Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

೨,೫೨,೫೭೦ ಮತದಾರರ ಗಣತಿ ನಮೂನೆ ವಿತರಣೆ

ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಹೇಳಿಕೆ

ವಿಜಯಪುರ,ಜು.೧೭: ಗುರುವಾರ ಮಧ್ಯಾಹ್ನ ೧೨:೦೦ ಗಂಟೆಯವರೆಗೆ ೨,೫೨,೫೭೦ ಮತದಾರರ ಗಣತಿ ನಮೂನೆಗಳನ್ನು ವಿತರಣೆ ಮಾಡಲಾಗಿದ್ದು, ಅದರಲ್ಲಿ ೭೬,೭೭೭ ಗಣತಿ ನಮೂನೆಗಳು ಡಿಜಿಟೈಜ್ ಮಾಡಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಹೇಳಿದರು.
ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIಖ) -೨೦೨೬ ಪ್ರಗತಿ ಕುರಿತಂತೆ ನಗರ ಮತಕ್ಷೇತ್ರದ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆನಲೈನನಲ್ಲಿ ಮತದಾರರು ಸಲ್ಲಿಸಿದ ಒಟ್ಟು ಗಣತಿ ನಮೂನೆಗಳು ೧೯೭೯, ಸಂಗ್ರಹಿಸಲಾಗದ/ಗೈರುಹಾಜರಾದ ಮತದಾರರು ೧೧, ಶಾಶ್ವತವಾಗಿ ಸ್ಥಳಾಂತರಗೊಂಡ ಮತದಾರರು ೪೬೮, ಮರಣ ಹೊಂದಿರುವ ಮತದಾರರು ೮೬೭ ಈಗಾಗಲೇ ನೋಂದಾಯಿಸಿಕೊಂಡ ಮತದಾರರು ೭೩೦ ಮತ್ತು ಇತರೆ ೬೯ ಪ್ರಗತಿಯ ಬಗ್ಗೆ ಮಾಹಿತಿ ನೀಡಲಾಯಿತು.
ಈಗಾಗಲೇ ಶೇ.೮೭ರಷ್ಟು ಮತದಾರರಿಗೆ ಮನೆ ಮನೆಗೆ ತೆರಳಿ ಮತದಾರರ ಗಣತಿ ನಮೂನೆಗಳನ್ನು ವಿತರಿಸಲಾಗಿದೆ. ಗಣತಿ ನಮೂನೆ ತಲುಪದಿರುವ ಮತದಾರರ ಗುರುತಿನ ಚೀಟಿಯ ಮಾಹಿತಿ ಹಾಗೂ ಅವರ ದೂರವಾಣಿ ಸಂಖ್ಯೆಗಳನ್ನು ಸಂಗ್ರಹಿಸಿ ಸಂಬಂಧಪಟ್ಟ ಬಿಎಲ್‌ಒ ಅವರಿಗೆ ನೀಡುವ ಕಾರ್ಯವನ್ನು ಪಾಲಿಕೆಯಿಂದ ಜರುಗಿಸಲಾಗುತ್ತಿದೆ ಎಂದರು.
ನಗರದಲ್ಲಿ ಅನೇಕ ಮತದಾರರು ಒಂದಕ್ಕಿಂತ ಹೆಚ್ಚು ಮತದಾರರ ಗುರುತಿನ ಚೀಟಿಯನ್ನು ಹೊಂದಿದ್ದು, ಪರಿಶೀಲಿಸಿ ಒಂದು ಕಡೆ ಮಾತ್ರ ಮತದಾನದ ಹಕ್ಕು ಉಳಿಯುವಂತೆ ಪರಿಶೀಲಿಸಿ ಕ್ರಮಕೈಗೊಳ್ಳುವಂತೆ ರಾಜಕೀಯ ಪಕ್ಷದ ಮುಖಂಡರು ವಿಷಯವನ್ನು ಪ್ರಸ್ತಾಪಿಸಿದರು. 
ಒಂದು ವೇಳೆ ಉದ್ದೇಶಪೂರ್ವಕವಾಗಿ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸುಳ್ಳು ಘೋಷಣೆ ಅಥವಾ ಸುಳ್ಳು ಮಾಹಿತಿ ನೀಡಿ ಒಂದಕ್ಕಿಂತ ಹೆಚ್ಚು ಮತದಾರರ ಗುರುತಿನ ಚೀಟಿಯನ್ನು ಉಳಿಸಿಕೊಂಡಲ್ಲಿ ಸೆಕ್ಷನ್ ೩೧ ರಡಿ ಗರಿಷ್ಠ ೧ ವರ್ಷ ಶಿಕ್ಷೆ ಅಥವಾ ದಂಡ ಎರಡನ್ನು ವಿಧಿಸಲು ಕಾನೂನಿನಲ್ಲಿ ಅವಕಾಶವಿರುತ್ತದೆ ಎಂಬ ವಿಷಯವನ್ನು ಸಭೆಗೆ ತಿಳಿಸಲಾಯಿತು.
ರಾಜಕೀಯ ಪಕ್ಷಗಳು ತಮ್ಮ ಪಕ್ಷದಿಂದ ನೇಮಕವಾದ ಬಿಎಲ್ ಎಗಳಿಂದ ಪ್ರತಿದಿನಮಾಹಿತಿ ನೀಡಲಾಗುವುದು ಎಂದರು.
ಸಂಬಂಧಪಟ್ಟ ಬಿಎಲ್‌ಒಗಳು, ಮನೆಯ ಸದಸ್ಯರು, ಅಕ್ಕಪಕ್ಕದ ನಿವಾಸಿಗಳೊಂದಿಗೆ ಸ್ಥಳ ಮಹಜರ ಮಾಡಿ, ಮಹಜರ್/ಸ್ಥಳ ಪರಿಶೀಲನಾ ವರದಿಗೆ ಅವರ ಸಹಿಯೊಂದಿಗೆ ಕ್ರಮಕೈಗೊಳ್ಳಲ್ಲಿದ್ದಾರೆ ಎಂದು ಆಯುಕ್ತರು ತಿಳಿಸಿದರು.
ಯಾವುದೇ ಅರ್ಹ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಹಾಗೂ ಯಾವುದೇ ಅನರ್ಹ ಮತದಾರರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಗೆ ಸೇರದಂತೆ ಕ್ರಮವಹಿಸಲು ಎಲ್ಲ ರಾಜಕೀಯ ಪಕ್ಷಗಳ ಬಿಎಲ್ ಎ ಗಳು ಬಿಎಲ್ ಒ ಗಳಿಗೆ ಸಹಕರಿಸಲು ತಿಳಿಸಲಾಯಿತು.
ನಗರ ಮತಕ್ಷೇತ್ರಗಳಲ್ಲಿ ಒಟ್ಟು ೨೮೫ ಮತಗಟ್ಟೆಗಳಿದ್ದು ಈ ಪೈಕಿ ೭೨ ಮತಗಟ್ಟೆಗಳು೧೨೦೦ಕ್ಕಿಂತ ಹೆಚ್ಚಿನ ಮತದಾರರಿದ್ದಾರೆ. ಹಾಗಾಗಿ  ಸಮೀಪದ ಮತಗಟ್ಟೆಗಳಿಗೆ ಹೆಚ್ಚಿನ ಮತಗಳನ್ನು ವರ್ಗಾಯಿಸಿ ಅವಶ್ಯವಿದ್ದಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಲು ಚುನಾವಣಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲು ಸಭೆ ನಿರ್ಧರಿಸಿತು.

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ