ಧಾರವಾಡ, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಸ್ನೇಹಲ್ ಆರ್. ಮತ್ತು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಇಂದು (ಅ.25) ಅಳ್ನಾವರ ತಾಲೂಕಿನ ಬೆಣಚಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಡೋರಿ ಗ್ರಾಮಕ್ಕೆ ಭೇಟಿ ನೀಡಿದರು.
ಅಂಗನವಾಡಿ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಮಕ್ಕಳೊಂದಿಗೆ ಚರ್ಚಿಸಿದರು. VBGRAMG ಯೋಜನೆಯಡಿಯಲ್ಲಿ ಪ್ರಗತಿಯಲ್ಲಿರುವ ಅಳ್ನಾವರ ತಾಲೂಕಿನ ಕಡಬಗಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹುಲಿಕೇರಿ ಗ್ರಾಮದಲ್ಲಿ ಇಂದಿರಮ್ಮ ಕೆರೆ ಪುನರುಜ್ಜೀವನ ಹೂಳೆತ್ತುವ ಕಾಮಗಾರಿ ಪರಿವೀಕ್ಷಣೆ ಮಾಡಿ, ಕೂಲಿ ಕಾರ್ಮಿಕರೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಅಳ್ನಾವರ ಗ್ರಾಮೀಣ ಉದ್ಯೋಗದ ಕಾರ್ಯನಿರ್ವಾಹಕ ಅಧಿಕಾರಿ, ಸಹಾಯಕ ನಿರ್ದೇಶಕರು, ಕಾರ್ಮಿಕರು ಸೇರಿದಂತೆ ಸಾರ್ವಜನಿಕರು ಹಾಜರಿದ್ದರು.