ ಅನನ್ಯವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಹೇಳಿದರು.


ಶುಕ್ರವಾರ, ಜಿಲ್ಲಾಡಳಿತದ ಸಹಕಾರದೊಂದಿಗೆ ಕರ್ನಾಟಕ ವಿಪತ್ತು ನಿರ್ವಹಣಾ ಪ್ರಾಧಿಕಾರ, ಬೆಂಗಳೂರು ಹಾಗೂ ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆ ಮತ್ತು ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರ, ಕುಡತಿನಿ ಇವರ ಸಹಯೋಗದಲ್ಲಿ ಬಿಟಿಪಿಎಸ್ ನ ಶೀತಲೀಕರಣ ಗೋಪುರ-3 ರ ಬಳಿ ಕಟ್ಟಡ ಕುಸಿತದ ಆನ್ ಸೈಟ್ ಅಣಕು ಪ್ರದರ್ಶನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.


ವಾಣಿಜ್ಯ ಉದ್ದಿಮೆಗಳು, ಕಾರ್ಖಾನೆಗಳಂತಹ ದೊಡ್ಡ ದೊಡ್ಡ ಕಟ್ಟಡಗಳಲ್ಲಿ ಆಕಸ್ಮಿಕವಾಗಿ ಸಂಭವಿಸುವ ಕಟ್ಟಡ ಕುಸಿತದ ಸಂದರ್ಭವು ಅತ್ಯಂತ ಕ್ಲಿಷ್ಟಕರ. ಅಂತಹ ಸಂದರ್ಭದಲ್ಲಿಯು ಸಹ ಅವರು ತಮ್ಮ ಆತ್ಮವಿಶ್ವಾಸದೊಂದಿಗೆ ಕರ್ತವ್ಯ ನಿರ್ವಹಿಸುತ್ತಾರೆ. ಇಂತಹ ಸಂದರ್ಭಗಳಲ್ಲಿ ವಿವಿಧ ಇಲಾಖೆಗಳ ಪರಸ್ಪರ ಸಹಯೋಗದ ಜೊತೆಗೆ ಸಾರ್ವಜನಿಕರ ಸಹಕಾರವೂ ಅಗತ್ಯವಾಗಿದೆ ಎಂದರು.


ರಾಜ್ಯ ಮತ್ತು ಕೇಂದ್ರ ವಿಪತ್ತು ನಿರ್ವಹಣಾ ಪಡೆಗಳ ಸಹಕಾರದೊಂದಿಗೆ ಪ್ರತಿ ಮೂರು ಅಥವಾ ಆರು ತಿಂಗಳಿಗೊಮ್ಮೆ ನಿಯಮಿತವಾಗಿ ತರಬೇತಿ ಮತ್ತು ಅಣಕು ಪ್ರದರ್ಶನ ನಡೆಸಬೇಕು ಎಂದು  ಸಲಹೆ ನೀಡಿದರು.


ಬಳ್ಳಾರಿಯ ಡಿಎಆರ್ ಡಿವೈಎಸ್ಪಿ ತಿಪ್ಪೇಸ್ವಾಮಿ ಅವರು ಮಾತನಾಡಿ, ನೈಸರ್ಗಿಕ ವಿಪತ್ತು, ಮಾನವ ನಿರ್ಮಿತದಿಂದಾಗುವ ಅವಘಡ ಸಂಭವಿಸಿದಾಗ ತಕ್ಷಣ ಕಾರ್ಯ ಪ್ರವತ್ತವಾಗುವ ರಾಷ್ಟ್ರೀಯ ವಿಪತ್ತು ನಿರ್ವಹಣೆ ಪಡೆಯು ನಾಗರಿಕರ ಜೀವ ರಕ್ಷಿಸುವಲ್ಲಿ ಕಾರ್ಯಪ್ರವೃತ್ತರಾಗುತ್ತಾರೆ ಎಂದು ಶ್ಲಾಘಿಸಿದರು.


ಕೇಂದ್ರ ವಿಪತ್ತು ನಿರ್ವಹಣಾ ಪಡೆಯ ಇನ್ಸ್ ಪೆಕ್ಟರ್ ರಾಮ್ ಭಜ್ ಅವರು ಮಾತನಾಡಿ, ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್ ಡಿಆರ್ಎಫ್) ಎಂಬುದು ವಿಪತ್ತು ನಿರ್ವಹಣಾ ಕಾಯ್ದೆ, 2005 ರಡಿ ಸ್ಥಾಪಿತವಾದ ಭಾರತದ ವಿಶೇಷ ಸಂಸ್ಥೆಯಾಗಿದ್ದು, ವಿಪತ್ತುಗಳು ಸಂಭವಿಸಿದಾಗ ತ್ವರಿತ ಮತ್ತು ಪರಿಣಾಮಕಾರಿ ಮೂಲಕ ಭಾಗಿಯಾಗಿ ಪರಿಹಾರ ಒದಗಿಸುತ್ತದೆ ಎಂದು ತಿಳಿಸಿದರು.


ಕೇಂದ್ರ ನಿರ್ವಹಣಾ ಪಡೆಯು ಕೇವಲ ನಮ್ಮ ದೇಶದಲ್ಲಿ ಮಾತ್ರವಲ್ಲ, ಅನ್ಯ ದೇಶಗಳಲ್ಲಿಯೂ ತನ್ನ ನಿಸ್ವಾರ್ಥ ಸೇವೆ ಒದಗಿಸಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.


ಅಣಕು ಪ್ರದರ್ಶನ ಆರಂಭದಲ್ಲಿ ಕಟ್ಟಡ ಕುಸಿತವಾದ ಸಂದರ್ಭದಲ್ಲಿ ಕೂಡಲೇ ಒಳಗಿರುವ ಸಾರ್ವಜನಿಕರು, ಕಾರ್ಮಿಕರನ್ನು ಹೊರಬರುವಂತೆ ಎಚ್ಚರಿಕೆ ಗಂಟೆ ನೀಡುವ ಮೂಲಕ ಸುರಕ್ಷಿತ ಸ್ಥಳಕ್ಕೆ ಬಂದು ಹಾಜರಾಗುವ ವಿಧಾನ, ಆ ದಿನದಂದು ಹಾಜರಾದ ಕಾರ್ಮಿಕರ ಹಾಜರಾತಿ, ಯಾವ ಸ್ಥಳದಲ್ಲಿದ್ದಾರೆ ಎಂಬ  ಮಾಹಿತಿ ಸಂಗ್ರಹಿಸಿ ಬಳಿಕ ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವ ವಿಧಾನ ಕುರಿತು ಪ್ರಾತ್ಯಕ್ಷಿಕೆ ತೋರಿಸಿಕೊಡಲಾಯಿತು.


ಅಪಘಾತದಲ್ಲಿ ರಕ್ತಸ್ರಾವವಾದಾಗ ತಡೆಗಟ್ಟುವ ಕ್ರಮ ಸೇರಿದಂತೆ ಪ್ರಥಮ ಚಿಕಿತ್ಸೆಯ ಬಗ್ಗೆ ವಿವರಿಸಲಾಯಿತು. ಬೆಂಕಿ, ಅನಿಲ ದುರಂತಗಳಲ್ಲಿ ಇತರರ ಜೀವ ಕಾಪಾಡುವಲ್ಲಿ ಕೈಗೊಳ್ಳಬೇಕಾದ ಕ್ರಮಗಳು, ಸುರಕ್ಷಿತ ಜಾಗಕ್ಕೆ ತೆರಳಲು ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಳ್ಳುವ ಬಗೆ ಕುರಿತು ಪ್ರಾತ್ಯಕ್ಷಿಕೆ ನೀಡಲಾಯಿತು. ವಿಪತ್ತು ನಿರ್ವಹಣೆ ವೇಳೆ ಪಡೆ ಬಳಸುವ ವಿವಿಧ ಪರಿಕರಗಳ ಪರಿಚಯ ಮಾಡಲಾಯಿತು.


ರಾಷ್ಟ್ರೀಯ ವಿಪತ್ತು ನಿರ್ವಹಣೆ ಪಡೆ ಅಧಿಕಾರಿಯ ಕಮಾಂಡೋ ಮೂಲಕ ಹೆಚ್ಆರ್ ಡಿ ತಂಡ, ಅಗ್ನಿಶಾಮಕ ತಂಡ, ಆರೋಗ್ಯ ಸಿಬ್ಬಂದಿ ತಂಡ, ಹುಡುಕು ಮತ್ತು ರಕ್ಷಣಾ ತಂಡ, ಘಟನೆ ನಿರ್ವಹಣಾಧಿಕಾರಿ, ಮಾಹಿತಿ ತಂಡ ಮತ್ತು ಕೆಎಸ್ಐಎಸ್ಎಫ್ ತಂಡದ ಸಿಬ್ಬಂದಿ ತಾವು ಕೈಗೊಳ್ಳಲಿರುವ ವಿವಿಧ ಸೇವೆಗಳ ಕುರಿತು ಅಚ್ಚುಕಟ್ಟಾಗಿ ಅಣಕು ಪ್ರದರ್ಶನದ ಮೂಲಕ ಮಾಹಿತಿ ನೀಡಿದರು.


ಈ ವೇಳೆ  ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕ ಉದಯ ನಾಯ್ಕ.ಎನ್., ವಿವಿಧ ವಿಭಾಗಗಳ ಮುಖ್ಯ ಕಾರ್ಯನಿರ್ವಾಹಕ ಇಂಜಿನಿಯರ್ ಗಳಾದ ಜ್ಯೋತಿಲಕ್ಷ್ಮಿ ಸಿ.ಎನ್., ಅಶೋಕ್ ಬೊಮ್ಮನಹಳ್ಳಿ, ಅಶೋಕ್.ಹೆಚ್., ತೋರಣಗಲ್ಲು ಉಪವಿಭಾಗದ ಡಿವೈಎಸ್ಪಿ ಪ್ರಸಾದ್ ಗೋಖಲೆ, ಕಾರ್ಖಾನೆ ಮತ್ತು ಬಾಯ್ಲರುಗಳ ಹಿರಿಯ ಸಹಾಯಕ ನಿರ್ದೇಶಕ ವರುಣ್ ಕುಮಾರ್, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪರಿಣಿತ ಪರಮೇಶ್ವರ್, ಬಿಟಿಪಿಎಸ್ ನ ಸುರಕ್ಷತಾ ಇಂಜಿನಿಯರ್ ಪ್ರಕಾಶ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಬಿಟಿಪಿಎಸ್ ನ ಅಧಿಕಾರಿ-ಸಿಬ್ಬಂದಿ ಹಾಗೂ ಸಾರ್ವಜನಿಕರು ಹಾಜರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ