Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅನುಮತಿ ಇಲ್ಲದೆ ಮಾಂಸ ಸಾಗಾಣಿಕೆ ನಿಷೇಧ: ಜಿಲ್ಲಾಧಿಕಾರಿ ದಿವ್ಯ ಪ್ರಭು



ಧಾರವಾಡ :  ಬರುವ ಜೂ.7 ರಂದು ಬಕ್ರಿದ್ ಹಬ್ಬವನ್ನು ಶಾಂತಿಯುತವಾಗಿ ಜಿಲ್ಲೆಯ ಸಾರ್ವಜನಿಕರು ಆಚರಿಸಬೇಕು. ಕರ್ನಾಟಕ ಜಾನುವಾರು ಹತ್ಯೆ, ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ-2020 ಪ್ರಕಾರ ನೋಂದಾಯಿತ ವಧಾಗಾರದಲ್ಲಿ ಮಾತ್ರ ಅನುಮತಿ ಇರುವ ಪ್ರಾಣಿಗಳನ್ನು ವಧೆ ಮಾಡಲು ಅವಕಾಶವಿದೆ. ಅನಧಿಕೃತ ಪ್ರಾಣಿ ವಧೆ ಹಾಗೂ ಮಾಂಸ ಸಾಗಾಣಿಕೆ ನಿಷೇಧಿಸಲಾಗಿದೆ ಎಂದು ಅನಧಿಕೃತ ಪ್ರಾಣಿ ಹತ್ಯೆ ಮತ್ತು ಸಾಗಾಣಿಕೆಗಳನ್ನು ತಡೆಗಟ್ಟುವ ಜಿಲ್ಲಾ ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.


 ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಜಾನುವಾರು ಹತ್ಯೆ, ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ-2020 ರ ಪರಿಣಾಮಕಾರಿ ಅನುಷ್ಠಾನ ಮತ್ತು ಅನಧಿಕೃತ ಪ್ರಾಣಿ ಹತ್ಯೆ ಮತ್ತು ಸಾಗಾಣಿಕೆಗಳನ್ನು ತಡೆಗಟ್ಟುವ ಜಿಲ್ಲಾ ಸಮಿತಿ ಸಭೆ ಜರುಗಿಸಿ, ಮಾತನಾಡಿದರು.


ಕರ್ನಾಟಕ ಜಾನುವಾರು ಹತ್ಯೆ, ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ-2020ದ ಪ್ರಕಾರ 13 ವರ್ಷ ಮೇಲ್ಪಟ್ಟ ಎಮ್ಮೆ ಮತ್ತು ಕೋಣಗಳನ್ನು ಮಾತ್ರ ವಧೆ ಮಾಡಲು ಅವಕಾಶವಿದೆ. ಎತ್ತು, ಆಕಳು ಮತ್ತು ಕರು ಇವುಗಳನ್ನು ವಧೆ ಮಾಡಲು ಅವಕಾಶವಿರುವುದಿಲ್ಲ. ಈ ನಿಯಮವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಅನಧಿಕೃತ ವಧಾಲಯಗಳನ್ನು ಗುರುತಿಸಿ, ಸೀಜ್ ಮಾಡಲು ಮತ್ತು ತಪ್ಪಿಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.


ಬರುವ ಜೂನ್ 7 ರಂದು ಜರಗುವ ಹಬ್ಬದ ಹಿನ್ನಲೆಯಲ್ಲಿ ಪ್ರಾಣಿ ವಧೆ ಕುರಿತು ಸರಿಯಾದ ಜಾಗೃತಿ ಮೂಡಿಸಬೇಕು. ಅವಳಿ ನಗರ ಹಾಗೂ ಜಿಲ್ಲೆಯ ಗ್ರಾಮೀಣ ಭಾಗದ ನಗರ ಪಟ್ಟಣಗಳಲ್ಲಿ ಅನಧಿಕೃತವಾಗಿ ಯಾವುದೇ ವಧಾಲಯ ತೆರೆಯದಂತೆ ಮುಂಜಾಗ್ರತೆ ವಹಿಸಬೇಕು. ಕಾನೂನುಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕೆಂದು ಅವರು ಸೂಚಿಸಿದರು.


*ಟಾಸ್ಕ್ ಪೋರ್ಸ್ ರಚಿಸಿ ಆದೇಶ:* ಜಿಲ್ಲೆಯ ಮಹಾನಗರ, ಎಲ್ಲ ನಗರ ಪಟ್ಟಣಗಳ ಹಾಗೂ ಇತರ ಪ್ರದೇಶಗಳಲ್ಲಿ ಕರ್ನಾಟಕ ಜಾನುವಾರು ಹತ್ಯೆ, ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ-2020 ರ ಉಲ್ಲಂಘನೆ ಆಗದಂತೆ ಮುಂಜಾಗ್ರತೆ ವಹಿಸಲು ಪ್ರತಿ ತಾಲೂಕಿಗೆ ಆಯಾ ತಹಶೀಲ್ದಾರ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ಸಮಿತಿಗಳನ್ನು ರಚಿಸಿ, ಆದೇಶಿಸಲಾಗಿದೆ.


ಟಾಸ್ಕ್ ಪೋರ್ಸ್ ಸಮಿತಿಯಲ್ಲಿ ತಹಶೀಲ್ದಾರರು, ಪೊಲೀಸ್ ಅಧಿಕಾರಿ, ತಾಲೂಕಾ ಪಂಚಾಯತ ಇಓ, ಪಾಲಿಕೆ ಅಥವಾ ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿ, ಪಶು ಸಂಗೋಪನೆ ಇಲಾಖೆಯ ವೈದ್ಯರು ಇರುತ್ತಾರೆ. ಪ್ರತಿ ಸಮಿತಿಯು ತಮ್ಮ ವ್ಯಾಪ್ತಿಯ ಪ್ರದೇಶಗಳಲ್ಲಿನ ಪ್ರಾಣಿ ವಧಾಲಯಗಳ ಬಗ್ಗೆ ಮಾಹಿತಿ ಪಡೆದು, ಪರಿಶೀಲಿಸಬೇಕು. ನೋಂದಣಿಯಾಗದೇ ಅನಧಿಕೃತವಾಗಿ ಪ್ರಾಣಿ ವಧಾಲಯ ಆರಂಭಿಸಿದ್ದಲ್ಲಿ ತಕ್ಷಣ ಸೀಜ್ ಮಾಡಿ, ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.


ಬಿಡಾಡಿ ದನಗಳು ಇದ್ದಲ್ಲಿ, ಅವುಗಳನ್ನು ರಕ್ಷಿಸಿ, ಹತ್ತಿರದ ಗೋಶಾಲೆಗೆ ಬಿಡಬೇಕು. ಈ ಕುರಿತು ಸಂಬಂಧಿಸಿದವರು ಅಗತ್ಯ ದಾಖಲೆಗಳನ್ನು, ಫೋಟೊ, ವಿಡಿಯೋಗಳನ್ನು ಮಾಡಬೇಕು. ಮಾಲೀಕರು ತಮ್ಮ ಜಾನುವಾರುಗಳನ್ನು ರಕ್ಷಿಸಿಕೊಳ್ಳದೇ ಬೀದಿಗೆ ಬಿಟ್ಟಿದ್ದಲ್ಲಿ ಅಂತಹ ಜಾನುವಾರುಗಳನ್ನು ವಶಕ್ಕೆ ಪಡೆದು, ಗೋಶಾಲೆಗೆ ಕಳುಹಿಸಬೇಕು ಮತ್ತು ಅಂತಹ ಮಾಲೀಕರಿಗೆ ಹೆಚ್ಚಿನ ಪ್ರಮಾಣದಲ್ಲಿ ದಂಡ ವಿಧಿಸಿ, ಅವರ ವಿರುದ್ಧ ಕರ್ನಾಟಕ ಜಾನುವಾರು ಹತ್ಯೆ, ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ-2020 ರ ಪ್ರಕಾರ ಕಾನೂನು ಕ್ರಮಕೈಗೊಳ್ಳಬೇಕು. ಕಾನೂನು ಅನುಮತಿಸಿರುವ ಕನಿಷ್ಠ 3 ಲಕ್ಷ ದಂಡ ಹಾಗೂ 5 ವರ್ಷದ ವರೆಗಿನ ಕನಿಷ್ಠ ಶಿಕ್ಷೆಯಾಗುವಂತೆ ಮಾಡಬೇಕೆಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.


ಜಿಲ್ಲೆಯಲ್ಲಿ ಒಂದು ಸರ್ಕಾರಿ ಹಾಗೂ ಹತ್ತು ಖಾಸಗಿ ಗೋಶಾಲೆಗಳಿದ್ದು, ರಕ್ಷಿಸಿದ ಜಾನುವಾರುಗಳನ್ನು ಕಳುಹಿಸಬಹುದು. ಮಹಾನಗರ ಪಾಲಿಕೆ ಅಥವಾ ನಗರ ಸ್ಥಳೀಯ ಸಂಸ್ಥೆಗಳು ಜಾನುವಾರುಗಳ ಸಾಗಾಣಿಕೆಗೆ ವಾಹನ ವ್ಯವಸ್ಥೆಯನ್ನು ಮಾಡಬೇಕು. ಪೊಲೀಸ್ ಅಧಿಕಾರಿಗಳು ತಪ್ಪಿಸ್ಥರ ವಿರುದ್ಧ ಎಫ್.ಐ.ಆರ್ ದಾಖಲಿಸಿ, ಸೂಕ್ತ ಕ್ರಮಕೈಗೊಳ್ಳಬೇಕು. ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳು ಜಾನುವಾರುಗಳ ರಕ್ಷಣೆಗೆ ಅಗತ್ಯ ಕ್ರಮವಹಿಸಬೇಕು. ಈ ಎಲ್ಲ ಕ್ರಮಗಳನ್ನು ನಿಯಮಾನುಸಾರ ಕೈಗೊಳ್ಳಲು ಟಾಸ್ಕ್ ಪೋರ್ಸ್ ಸಮಿತಿಯ ಅಧ್ಯಕ್ಷರಾಗಿರುವ ತಹಶೀಲ್ದಾರರು ಸಮನ್ವಯದಿಂದ ಕರ್ತವ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಆದೇಶಿಸಿದರು.


ಮಹಾನಗರ ಹಾಗೂ ನಗರ ಪಟ್ಟಣಗಳ ವ್ಯಾಪ್ತಿಯಲ್ಲಿ ರಸ್ತೆ ಹಾಗೂ ಇತರ ಸಾರ್ವಜನಿಕ ಸ್ಥಳಗಳಲ್ಲಿ ಮಾಲೀಕರಿದ್ದು ಬಿಟ್ಟಿರುವ ಹಾಗೂ ಮಾಲೀಕರಿಲ್ಲದ ಜಾನುವಾರುಗಳು ಕಂಡು ಬಂದಲ್ಲಿ ಅವುಗಳನ್ನು ಟೊಯಿಂಗ್ ಮಾಡುವ ಮೂಲಕ ಜಾನುವಾರುಗಳನ್ನು ಗೋಶಾಲೆಗಳಿಗೆ ಕಳುಹಿಸಬೇಕು. ಈ ಕಾರ್ಯವನ್ನು ಶೀಘ್ರದಲ್ಲಿ ಆರಂಭಿಸಬೇಕೆಂದು ಮತ್ತು ವಿವಿಧ ಮಾಧ್ಯಮಗಳ ಮೂಲಕ ಸಾರ್ವಜನಿಕರಲ್ಲಿ ಈ ಕುರಿತು ಜಾಗೃತಿ ಮೂಡಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.


ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ್ ಹಾಗೂ ಉಪ ಪೊಲೀಸ್ ಆಯುಕ್ತ ಮಹಾನಿಂಗ ನಂದಗಾಂವಿ ಮಾತನಾಡಿದರು.


ಉಪನಿರ್ದೇಶಕರ ಕಚೇರಿಯ ಮುಖ್ಯ ಪಶುವೈದ್ಯಾಧಿಕಾರಿ ಡಾ. ಲಿಂಗರಾಜ ಬಿ.ಎಸ್. ಅವರು ಸ್ವಾಗತಿಸಿ, ಸಭೆ ನಿರ್ವಹಿಸಿದರು.


ಸಭೆಯಲ್ಲಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಬಿ.ಎಸ್.ಮೂಗನೂರಮಠ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ, ಸಹಾಯಕ ಪೊಲೀಸ್ ಆಯುಕ್ತ ಪ್ರಶಾಂತ ಸಿದ್ದನಗೌಡರ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮುಖ್ಯ ವೈದ್ಯಾಧಿಕಾರಿ ಡಾ. ಶ್ರೀಧರ ದಂಡೆಪ್ಪನವರ, ಪೊಲೀಸ್ ಇನ್ಸೆಪ್ಟಕರ್‍ಗಳಾದ ದಯಾನಂದ ಶೆಗುಣಸಿ, ನಾಗಯ್ಯ ಕಾಡದೇವರಮಠ, ಎಲ್ಲ ತಾಲೂಕುಗಳ ತಹಶೀಲ್ದಾರರು, ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳು, ಜಿಲ್ಲೆಯ ವಿವಿಧ ನಗರ ಸ್ಥಳೀಯ ಸಂಸ್ಥೆಯ ಮುಖ್ಯಾಧಿಕಾರಿಗಳು ಉಪಸ್ಥಿತರಿದ್ದರು.



Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ