LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಉತ್ಸವದ ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ

ಕಿತ್ತೂರು ಉತ್ಸವ-2026

ಬೆಳಗಾವಿ. ಅ.13. : ವೀರರಾಣಿ‌ ಕಿತ್ತೂರು ಚನ್ನಮ್ಮ ಉತ್ಸವದ ಅಂಗವಾಗಿ ರಚಿಸಲಾದ ವಿವಿಧ ಉಪ ಸಮಿತಿಗಳು ಪರಸ್ಪರ‌ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸುವುದರ ಮೂಲಕ ಉತ್ಸವ ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ (ಅ.13) ಜರುಗಿದ ಕಿತ್ತೂರು ಉತ್ಸವ-2026ರ ಉಪಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಉತ್ಸವದ ಯಶಸ್ವಿಗಾಗಿ ಈಗಾಗಲೇ ರಚಿಸಲಾದ  ವಿಜಯ ಜ್ಯೋತಿ, ಸ್ವಾಗತ, ವಸತಿ, ಉಟೋಪಚಾರ, ವೇದಿಕೆ, ಸಾಂಸ್ಕೃತಿಕ, ಮೆರವಣಿಗೆ‌ ಸಮಿತಿ ಸೆರಿದಂತೆ ವಿವಿಧ ಉಪ‌ ಸಮಿತಿಗಳು ತಮ್ಮ‌ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದರು.
ಉಪ ಸಮಿತಿಗಳಿಗೆ ಹಂಚಿಕೆ‌ ಮಾಡಲಾದ ಅನುದಾನದಡಿ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜನೆಗೆ ಕ್ರಮ‌ ವಹಿಸಲು ಸೂಚಿಸಿದರು.
ಕಿತ್ತೂರಿನಲ್ಲಿ ಮೂರು‌ ದಿನಗಳ ಕಾಲ ಜರುಗುವ ಕಿತ್ತೂರು ಉತ್ಸವದ ಜೊತೆಗೆ ಕಾಕತಿ ಉತ್ಸವದ ಆಚರಣೆಗೆ ಎಲ್ಲ‌ ಉಪ ಸಮಿತಿಗಳು  ಜವಾಬ್ದಾರಿಯುತವಾಗಿ ನಿರ್ವಹಿಸುವುದರ ಮೂಲಕ‌ ಅದ್ಧೂರಿ ಉತ್ಸವದ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌ ಅವರು ತಿಳಿಸಿದರು.
ಸಭೆಯಲ್ಲಿ ಪ್ರಶಿಕ್ಷಣಾರ್ಥಿ ಆಯ್.ಎ.ಎಸ್. ಅಧಿಕಾರಿ ರೋಹಿತ್ ಸಿಂಗ್, ಉಪ ವಿಭಾಗಾಧಿಕಾರಿಗಳಾದ ಪ್ರವೀಣ ಜೈನ್, ಶ್ರವಣಕುಮಾರ ನಾಯಕ, ಸವದತ್ತಿ ಯಲ್ಲಮ್ಮ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ರಾಜಶ್ರೀ ಜೈನಾಪುರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೆಶಕಿ ವಿದ್ಯಾವತಿ ಭಜಂತ್ರಿ, ಆಹಾರ ಮತ್ತು ನಾಗರಿಕ‌ ಸರಬರಾಜು ಇಲಾಖೆ ಉಪನಿರ್ದೆಶಕ‌ ಮಲ್ಲಿಕಾರ್ಜುನ ನಾಯಕ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
***

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಲ್ಲಮ್ಮ ದೇವಸ್ಥಾನದ ಭಕ್ತರಿಗೆ ಮೂಲಸೌಕರ್ಯ ಕಲ್ಪಿಸುತ್ತೇನೆಇಸ್ರೋ ರೋಬೋಟಿಕ್ಸ್ ಚಾಲೆಂಜ್‌ನಲ್ಲಿ ಐಐಐಟಿ ಧಾರವಾಡ ತಂಡಕ್ಕೆ ನಾಲ್ಕನೇ ಸ್ಥಾನ*ಕುಡಿಯುವ ನೀರನ್ನು ಕೃಷಿಗೆ ಬಳಸಬೇಡಿ: ಜಿಲ್ಲಾಧಿಕಾರಿ ಸ್ನೇಹಲ್ ಆರ್.ಕಬ್ಬು ಬೆಳೆಗಾರರ ಹೋರಾಟ- ಪ್ರಧಾನಿ ಮಧ್ಯಸ್ಥಿಕೆಗೆ ಆಗ್ರಹಸಂಕೇಶ್ವರದಲ್ಲಿ ನೂತನ ಇಂದಿರಾ ಕ್ಯಾಂಟೀನ್ ಉದ್ಘಾಟನೆ: ಬಡವರ ಹಸಿವು ನೀಗಿಸಲು ಚಾಲನೆಕಿತ್ತೂರು ಉತ್ಸವ ವಿಚಾರ ಸಂಕಿರಣದಲ್ಲಿ ರಾಜ್ಯಮಟ್ಟದ ಇತಿಹಾಸ ತಜ್ಞರಿಂದ ಉಪನ್ಯಾಸ: ಡಾಕ್ಟರ್ ಸಂತೋಷ್ ಹಾನಗಲ್ಲ.ರಾಜ್ಯಮಟ್ಟಕ್ಕೆ ಭೂಮಿಕಾ ಮಡ್ಡಿ, ಸ್ಪೂರ್ತಿ ಹರನಾಳ ಆಯ್ಕೆಪಗಡೆಯಾಟಕ್ಕೆ ಕ್ರಿಕೆಟ್-ಹಾಕಿಯಂತೆ ಹೆಚ್ಚಿನ ಪ್ರಚಾರ ಸಿಗಲಿ: ಬಿಜೆಪಿ ಮುಖಂಡ ಮಡಿವಾಳಪ್ಪ ಬಿದರಗಟ್ಟಿಕಾಲೇಜು ವಿಭಾಗ : ಶೆಟಲ್ ಬ್ಯಾಡ್ಮಿಂಟನ್ ರಾಜ್ಯ ಮಟ್ಟಕ್ಕೆ ಆಯ್ಕೆ ಯರಗಟ್ಟಿ ಸರ್ಕಾರಿ ಕನ್ನಡ ಮಾದರಿ ಶಾಲೆಗೆ ಬಾಷ್ ಕಂಪನಿಯಿಂದ ?೧ ಕೋಟಿ ಅನುದಾನ