Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಂಪಿ, ಡಿಸಿ ನೇತೃತ್ವದಲ್ಲಿ ಭೂಸ್ವಾಧೀನ ಕುರಿತು ಚರ್ಚೆ

ರೇಲ್ವೆ & ರಾಷ್ಟ್ರೀಯ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಯೋಜನೆ

ಬಾಗಲಕೋಟೆ : ಮೇ ೧೬: ಜಿಲ್ಲೆಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ರೇಲ್ವೆ ಹಾಗೂ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಸಂಬಂಧಿಸಿದ ಭೂಸ್ವಾಧೀನ ಪ್ರಕ್ರಿಯೆ ಕುರಿತು ಸಂಸದ ಪಿ.ಸಿ.ಗದ್ದಿಗೌಡರ ಹಾಗೂ ಜಿಲ್ಲಾಧಿಕಾರಿ ಸಂಗಪ್ಪ ಅವರ ನೇತೃತ್ವದಲ್ಲಿ ಶುಕ್ರವಾರ ಚರ್ಚೆ ನಡೆಸಲಾಯಿತು.
ಜಿಲ್ಲಾಧಿಕಾರಿಗಳ ಸಭಾಂಗಭದಲ್ಲಿ ಭೂಸ್ವಾಧೀನ ಕುರಿತು ಸಂಬಂಧಿಸಿದ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಲಾಯಿತು. ರಾಷ್ಟ್ರೀಯ ಹೆದ್ದಾರಿ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಹಾಗೂ ರೇಲ್ವೆ ಯೋಜನೆಗಳ ವ್ಯಾಪ್ತಿಗೆ ಬೇಕಾಗುವ ಭೂಮಿ ಭೂಸ್ವಾಧೀನ ಹಾಗೂ ಬಾಕಿ ಪ್ರಕರಣಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಯೋಜನೆಗಳ ಅನುಷ್ಠಾನಕ್ಕೆ ಬೇಕಾಗುವ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಯೋಜನೆ ಅನುಷ್ಠಾನದಲ್ಲಿ ಕೆಲವೊಂದು ತೊಂದರೆಗಳು ಎದುರಾಗುವುದು ಸಹಜ. ಆದರೆ ಅವಗಳನ್ನು ಪರಿಹರಿಸಿಕೊಂಡು ಕಾಮಗಾರಿ ಕೆಲಸ ಪೂರ್ಣಗೊಳಿಸುವಲ್ಲಿ ಅಧಿಕಾರಿಗಳ ಪಾತ್ರ ಮಹತ್ವವಾಗಿದೆ. ಜವಾಬ್ದಾರಿಯಿಂದ ಕೆಲಸ ನಿರ್ವಹಿಸುತ್ತಿಲ್ಲ. ಇದರಿಂದ ಯೋಜನೆಗಳ ಅನುಷ್ಠಾನದಲ್ಲಿ ಕುಂಟಿತವಾಗುತ್ತಿದೆ. ಬಾಗಲಕೋಟೆ-ಕುಡಚಿ ರೇಲ್ವೆ ಮಾರ್ಗಕ್ಕಾಗಿ ಭೂಸ್ವಾಧೀನ ಕಾರ್ಯ ಪ್ರಾರಂಭವಾಗಿ ಹಲವು ವರ್ಷಗಳು ಕಳೆದಿವೆ. ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿಲ್ಲ. ಇದಕ್ಕೆ ಕಾರಣಗಳೇನು ಎಂಬ ಬಗ್ಗೆ ಪ್ರಶ್ನೆಗಳನ್ನು ಹಾಕಲಾಯಿತು.
ಯೋಜನೆ ಅನುಷ್ಠಾದಲ್ಲಿ ವಿಳಂಬ ಏಕೆ, ನ್ಯಾಯಾಲಯ ಪ್ರಕರಣಗಳು ಇದ್ದಲ್ಲಿ ಅವು ಯಾವ ಹಂತದಲ್ಲಿವೆ ಎಂಬ ಮಾಹಿತಿಯನ್ನು ಅಧಿಕಾರಿಗಳಿಗೆ ಕೇಳಲಾಯಿತು. ಯೋಜನೆ ಅನುಷ್ಠಾನಕ್ಕೆ ಹಿಂದೆಟು ಹಾಕುತ್ತಿರುವುದು ಬೇಜವಾಬ್ದಾರಿತನ ಎದ್ದು ತೋರುತ್ತಿದೆ. ಇದರಿಂದ ಸರಿಯಾಗಿ ಕೆಲಸ ಆಗುತ್ತಿಲ್ಲ. ನಿಮ್ಮ ವರ್ತನೆ ಬದಲಾಯಿಸಿಕೊಳ್ಳುವಂತೆ ರೇಲ್ವೆ ಇಲಾಖೆಯ ಕಾರ್ಯಪಾಲಕ ಅಭಿಯಂತರ ರಾಜು ನಾಯಕಗೆ ಸೂಚನೆ ನೀಡಲಾಯಿತು. 
ರಬಕವಿ-ಬನಹಟ್ಟಿ ಭಾಗದಲ್ಲಿ ೨೫ ಕಿ.ಮೀ ಬಗ್ಗೆ ಪ್ರಸ್ತಾವನೆ ನೀಡಿಲ್ಲ. ಲೋಕಾಪೂರದಿಂದ ದಾದನಟ್ಟಿ ವರೆಗಿನ ರೇಲ್ವೆ ಮಾರ್ಗದಲ್ಲಿ ೬.೬ ಕಿ.ಮೀ ಕೆಲಸ ಆಗುತ್ತಿಲ್ಲ. ಇದಕ್ಕೆ ಕಾರಣವೇನು. ದಾದನಟ್ಟಿಯಿಂದ ಯಾದವಾಡ ಮಾರ್ಗದ ಬಗ್ಗೆ ಹಾರಿಕೆ ಉತ್ತರ ಕೊಡುವುತ್ತಿರುವ ಅಧಿಕಾರಿಗಳ ಮೇಲೆ ಸಂಸದರು ಅಸಮಾಧಾನ ವ್ಯಕ್ತಪಡಿಸಿ, ವಾರದಲ್ಲಿ ಪ್ರಗತಿ ತೋರಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು. 
ಗದ್ದನಕೇರಿಯಿಂದ ಶಿರೂರವರೆಗಿನ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ೨.೭ ಕಿ.ಮೀ ರಸ್ತೆ ನಿರ್ಮಾಣ ಕಾಮಗಾರಿ ಮಾತ್ರ ಬಾಕಿ ಇರುತ್ತದೆ. ಇದು ಕೂಡಾ ಶಿಘ್ರದಲ್ಲಿ ಪೂರ್ಣಗೊಳಿಸಬೇಕು. ಅಲ್ಲದೇ ಪಟ್ಟದಕಲ್ಲದಿಂದ ಶಿರೂರವರೆಗಿನ ರಸ್ತೆ ನಿರ್ಮಾಣದಲ್ಲಿ ಅರಣ್ಯ ಇಲಾಖೆಯಿಂದ ವಿಳಂಬವಾಗಿದೆ ಎಂದು ಸಂಬಂಧಿಸಿದ ಅಧಿಕಾರಿಗಳು ತಿಳಿಸಿದರೆ, ಅಧಿಕಾರಿಗಳಿಗೆ ಜನರ ತೊಂದರೆ ಅರ್ಥವಾಗುತ್ತಿಲ್ಲ. ಸರಿಯಾಗಿ ಕೆಲಸ ನಿರ್ವಹಿಸುವಂತೆ ತಿಳಿಸಲಾಯಿತು. ಜಿಲ್ಲೆಯಲ್ಲಿ ಹಾದು ಹೋಗುವ ಭಾರತ ಮಾಲಾ ಪ್ರೋಜೆಕ್ಟ ಬಗ್ಗೆಯೂ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಭೂ ದಾಖಲೆ ಇಲಾಖೆಯ ಉಪನಿರ್ದೇಶಕ ರವಿಕುಮಾರ ಎಂ, ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರ ದುರ್ಗಾದಾಸ ಸೇರಿದಂತೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಯೋಜನೆಯ ಪ್ರೋಜೆಕ್ಟ ಡೈರೆಕ್ಟರ, ಎಸ್‌ಎಲ್‌ಎಓ ಹಾಗೂ ಇತರರು ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ