LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bellary

ಸಾಮಾಜಿಕ ಜಾಲತಾಣಗಳು ಹಾಗೂ ಬ್ಲಾಕ್‌ಮೇಲ್ ವಿರುದ್ಧ ಎಚ್ಚರ ವಹಿಸಲು ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆ

ಬಳ್ಳಾರಿಯಲ್ಲಿ ‘ಸುರಕ್ಷಿತ ಬಚಪನ್ ಅಭಿಯಾನ'ಕ್ಕೆ ಚಾಲನೆ


ಬಳ್ಳಾರಿ,ಅ.28: ಅಪರಿಚಿತ ವ್ಯಕ್ತಿಗಳ ನಡವಳಿಕೆ, ಸಾಮಾಜಿಕ ಜಾಲತಾಣಗಳಲ್ಲಿ ಫ್ರೆಂಡ್ ರಿಕ್ವೆಸ್ಟ್ ಮೂಲಕ ಪರಿಚಯವಾಗಿ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ದುರುಪಯೋಗಪಡಿಸಿಕೊಳ್ಳುವುದು ಹಾಗೂ ಬ್ಲಾಕ್‌ಮೇಲ್ ಮಾಡುವ ಜಾಲಗಳ ಬಗ್ಗೆ ವಿದ್ಯಾರ್ಥಿಗಳು ಸದಾ ಎಚ್ಚರದಿಂದಿರಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಸಿದ್ದಲಿಂಗ ಪ್ರಭು ಅವರು ಹೇಳಿದರು.
ರಾಷ್ಟಿçÃಯ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಮಾರ್ಗದರ್ಶನದಲ್ಲಿ, ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಲ್ಲಿ ಪೋಕ್ಸೋ ಕಾಯ್ದೆ-2012 ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಅಕ್ಟೋಬರ್ 26 ರಿಂದ 31ರವರೆಗೆ ನಡೆಯುತ್ತಿರುವ ‘ಸುರಕ್ಷಿತ ಬಚಪನ್ ಅಭಿಯಾನ’ಕ್ಕೆ ನಗರದ ಕಪ್ಪಗಲ್ ರಸ್ತೆಯ ಡ್ರೀಮ್ ವರ್ಲ್ಡ್ ಶಾಲೆಯಲ್ಲಿ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದರು.
ಮಕ್ಕಳ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸರ್ವೋಚ್ಚ ನ್ಯಾಯಾಲಯ ಹಾಗೂ ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಅಕ್ಟೋಬರ್ ಅಂತ್ಯದವರೆಗೆ ಈ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ತಿಪ್ಪೇಸ್ವಾಮಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳ ರಕ್ಷಣೆಗಾಗಿ ಕಾನೂನಿನಲ್ಲಿ ಸೂಕ್ತ ಅವಕಾಶಗಳಿದ್ದು, ಯಾವುದೇ ತೊಂದರೆ ಅಥವಾ ತುರ್ತು ಸಂದರ್ಭದಲ್ಲಿ ನೆರವು ಪಡೆಯಲು ಮಕ್ಕಳ ಸಹಾಯವಾಣಿ ಸಂಖ್ಯೆ 1098 ಅನ್ನು ಬಳಸುವಂತೆ ಸಲಹೆ ನೀಡಿದರು.
ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ತ್ರಿವೇಣಿ ಪತ್ತಾರ್ ಅವರು ಮಾತನಾಡಿ, ‘ನಿಮ್ಮ ದೇಹ ನಿಮ್ಮ ಹಕ್ಕು’ ಯಾವುದೇ ರೀತಿಯ ಕಿರುಕುಳ ಅಥವಾ ಅಹಿತಕರ ಘಟನೆಗಳು ಸಂಭವಿಸಿದಾಗ ಭಯಪಡದೆ ಧೈರ್ಯವಾಗಿ ಎದುರಿಸಬೇಕು ಹಾಗೂ ಸಂಬAಧಪಟ್ಟ ಅಧಿಕಾರಿಗಳಿಗೆ ಅಥವಾ ಪಾಲಕರಿಗೆ ಮಾಹಿತಿ ನೀಡಿ ದೂರು ದಾಖಲಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಸಮಾರಂಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್. ಹೊಸಮನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ್, ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಲಿಂಗ ಮೂರ್ತಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಂದಿನಿ ಶಿಂಧೆ ಹಾಗೂ ಡ್ರೀಮ್ ವರ್ಲ್ಡ್ ಶಾಲೆಯ ಪ್ರಾಂಶುಪಾಲರಾದ ಪರಿಮಳ ಸೇರಿದಂತೆ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಾಹಿತಿ ಪ್ರೊ.ಗದ್ದಿಗೌಡರ  ಅವರ ಸಾಹಿತ್ಯ ಸೇವೆ ಅಪಾರ:ಅಶೋಕ ಚಂದರಗಿ   ಸಾಮಾಜಿಕ ಜಾಲತಾಣಗಳು ಹಾಗೂ ಬ್ಲಾಕ್‌ಮೇಲ್ ವಿರುದ್ಧ ಎಚ್ಚರ ವಹಿಸಲು ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆಬಳ್ಳಾರಿ ಜಿಲ್ಲೆ ಮತದಾರರ ಅಂತಿಮ ಪಟ್ಟಿ ಪ್ರಕಟ: ಒಟ್ಟು 10,20,443 ಮತದಾರರುಬಳ್ಳಾರಿ ಕನ್ನಡ ರಾಜ್ಯೋತ್ಸವ: ಧ್ವಜಾರೋಹಣ ನೆರವೇರಿಸಲಿರುವ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್ನ.01 ರಂದು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಖರ್ಗೆ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ: ಕ್ಷಮೆಯಾಚನೆಗೆ ಆಗ್ರಹರೂಪನಗುಡಿ ರಸ್ತೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಬಳ್ಳಾರಿಯಲ್ಲಿ ಬೇಸ್‌ಮೆಂಟ್ ಪಾರ್ಕಿಂಗ್ ದುರ್ಬಳಕೆ ತಡೆಗೆ ಸಿದ್ದೇಶ ಊಳೂರು ಆಗ್ರಹಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 59ನೇ ವರ್ಷಾಚರಣೆಯಲ್ಲಿ  ಜಾತಿ  ತಾರತಮ್ಯ  ಸಿಪಿಐ(ಎಂ)ಖಂಡನೆಜಿಲ್ಲೆಯಲ್ಲಿ 10.8 ಲಕ್ಷ ಮತದಾರರು; 14,210 ಹೊಸ ಮತದಾರರ ಸೇರ್ಪಡೆ : ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ