Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದ್ವಿತೀಯ ಪಿಯುಸಿ ಪರೀಕ್ಷೆ-2; ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

ಗದಗ, ಏಪ್ರಿಲ್ 17;- ದ್ವಿತೀಯ ಪಿಯುಸಿ ಪರೀಕ್ಷೆ- 2 ಅಂತಿಮ ವೇಳಾಪಟ್ಟಿಯು ಈಗಾಗಲೇ ಪ್ರಕಟವಾಗಿದ್ದು, ಇದೇ ಏಪ್ರಿಲ್ 29 ರಿಂದ ಪರೀಕ್ಷೆ ಆರಂಭವಾಗಲಿದೆ. ಆ ನಿಟ್ಟಿನಲ್ಲಿ ಪರೀಕ್ಷೆ ಸಂಬಂಧ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಸೂಚಿಸಿದ್ದಾರೆ.


ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ನಿರ್ದೇಶನದಂತೆ ದ್ವಿತೀಯು ಪಿ.ಯು.ಸಿ.-2 ಪರೀಕ್ಷೆಯನ್ನು ನಡೆಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ ಟಿವಿ ಅಳವಡಿಸುವುದು, ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡುವುದು ಸೇರಿದಂತೆ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಹಲವು ಕ್ರಮಗಳನ್ನು ಕೈಗೊಳ್ಳುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ  ಜಿಲ್ಲಾಧಿಕಾರಿ ಅವರು ಸ್ಪಷ್ಟ ನಿರ್ದೇಶನ ನೀಡಿದರು.


ಪರೀಕ್ಷೆಯ ಗಂಭೀರತೆಯನ್ನು ತಿಳಿಯಬೇಕು. ಯಾವುದೇ ರೀತಿಯ ಗೊಂದಲಕ್ಕೆ ಅವಕಾಶ ಮಾಡದೇ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಗಾಳಿ, ಬೆಳಕು ವ್ಯವಸ್ಥೆ ಇರಬೇಕು. ಜೊತೆಗೆ ಪರೀಕ್ಷಾ ಸಂದರ್ಭದಲ್ಲಿ ನಿರಂತರ ವಿದ್ಯುತ್ ಸಂಪರ್ಕ ಇರಬೇಕು ಎಂದರು.


ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗದಗ ಜಿಲ್ಲೆ ರಾಜ್ಯದಲ್ಲಿ ಕೊನೆಯ ಸ್ಥಾನ ಪಡೆದಿರುವುದು ಬೇಸರ ತಂದಿದೆ. ಆದ್ದರಿಂದ ಮುಂದಿನ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಉತ್ತಮ ಫಲಿತಾಂಶ  ಪಡೆಯಲು ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.


ಜಿಲ್ಲೆಯ ಎಲ್ಲಾ ಪದವಿ ಪೂರ್ವ ಕಾಲೇಜುಗಳಲ್ಲಿ ಕಡ್ಡಾಯವಾಗಿ ಬಯೋಮೆಟ್ರಿಕ್ ಅಳವಡಿಸಬೇಕು. ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿಗಳುಕಾಲೇಜಿಗೆ ಬರುವ ಮತ್ತು ಹೋಗುವ ಸಮಯ ದಾಖಲಾಗಬೇಕು. ಬಯೋಮೆಟ್ರಿಕ್‍ನಲ್ಲಿ ದೋಷ ಉಂಟಾದಲ್ಲಿ ಆಯಾಯ ಕಾಲೇಜಿನ ಪ್ರಾಂಶುಪಾಲರನ್ನೇ ಹೊಣೆಗಾರರನ್ನಾಗಿ ಮಾಡಬೇಕು ಎಂದು ಜಿಲ್ಲಾಧಿಕಾರಿಯವರು ಇದೇ ಸಂದರ್ಭದಲ್ಲಿ ತಿಳಿಸಿದರು.


ಹೆಚ್ಚುವರಿ ಜಿಲ್ಲಾಧಿಕಾರಿ ಸುರೇಖಾ ಅವರು ಮಾತನಾಡಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಸುಗಮವಾಗಿ ಹಾಗೂ ಸುಸೂತ್ರವಾಗಿ ನಡೆಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳಿಗೆ ಯಾವುದೇ ರೀತಿ ತೊಂದರೆಯಾಗದಂತೆ ಗಮನ ಹರಿಸಬೇಕು ಎಂದು ತಿಳಿಸಿದರು.


ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಜಿ.ಎನ್.ಕುರ್ತಕೋಟಿ ಅವರು ಮಾತನಾಡಿ ಜಿಲ್ಲೆಯ ರೋಣ ಪಟ್ಟಣದ ವೀರರಾಣಿ ಚೆನ್ನಮ್ಮ ಪದವಿ ಪೂರ್ವ ಕಾಲೇಜು, ನರಗುಂದ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜು, ಲಕ್ಷ್ಮೇಶ್ವರ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜು, ಶಿರಹಟ್ಟಿ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜು, ಮುಂಡರಗಿಯ ಅನ್ನದಾನೇಶ್ವರ ಕಾಲೇಜು, ಗಜೇಂದ್ರಗಡ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜು  ಗದಗ ನಗರದ ಎಚ್.ಸಿ.ಇ.ಎಸ್. ಪದವಿ ಪೂರ್ವ ಕಾಲೇಜು ಮತ್ತು ಜೆ.ಟಿ.ಪದವಿ ಪೂರ್ವ ಕಾಲೇಜು ಈ 8 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ