Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿಗಳಿಗೆ ಪಠ್ಯ ಪೂರಕ ಪರಿಕರಗಳ ವಿತರಣೆ



ಕೊಪ್ಪಳ: ಎಸ್ ಎಸ್ ಎಲ್ ಸಿ ಮತ್ತು ಪಿ.ಯು. ದ್ವಿತೀಯ ಪರೀಕ್ಷೆ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡರ ಬಣದ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಸನ್ಮಾನಿಸಿ,ಪಠ್ಯ ಪೂರಕ ಪರಿಕರಗಳನ್ನು ವಿತರಿಸಲಾಯಿತು.

ವೇದಿಕೆಯ ಜಿಲ್ಲಾಧ್ಯಕ್ಷ ಶಿವರಾಜ ಉಳ್ಳಾಗಡ್ಡಿ ಅವರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ನಿರ್ಗತಿಕ ಮಕ್ಕಳಿಗೆ ಬ್ಯಾಗ್, ಬುಕ್, ಪೆನ್, ಪೆನ್ಸಿಲ್ ಗಳನ್ನು ವಿತರಿಸಿ ಪ್ರೋತ್ಸಾಹಿಸಲಾಯಿತು. ಇದರೊಂದಿಗೆ ವಿಧವಾ ಮಹಿಳೆಯರಿಗೆ ಊಟದ ಬಾಕ್ಸ್ಗಳನ್ನು ವಿತರಿಸಿ ನಿಮ್ಮೆಲ್ಲ ಸಂಕಷ್ಟಗಳ ಜೊತೆಗೆ ನಾವಿರುವುದಾಗಿ ನೈತಿಕ ಬೆಂಬಲ ನೀಡಿದರು.

ಆಟೋ ಘಟಕದ ಜಿಲ್ಲಾಧ್ಯಕ್ಷ ಸಂಜಯದಾಸ್ ಕೌಜಗೇರಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನಾಗರತ್ನ ಅಳವಂಡಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಪಠ್ಯ ಪೂರಕ ಪರಿಕರಗಳು ವಿತರಿಸಿ, ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪ್ರೋತ್ಸಾಹಿಸಿದರು.

ವೇದಿಕೆಯ ಕೊಪ್ಪಳ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಶೇರು, ಸಾಮಾಜಿಕ ಹೋರಾಟಗಾರರಾದ ರಾಮಲಿಂಗ ನಾಯ್ಕ, ಶಾಸ್ತ್ರೀ ಮಠ, ಆಟೋ ಜಿಲ್ಲಾ ಘಟಕದ, ಯಲ್ಲಪ್ಪ ಹಳ್ಳಿಕೇರಿ, ಕರವೇ ಜಿಲ್ಲಾ ಆಟೋ ಘಟಕ ಜಿಲ್ಲಾ ಅಧ್ಯಕ್ಷರು, ಜಿಲ್ಲಾ ಮಹಿಳಾ ಘಟಕದ ಪಧಾಧಿಕಾರಿಗಳು ಉಪಸ್ಥಿತರಿದ್ದ ಈ ವೇಳೆ ಪ್ರತಿಭಾ ಹಾಗೂ ಗದಗ ಜಿಲ್ಲೆಯ ಎಂ.ಬಿ.ನದಾಫ್ ವಕೀಲರು, ಕೊಪ್ಪಳ ಬಸವಶ್ರೀ ಗುರು ಪೀಠದ ಮಂಜುಳಾ ಬಸವಶ್ರೀ ಟ್ರಸ್ಟ್,  ಪೂರ್ಣಿಮಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ