Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾರ್ಗೋ ಸೇವೆ, ವಿಮಾನ ಸೌಲಭ್ಯ ವಿಸ್ತರಣೆ ಕುರಿತು ಎಫ್ಓಎಬಿ ಜೊತೆ ಚರ್ಚೆ


ಬೆಳಗಾವಿ : ಬೆಳಗಾವಿಯಿಂದ ಕಾರ್ಗೋ ಸೇವೆ ಒದಗಿಸುವ ಹಾಗೂ ಪ್ರಯಾಣಿಕರ ವಿಮಾನ ಸೌಲಭ್ಯವನ್ನು ವಿಸ್ತರಿಸುವ ಸಂಬಂಧ ಇಲ್ಲಿಯ ಫೋರಮ್ ಆಫ್ ಅಸೋಸಿಯೇಶನ್ಸ್ ಆಫ್ ಬೆಳಗಾವಿ (ಎಫ್ ಒಎಬಿ) ಪದಾಧಿಕಾರಿಗಳ ಜೊತೆಗೆ ವಿಮಾನ ನಿಲ್ದಾಣದ ನಿರ್ದೇಶಕ ತ್ಯಾಗರಾಜನ್ ಅವರು ಸುದೀರ್ಘ ಚರ್ಚೆ ನಡೆಸಿದರು.


ಇಲ್ಲಿನ ಫೌಂಡ್ರಿ ಕ್ಲಸ್ಟರ್ ಸಭಾಭವನದಲ್ಲಿ ಸೋಮವಾರ ಸಂಜೆ ನಡೆದ ಸಭೆಯಲ್ಲಿ ಸುಮಾರು 2 ಗಂಟೆಗಳ ಕಾಲ ವಿಮಾನ ಯಾನ ಸೌಲಭ್ಯದ ಕುರಿತಂತೆ ಸಮಾಲೋಚನೆ ನಡೆಸಲಾಯಿತು. ಬೆಳಗಾವಿಯಿಂದ ಕೃಷಿ ಮತ್ತು ಕೈಗಾರಿಕೆ ಉತ್ಪನ್ನಗಳು ದೊಡ್ಡ ಪ್ರಮಾಣದಲ್ಲಿ ದೇಶದ ವಿವಿಧೆಡೆ ಮತ್ತು ವಿದೇಶಗಳಿಗೆ ಕೂಡ ರಫ್ತಾಗುತ್ತಿದ್ದು, ಕಾರ್ಗೋ ಸೇವೆ ಅತ್ಯವಶ್ಯವಾಗಿದೆ ಎಂದರು.


ಈ ಕುರಿತು ತುರ್ತು ಕ್ರಮ ಅಗತ್ಯವಾಗಿದೆ. ಜೊತೆಗೆ ಇಲ್ಲಿಂದ ಇನ್ನಷ್ಟು ನಗರಗಳಿಗೆ ಸಂಪರ್ಕ ಅಗತ್ಯವಾಗಿದೆ. ಆದರೆ ದುರದೃಷ್ಟವಶಾತ್ ಇರುವ ವಿಮಾನ ಸೇವೆಗಳು ಪ್ರಯಾಣ ದಟ್ಟಣೆ ಇದ್ದಾಗ್ಯೂ ರದ್ದಾಗುತ್ತಿವೆ ಎಂದು ಎಫ್ಒಎಬಿ ಪದಾಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದರು.


ಬೆಳಗಾವಿಯಿಂದ ಬೆಂಗಳೂರು, ಚೆನ್ನೈ, ದೆಹಲಿ, ಅಹಮದಾಬಾದ್, ತಿರುಪತಿ ಸೇರಿದಂತೆ ಹಲವು ನಗರಗಳಿಗೆ ಸಂಪರ್ಕಿಸುವ ವಿಮಾನಗಳು ಶೇ.85ಕ್ಕಿಂತ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿವೆ. ಆದರೆ ವಿನಾಕಾರಣ ಕೆಲವು ವಿಮಾನವನ್ನು ರದ್ದು ಮಾಡಲಾಗುತ್ತಿದೆ. ಇದರಿಂದಾಗಿ ಇಲ್ಲಿನ ಕೈಗಾರಿಕೆ, ಆರೋಗ್ಯ, ಶಿಕ್ಷಣ, ಕೃಷಿ ಕ್ಷೇತ್ರಗಳಿಗೆ ದೊಡ್ಡ ಹೊಡೆತ ಬೀಳುತ್ತಿದೆ. ಹಾಗಾಗಿ ಇದನ್ನು ತಡೆಯಬೇಕು. ಇನ್ನಷ್ಟು ನಗರಗಳಿಗೆ ವಿಮಾನ ಸೇವೆ ವಿಸ್ತರಿಸುವ ಸಂಬಂಧ ಕ್ರಮ ತೆಗೆದುಕೊಳ್ಳಬೇಕು. ಅಂತಾರಾಷ್ಟ್ರೀಯ ದರ್ಜೆಗೆ ವಿಮಾನ ನಿಲ್ದಾಣವನ್ನು ಏರಿಸಿ ವಿದೇಶಗಳಿಗೂ ವಿಮಾನ ಸೌಲಭ್ಯ ವಿಸ್ತರಿಸಬೇಕು ಎಂದು ಕೋರಿದರು.


 ಏರ್ ಕಾರ್ಗೋ ಸೇವೆಯಿಂದ ಕೃಷಿ ಹಾಗೂ ಕೈಗಾರಿಕೆ ಬೆಳವಣಿಗೆಗೆ ಸಹಾಯವಾಗಲಿದೆ. ಕಳೆದ ಹಲವು ವರ್ಷಗಳಿಂದ ಈ ಬಗ್ಗೆ ಪ್ರಯತ್ನ ನಡೆಯುತ್ತಿದೆ. ಇದಾದರೆ ಈ ಭಾಗದ ಆರ್ಥಿಕ ಬೆಳವಣಿಗೆಗೂ ಅನುಕೂಲವಾಗಲಿದೆ. ಬೆಳಗಾವಿ ವಿಮಾನ ನಿಲ್ದಾಣದಿಂದ ದೊಡ್ಡ ವಿಮಾನಗಳ ಸೇವೆ ಅಗತ್ಯವಾಗಿದೆ. ಕೃಷಿ ಉತ್ಪನ್ನಗಳ ಸಂಗ್ರಹಕ್ಕೂ ಕ್ರಮವಾಗಬೇಕು. ವಿಮಾನ ನಿಲ್ದಾಣಕ್ಕೆ ಅಗತ್ಯವಾಗಿರುವ ಭೂ ಸ್ವಾಧೀನ, ವಿಮಾನ ನಿಲ್ದಾಣ ರಸ್ತೆಗಳ ಅಭಿವೃದ್ಧಿ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚಿಸಲಾಯಿತು.


ಎಲ್ಲದಕ್ಕೂ ಸಕಾರಾತ್ಮಕವಾಗಿ ಸ್ಪಂದಿಸಿದ ತ್ಯಾಗರಾಜನ್, ಬೆಳಗಾವಿಯ ಬೇಡಿಕೆಗೆ ತಕ್ಕಂತೆ ವಿಮಾನ ಸೇವೆ ಒದಗಿಸಲು ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳಲಾಗುವುದು. ಸ್ಥಳೀಯ ಸಚಿವರು, ಸಂಸದರು, ವಿಮಾನಯಾನ ಸಂಸ್ಥೆ ಅಧಿಕಾರಿಗಳು ಮತ್ತು ಮೇಲಧಿಕಾರಿಗಳ ಜೊತೆಗೂ ಚರ್ಚಿಸಲಾಗುವುದು. ಆದಷ್ಟು ಬೇಗ ವಿಮಾನ ನಿಲ್ದಾಣ ಸೇವೆಯನ್ನು ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಭರವಸೆ ನೀಡಿದರು.


ಎಫ್ಒಎಬಿಯ ಚೈತನ್ಯ ಕುಲಕರ್ಣಿ, ರಾಮ ಭಂಡಾರೆ, ಸಚಿನ್ ಸಬ್ನಿಸ್, ವಿನಾಯಕ ಲೋಕೂರ್, ಎಂ.ಕೆ.ಹೆಗಡೆ, ರೋಹನ್ ಜುವಳಿ, ಸತೀಶ್ ಕುಲಕರ್ಣಿ, ಹುಂಬರವಾಡಿ, ರಾಜೇಂದ್ರ ಮುಂದಡ, ಅಮಿತ್ ಕಾಲಕುಂದ್ರಿ, ಮಹೇಶ ಬಿರಂಗಿ, ಸ್ವಪ್ನಿಲ್ ಶಹಾ, ಪಂಡಿತ್ ಮೊದಲಾದವರು ಇದ್ದರು.


ವಿಮಾನ ನಿಲ್ದಾಣದ ಸಹಾಯಕ ಪ್ರಧಾನ ವ್ಯವಸ್ಥಾಪಕ ಪಿ.ಎಸ್. ದೇಸಾಯಿ, ಇಂಡಿಗೋ ಸಂಸ್ಥೆಯ ಪ್ರತಿನಿಧಿಗಳು ಸಹ ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ