ನೇಸರಗಿ. ಸೆ. 5: ಶಿಕ್ಷಕರ ದಿನಾಚರಣೆಯ ಅಂಗವಾಗಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಮೊಹರೆ ಗ್ರಾಮದ ಅನುದಾನಿತ ಕಿರಿಯ ಪ್ರಾಥಮಿಕ ಆಶ್ರಮ ಶಾಲೆಯ ಸಹ ಶಿಕ್ಷಕರಾದ ಪೀಟರ್ ದಳವಾಯಿ ಅವರಿಗೆ ಪ್ರತಿಷ್ಠಿತ “ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ” ನೀಡಿ ಗೌರವಿಸಲಾಯಿತು.
ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಉತ್ತರ ಶಾಸಕ ಆಸೀಫ್( ರಾಜು ) ಶೇಠ್, ಭರಮಗೌಡ ಅ.ಕಾಗೆ, ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಭರಮಣ್ಣ ಉಪ್ಪಾರ, ಪ್ರಾದೇಶಿಕ ಆಯುಕ್ತರಾದ ಶ್ರೀಮತಿ ಜಾನಕಿ ಕೆ.ಎಂ, ಡಿಡಿಪಿಐ ಶ್ರೀಮತಿ ಲೀಲಾವತಿ ಹಿರೇಮಠ, ಬೆಳಗಾವಿ ನಗರ ಬಿ ಯು ವೈ. ಜೆ. ಭಜಂತ್ರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.