Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಣಂತಿಯರಿಗೆ ಆರೋಗ್ಯ ಕಿಟ್‌ ವಿತರಣೆ

ಘಟಪ್ರಭಾ: ಬಾಣಂತಿಯರ ಆರೋಗ್ಯ ಹಾಗೂ ನವಜಾತ ಶಿಶುಗಳ ಸುರಕ್ಷತೆ ನಮ್ಮ ಸಂಸ್ಥೆಯ ಪ್ರಮುಖ ಆದ್ಯತೆಯಾಗಿದ್ದು, ಈ ಕಿಟ್‌ಗಳು ತಾಯಂದಿರಲ್ಲಿ ಆರೋಗ್ಯ ಜಾಗೃತಿ ಮೂಡಿಸುವುದರ ಜೊತೆಗೆ ಶಿಶುಗಳ ಸಮರ್ಪಕ ಆರೈಕೆಗೆ ಸಹಕಾರಿಯಾಗಲಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. ಬಿ.ಕೆ.ಎಚ್. ಪಾಟೀಲ ಹೇಳಿದರು.
ಅವರು ಮಂಗಳವಾರ ರಂದು ಸ್ಥಳೀಯ ಶ್ರೀ ಜೆ. ಜಿ. ಸಹಕಾರಿ ಆಸ್ಪತ್ರೆ ಸೊಸಾಯಿಟಿ ನಿಯಮಿತ, ಘಟಪ್ರಭಾ ವತಿಯಿಂದ ಅಮೃತ ಮಹೋತ್ಸವ ಪರ್ವ ೨೦೨೬ ರ ಅಂಗವಾಗಿ ಸ್ತ್ರೀರೋಗ ಮತ್ತು ಪ್ರಸೂತಿ ತಂತ್ರ ವಿಭಾಗದ ಆಶ್ರಯದಲ್ಲಿ ೭೫ ಬಾಣಂತಿಯರಿಗೆ ಅಗತ್ಯ ವಸ್ತುಗಳನ್ನು ಒಳಗೊಂಡ ಆರೋಗ್ಯ ಕಿಟ್‌ಗಳನ್ನು ವಿತರಿಸಿ ಮಾತನಾಡಿ ತಾಯಿ ಮತ್ತು ಶಿಶು ಆರೋಗ್ಯದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಿದರು. ಈ ಕಿಟ್‌ಗಳ ವಿತರಣೆಯಿಂದ ಬಾಣಂತಿಯರಲ್ಲಿ ಸ್ವಚ್ಚತೆ, ಪೋಷಣೆಯ ಅರಿವು ಹೆಚ್ಚುವ ಸಾಧ್ಯತೆ ಇದ್ದು, ವಿಶೇಷವಾಗಿ ಗ್ರಾಮೀಣ ಹಾಗೂ ಹಿಂದುಳಿದ ವರ್ಗದ ತಾಯಂದಿರಿಗೆ ಅಗತ್ಯ ನೆರವು ದೊರಕುವ ಮೂಲಕ ಅವರ ಆರೋಗ್ಯದಲ್ಲಿ ಉತ್ತಮ ಬದಲಾವಣೆ ನಿರೀಕ್ಷಿಸಲಾಗಿದೆ. ಇದರಿಂದ ನವಜಾತ ಶಿಶುಗಳ ಆರೈಕೆಯ ಮಟ್ಟ ಸುಧಾರಿಸದೇ ತಾಯಿ-ಮಗು ಮರಣ ಪ್ರಮಾಣ ಕಡಿಮೆ ಮಾಡುವ ದಿಶೆಯಲ್ಲಿ ಸಹಕಾರಿಯಾಗಲಿದೆ ಹಾಗೂ ಸಮುದಾಯದಲ್ಲಿ ಆರೋಗ್ಯ ಸೇವೆಗಳ ಮೇಲಿನ ವಿಶ್ವಾಸವನ್ನು ಹೆಚ್ಚಿಸುವಲ್ಲಿ ಈ ಕಾರ್ಯಕ್ರಮ ಮಹತ್ವದ ಪಾತ್ರ ವಹಿಸಿದೆ ಎಂದರು
ಕಾರ್ಯಕ್ರಮದ ಅಂತ್ಯದಲ್ಲಿ ಫಲಾನುಭವಿಗಳು ಸಂಸ್ಥೆಯ ಸೇವೆಯನ್ನು ಮೆಚ್ಚಿ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ವೈದ್ಯರು, ನರ್ಸಿಂಗ್ ಸಿಬ್ಬಂದಿ ಹಾಗೂ ಇತರೆ ಸಿಬ್ಬಂದಿ ವರ್ಗದವರು. ಇದ್ದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ