Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Bellary

ಬಳ್ಳಾರಿಯಲ್ಲಿ 4 ಎಕರೆ ಸರ್ಕಾರಿ ಜಮೀನು ವಶಕ್ಕೆ ಪಡೆದ ಜಿಲ್ಲಾಡಳಿತ


ಬಳ್ಳಾರಿ,ನ11: ಸರ್ಕಾರಿ ಜಮೀನು ಒತ್ತುವರಿದಾರರ ವಿರುದ್ಧ ಬಳ್ಳಾರಿ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಂಡಿದ್ದು, ಸೋಮವಾರ ಬೆಳ್ಳಂಬೆಳಗ್ಗೆ ಜೆಸಿಬಿ ಯಂತ್ರಗಳೊAದಿಗೆ ಕಾರ್ಯಾಚರಣೆ ನಡೆಸಿ ಸುಮಾರು 4 ಎಕರೆ ಸರ್ಕಾರಿ ಜಮೀನನ್ನು ವಶಕ್ಕೆ ಪಡೆದಿದೆ. ನಗರದ ಗೌತಮ್ ನಗರ ಬಡಾವಣೆಯ ಸರ್ವೆ ನಂಬರ್ 607/* 1ಎ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ನಡೆದಿದೆ.
ಸರ್ವೆ ನಂಬರ್ 607/* 1ಎ ವ್ಯಾಪ್ತಿಯಲ್ಲಿ ಸುಮಾರು 1 ಎಕರೆ 23 ಸೆಂಟ್ಸ್ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿಕೊಂಡು ದೊಡ್ಡದಾದ ಕಾಂಪೌAಡ್ ನಿರ್ಮಿಸಲಾಗಿತ್ತು. ಅಲ್ಲದೆ, ಸಾರ್ವಜನಿಕ ರಸ್ತೆಯನ್ನು ಕೂಡ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂಬ ಗಂಭೀರ ಆರೋಪವಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಕಾನೂನು ಕ್ರಮ ಕೈಗೊಂಡು ಒತ್ತುವರಿ ಮಾಡಲಾಗಿದ್ದ ಕಾಂಪೌAಡ್ ವಾಲ್ ಅನ್ನು ಜೆಸಿಬಿ ಬಳಸಿ ತೆರವುಗೊಳಿಸಿದೆ.
ಇದೇ ಸರ್ವೆ ನಂಬರ್ ನಲ್ಲಿ ಸುಮಾರು 14 ವರ್ಷಗಳ ಹಿಂದೆ ಹಿಂದುಳಿದ ಹಾಗೂ ಬುದ್ಧಿಮಾಂದ್ಯ ಮಕ್ಕಳ ಕಲ್ಯಾಣಕ್ಕಾಗಿ ‘ಆರೋಗ್ಯ ನಿಕೇತನ ಟ್ರಸ್ಟ್'ಗೆ 2 ಎಕರೆ 77 ಸೆಂಟ್ಸ್ ಜಮೀನು ಮಂಜೂರು ಮಾಡಲಾಗಿತ್ತು. ಸರ್ಕಾರದ ನಿಯಮಗಳ ಪ್ರಕಾರ ಮಂಜೂರಾದ ಜಮೀನನ್ನು 2 ವರ್ಷಗಳೊಳಗೆ ಉದ್ದೇಶಿತ ಸಮಾಜಮುಖಿ ಕಾರ್ಯಕ್ಕೆ ಬಳಸಬೇಕಿತ್ತು. ಆದರೆ, ನಿಗದಿತ ಅವಧಿಯಲ್ಲಿ ಜಮೀನು ಬಳಕೆಯಾಗದ ಕಾರಣ, ಎಲ್ಲಾ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ, ಜಮೀನಿನ ಮಂಜೂರಾತಿಯನ್ನು ರದ್ದುಪಡಿಸಿ ಸರ್ಕಾರಕ್ಕೆ ಹಿಂಪಡೆಯಲಾಗಿದೆ.
ಒಟ್ಟಾರೆಯಾಗಿ ಒಂದೇ ಸರ್ವೆ ನಂಬರ್ ನಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಸುಮಾರು 4 ಎಕರೆ ಜಮೀನನ್ನು ಜಿಲ್ಲಾಡಳಿತ ತೆರವುಗೊಳಿಸಿದ್ದು, 17ನೇ ಕಾರ್ಯಾಚರಣೆ ಇದಾಗಿದೆ.
*ಟಾಸ್ಕ್ ಫೋರ್ಸ್ ನಿಂದ ಇದುವರೆಗೆ 150 ಎಕರೆ ಜಮೀನು ವಶ:*
ಬಳ್ಳಾರಿ ಜಿಲ್ಲೆಯಲ್ಲಿ ಸರ್ಕಾರಿ ಆಸ್ತಿಗಳ ರಕ್ಷಣೆ ಹಾಗೂ ಒತ್ತುವರಿ ತೆರವಿಗೆ ವಿಶೇಷ ಆದ್ಯತೆ ನೀಡಲಾಗಿದೆ. ಜಿಲ್ಲೆಯಲ್ಲಿ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಲು ಟಾಸ್ಕ್ ಫೋರ್ಸ್ ರಚನೆಯಾದ ಬಳಿಕ, ಇದುವರೆಗೆ ಬರೋಬ್ಬರಿ 150 ಎಕರೆಗೂ ಅಧಿಕ ಸರ್ಕಾರಿ ಜಮೀನನ್ನು ಒತ್ತುವರಿದಾರರಿಂದ ಮುಕ್ತಗೊಳಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ತಿಳಿಸಿದರು.
ಟಾಸ್ಕ್ ಫೋರ್ಸ್ ನಲ್ಲಿ ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ., ಬಳ್ಳಾರಿ ತಾಲೂಕು ತಹಶೀಲ್ದಾರ ನರಸಪ್ಪ ಸೇರಿದಂತೆ ಕಂದಾಯ ಅಧಿಕಾರಿಗಳು, ಪೊಲೀಸ್ ಇಲಾಖೆಯ ಸಿಬ್ಬಂದಿ ಹಾಗೂ ಇತರರು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಿಂದುಸ್ತಾನಿ ವಾದ್ಯ ಸಂಗೀತದಲ್ಲಿ ಜಿಲ್ಲೆಗೆ ವರುಣ್ ಪ್ರಥಮರನ್ನ ಬೆಳಗಲಿ ಭಜಂತ್ರಿ ಗಲ್ಲಿಯಲ್ಲಿ ವೈಭವದ ಲಕ್ಷ್ಮಿದೇವಿ ಜಾತ್ರಾ ಮಹೋತ್ಸವಬಳ್ಳಾರಿ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಹಾಗೂ ಸ್ಥಾಯಿ ಸಮಿತಿ ಸ್ಥಾನಗಳಿಗೆ ನವೆಂಬರ್ 13 ರಂದು ಚುನಾವಣೆಬಳ್ಳಾರಿಯಲ್ಲಿ 4 ಎಕರೆ ಸರ್ಕಾರಿ ಜಮೀನು ವಶಕ್ಕೆ ಪಡೆದ ಜಿಲ್ಲಾಡಳಿತನಮ್ಮ ಕರುನಾಡು ವೇದಿಕೆ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಮಾಜಿ ಸಚಿವ ಶ್ರೀರಾಮುಲು ರಾಮದುರ್ಗ: ₹3.80 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಅಶೋಕ ಪಟ್ಟಣ ಭೂಮಿಪೂಜೆವಿವಿಧ ಸಂಸ್ಥೆಗಳಲ್ಲಿ ದೀಪಾವಳಿ ಲಕ್ಷ್ಮೀ ಪೂಜೆ: ಸಿಬ್ಬಂದಿಗೆ ಲಕ್ಷ್ಮೀ ಹೆಬ್ಬಾಳಕರ್ ಶುಭಾಶಯಜನನಿಬಿಡ ರಸ್ತೆಯಲ್ಲಿ ಸಾರ್ವಜನಿಕರ ಜೀವದ ಜೊತೆ ಚೆಲ್ಲಾಟ : ಜಿ.ಪಿ. ಘೋರ್ಪಡೆಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆ ಮತ್ತು ಕವಿಗೋಷ್ಠಿಗಳಿಗಾಗಿ ಲೇಖನಗಳ, ಕವಿತೆಗಳ ಆಹ್ವಾನ.