Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೂನ್ 28 ರಂದು ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ಧಾರವಾಡ,23 :  ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಜೂನ್ 28, 2026 ರಂದು ಹಮ್ಮಿಕೊಳ್ಳಲಾಗಿದ್ದು, 0 ರಿಂದ 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲಾಗುವುದು. ನಂತರ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಕ್ರಮವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ ಅವರು ಹೇಳಿದರು.
  ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ 2026 ಕಾರ್ಯಕ್ರಮದ ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸಭೆ ಜರುಗಿಸಿ, ಮಾತನಾಡಿದರು. 
ಪಲ್ಸ್ ಪೋಲಿಯೋ ಕಾರ್ಯಕ್ರಮದಡಿ ಜಿಲ್ಲೆಯ ಎಲ್ಲ ಅರ್ಹ ಮಕ್ಕಳಿಗೆ ಕಡ್ಡಾಯವಾಗಿ ಎರಡು ಹನಿ ಪೋಲಿಯೋ ಲಸಿಕೆ ನೀಡಬೇಕು. ಗ್ರಾಮೀಣ ಪ್ರದೇಶದಲ್ಲಿ ಜೂನ್ 29, 2026 ರಿಂದ ಜೂನ್ 30, 2026 ರವರೆಗೆ ಹಾಗೂ ನಗರ ಪ್ರದೇಶದಲ್ಲಿ ಜೂನ್ 29, 2026 ರಿಂದ ಜುಲೈ 1, 2026 ವರೆಗೆ ಮನೆ ಮನೆ ಭೇಟಿ ಮೂಲಕ ಆರೋಗ್ಯ ಕಾರ್ಯಕರ್ತರು 0-5 ವರ್ಷದ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯವನ್ನು ಸಮರ್ಪಕವಾಗಿ ಕೈಗೊಳ್ಳಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ 5 ವರ್ಷದೊಳಗಿನ 2,08,779 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದ್ದು, 889 ಲಸಿಕಾ ಕೇಂದ್ರಗಳಿವೆ. 96 ಟ್ರಾಂಜಿಸ್ಟ್ ತಂಡಗಳು ಹಾಗೂ 57 ಮೊಬೈಲ್ ತಂಡಗಳನ್ನು ನಿಯೋಜಿಸಲಾಗಿದೆ. ಕಾರ್ಯಕ್ರಮಕ್ಕಾಗಿ 3,862 ವ್ಯಾಕ್ಸಿನೆಟರ್ಸಗ ಳು ಮತ್ತು 218 ಮೇಲ್ವಿಚಾರಕರು ಕಾರ್ಯನಿರ್ವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಕರಪತ್ರ ಹಾಗೂ ಬ್ಯಾನರ್‍ ಗಳನ್ನು ಪ್ರದರ್ಶಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಗ್ರಾಮಗಳಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ಕುರಿತು ಅರಿವು ಮೂಡಿಸುವ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಸಭೆಯಲ್ಲಿ ಸೂಚಿಸಿದರು.
 
ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕಾಗಿ ಜಿಲ್ಲೆಗೆ ಒಟ್ಟು 189 ವಾಹನಗಳ ಅಗತ್ಯವಿದ್ದು, ವಿವಿಧ ತಾಲೂಕುಗಳಿಗೆ ಅವಶ್ಯಕತೆ ಅನುಸಾರ ವಾಹನಗಳನ್ನು ನಿಯೋಜಿಸಲಾಗುವುದು. ಬಸ್ ನಿಲ್ದಾಣಗಳಲ್ಲಿ ಆರೋಗ್ಯ ಇಲಾಖೆಯ Transit  ತಂಡಗಳ ಮುಖಾಂತರ ಮಕ್ಕಳಿಗೆ ಲಸಿಕೆ ಹಾಕಲು ಕ್ರಮವಹಿಸಬೇಕು. ಹಾಗೂ ಬಿ. ಆರ್.ಟಿ. ಎಸ್ ನಿಲ್ದಾಣಗಳಲ್ಲಿ ಹಾಗೂ ರೈಲ್ವೆ ನಿಲ್ದಾಣಗಳಲ್ಲಿ ಪೋಲಿಯೋ ಬೂತ್‍ಗಳನ್ನು ತೆರೆಯುವುದು ಮತ್ತು ನಿಲ್ದಾಣಗಳಲ್ಲಿನ ವಿದ್ಯುತ್ ಮಾಹಿತಿ ಫಲಕದಲ್ಲಿ ಎಲ್ಲ 0-5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ಪ್ರಕಟಣೆ ಹೊರಡಿಸುವಂತೆ ಕ್ರಮವಹಿಸಲು ತಿಳಿಸಿದರು. 
ಲಸಿಕೆಯನ್ನು ಸುರಕ್ಷಿತವಾಗಿಡಲು ಹಾಗೂ ಶೀತಲ ಪ್ಯಾಕ್‍ಗಳನ್ನು ತಯಾರಿಸಲು ನಿರಂತರ ವಿದ್ಯುಚ್ಛಕ್ತಿಯ ಅವಶ್ಯಕತೆ ಇರುವುದರಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸಮುದಾಯ ಆರೋಗ್ಯ ಕೇಂದ್ರದ ಪ್ರದೇಶಗಳಲ್ಲಿ ಪಲ್ಸ್ ಪೋಲಿಯೋ ದಿನಾಂಕದ ಹಿಂದಿನ ಒಂದು ವಾರದಿಂದ ಮುಂದಿನ ಮೂರು ದಿನಗಳವರೆಗೆ ವಿದ್ಯುಚ್ಛಕ್ತಿ ನಿರಂತರವಾಗಿ ಸರಬರಾಜು ಮಾಡುವಂತೆ ಅಧಿಕಾರಿಗಳು ಕ್ರಮವಹಿಸಬೇಕು. ಅದರಂತೆ ಆರೋಗ್ಯ ಇಲಾಖೆ, ವಿವಿಧ ಇಲಾಖೆಗಳ ಸಿಬ್ಬಂದಿಗಳು ಅಭಿಯಾನದ ಯಶಸ್ಸಿಗೆ ಕೈಜೋಡಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನದ ಬಿತ್ತಿಪತ್ರವನ್ನು ಎಲ್ಲ ಅಧಿಕಾರಿಗಳು ಸೇರಿ ಬಿಡುಗಡೆ ಮಾಡಿದರು. 
ಸಭೆಯಲ್ಲಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಪರಶುರಾಮ ಎಫ್.ಕೆ., ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಾ.ಬಿ.ಆರ್. ಪಾತ್ರೋಟ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಸಂಗಪ್ಪ ಗಾಬಿ, ಆರೋಗ್ಯ ಇಲಾಖೆಯ ಕಾರ್ಯಕ್ರಮ ಅಧಿಕಾರಿ ಡಾ. ಶಶಿಧರ ಕಳಸೂರಮಠ, ಧಾರವಾಡ ತಾಲೂಕಾ ವೈದ್ಯಾಧಿಕಾರಿ ಡಾ.ಕೆ.ಎನ್.ತನುಜಾ, ಡಿ.ಎಮ್.ಓ ಡಾ.ಮಂಜುನಾಥ ಸೊಪ್ಪಿನಮಠ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು. 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ